ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ನಟ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಶನಿವಾರ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಹರೀಶ್ ಅವರು ಬಹುಮುಖಿ ಪ್ರತಿಭೆಯಾಗಿದ್ದರು. ಅವರು ವೃತ್ತಿಜೀವನದ ಜತೆಗೆ ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದರಾಗಿ ಮತ್ತು ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಗುರುತಿಸಿಕೊಂಡಿದ್ದಾರೆ.
ಭಾರತೀಯ ಸಂಗೀತ ಲೋಕದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ; ಗಾಯನ ನಿಲ್ಲಿಸಿದ ʻಮೆಲೋಡಿ ಕ್ವೀನ್ʼ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.