ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

'ʼಎಮ್ಮೆ ಥರ ಇದ್ದೀಯಾʼ': ಬಾಡಿ ಶೇಮಿಂಗ್‌ ಮಾಡಿ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ

Crime News: ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ. ಸಂಚಾರಿ ಮಹಿಳಾ ಪಿಎಸ್ಐ ನಯನಾ ಮೇಲೆ ಹಲ್ಲೆ ನಡೆಸಲಾಗಿದೆ.

ಕಾವೇರಿ ವಿಚಾರದಲ್ಲಿ ರೈತರ ಹಿತವೇ ಮುಖ್ಯ: ಸಿಎಂ ಡಿಕೆಶಿ

ಚಾಟ್‌ಜಿಪಿಟಿ ರಚಿತ ಚಿತ್ರ -

Ramesh Ballamoole
Ramesh Ballamoole Aug 16, 2026 6:23 PM

ಬೆಂಗಳೂರು, ಆ. 16: ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ (Bengaluru News). ಸಂಚಾರಿ ಮಹಿಳಾ ಪಿಎಸ್ಐ ನಯನಾ ಮೇಲೆ ಹಲ್ಲೆ ನಡೆಸಲಾಗಿದೆ. ಈ ಪ್ರಕರಣ ಸಂಬಂಧ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ವಿರುದ್ಧ ಪ್ರಕರಣ​ ದಾಖಲಾಗಿದೆ.

ಬೆಂಗಳೂರಿನ ಭಟ್ಟರಹಳ್ಳಿ ಜಂಕ್ಷನ್ ಬಳಿ ಆರೋಪಿಗಳು ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಜತೆ ಜಗಳವಾಡುತ್ತಿದ್ದರು. ಇದನ್ನು ಗಮನಿಸಿ ನಯನಾ ಪರಿಸ್ಥಿತಿ ನಿಭಾಯಿಸಲು ಧಾವಿಸಿದರು. ಈ ವೇಳೆ ಆರೋಪಿಗಳು ನಯನಾ ಅವರ ಮೇಲೆಯೇ ಹಲ್ಲೆ ನಡೆಸಿದ್ದಲ್ಲದೆ. ʼ'ಎಮ್ಮೆ ತರ ಇದ್ದೀಯಾ, ಹೊಟ್ಟೆಗೇನು ತಿಂತೀಯಾ?'ʼ ಎಂದು ಬಾಡಿ ಶೇಮಿಂಗ್​ ಮಾಡಿದ್ದಾರೆ.​

ಕ್ಯಾಮರಾದಲ್ಲಿ ಸೆರೆ

ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದಲ್ಲಿ ಆಧರಿಸಿ ನಾಲ್ವರು ಆರೋಪಿಗಳಾದ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ವಿರುದ್ಧ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಾರ್ವಜನಿಕ ರಸ್ತೆಯಲ್ಲಿ, ನೂರಾರು ಜನರ ಎದುರು ಅಧಿಕಾರಿಯೊಂದಿಗೆ ಹೀಗೆ ವರ್ತಿಸಿರುವ ಆರೋಪಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಜತೆಗೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸೆಕ್ಯೂರಿಟಿ ಗಾರ್ಡ್‌ನ ಕೊಂದು, 83 ಲಕ್ಷ ದೋಚಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಪೊಲೀಸರಿಗೇ ಚಾಕುವಿನಿಂದ ಇರಿದ ಇಬ್ಬರ ಬಂಧನ

ಕಾರವಾರ: ರೌಡಿಗಳ ಜಗಳ ಬಿಡಿಸಲು ಹೋದ ಪೊಲೀಸರೇ ದಾಳಿಗೊಳಗಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಇತ್ತೀಚೆಗೆ ನಡೆದಿತ್ತು. ಮುರುಡೇಶ್ವರದಲ್ಲಿ ರೌಡಿಶೀಟರ್ ರಾಜು ಮತ್ತು ಆತನ ಗ್ಯಾಂಗ್ ಮನೋಜ್ ಎಂಬ ಯುವಕನೊಂದಿಗೆ ತಡರಾತ್ರಿ ಜಗಳ ಮಾಡುತ್ತಿತ್ತು. ಗಲಾಟೆ ನೋಡಿದ ಸ್ಥಳೀಯರು ತಕ್ಷಣ ಮುರುಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಧಾವಿಸಿದ ಹವಾಲ್ದಾರ್ ಸಂಗಪ್ಪ ಮತ್ತು ಕಾನ್ಸ್‌ಟೇಬಲ್ ವಿನಾಯಕ್ ಶೆಟ್ಟಿ ಜಗಳ ಬಿಡಿಸಲು ಮುಂದಾಗಿದ್ದರು. ಈ ವೇಳೆ ಕೋಪಗೊಂಡ ರೌಡಿಶೀಟರ್ ರಾಜು ಮತ್ತು ಆತನ ಸಹಚರರು ಪೊಲೀಸರ ಮೇಲೆಯೇ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಹವಾಲ್ದಾರ್ ಸಂಗಪ್ಪ, ಕಾನ್ಸ್‌ಟೇಬಲ್ ವಿನಾಯಕ್ ಶೆಟ್ಟಿ ಅವರಿಗೂ ಗಾಯವಾಗಿದೆ. ಮನೋಜ್‌ಗೂ ಚಾಕು ತಗುಲಿತ್ತು.

ಕ್ರೈಂ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.