Belagavi Shivam Associates Case: 4,500 ಕೋಟಿ ರೂ. ವಂಚನೆ ಪ್ರಕರಣ; ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ್ ಅರೆಸ್ಟ್
Belagavi News: ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಮೇಲೆ ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ್ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದರು. ಅಂದಾಜು 4,500 ಕೋಟಿ ಹಣ ವಂಚನೆ ಮಾಡಿದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಸುಮಾರು 8 ಗಂಟೆಳ ದಾಖಲೆ ಪರಿಶೀಲನೆ ನಡೆಸಲಾಗಿತ್ತು.
ಶಿವಂ ಅಸೋಸಿಯೇಟ್ ಮಾಲೀಕ ಶಿವಾನಂದ ನೀಲಣ್ಣನವರ್. -
ಬೆಳಗಾವಿ: 4,500 ಕೋಟಿ ರೂ. ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಗರದ ಶಿವಂ ಅಸೋಸಿಯೇಟ್ಸ್ (Shivam Associates) ಮಾಲೀಕ, ಉದ್ಯಮಿ ಶಿವಾನಂದ ನೀಲಣ್ಣವರ್ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ವಂಚನೆ ಆರೋಪಕ್ಕೆ (4,500 crore investment scam allegation) ಸಂಬಂಧಿಸಿ ಬೆಳಗಾವಿಯ ಮಾಳ ಮಾರುತಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಪ್ರಾಥಮಿಕ ತನಿಖೆಯಲ್ಲಿ ಶಿವಂ ಅಸೋಸಿಯೇಟ್ಸ್‌ನಿಂದ ಆರ್‌ಬಿಐ ನಿಯಮ ಉಲ್ಲಂಘನೆ ಕಂಡುಬಂದಿದೆ. ಠೇವಣಿದಾರರಿಂದ ಇನ್ನೂ ಯಾವುದೇ ದೂರು ಬಂದಿಲ್ಲ. ಮೌಖಿಕವಾಗಿ ಹೇಳಿದ್ದಾರೆ. ಮುಂದೆ ಆಗುವ ಅನಾಹುತ ತಡೆಯುವ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದು ಎಸಿ ಶ್ರವಣ್ ಕುಮಾರ್ ತಿಳಿಸಿದ್ದಾರೆ.
ಹೆಚ್ಚಿನ ಬಡ್ಡಿ ನೀಡುವುದಾಗಿ ಆಮಿಷ ಒಡ್ಡಿ ಮಾಜಿ ಸೈನಿಕರು ಸೇರಿ ಸಾರ್ವಜನಿಕರಿಂದ ಶಿವಾನಂದ ನೀಲಣ್ಣನವರ್ ಸಂಸ್ಥೆ ಹಣ ಸಂಗ್ರಹ ಮಾಡಿತ್ತು ಎನ್ನಲಾಗಿದೆ. ಆದರೆ ಹೂಡಿಕೆಯಾಗಿರುವ ಸಾವಿರಾರು ಕೋಟಿ ರೂಪಾಯಿ ಹಣ ದುರುಪಯೋಗ ಆಗಿರುವ ಸಂಶಯ ಹಿನ್ನೆಲೆ ಅಧಿಕಾರಿಗಳು, ಶಿವಂ ಅಸೋಸಿಯೇಟ್ಸ್ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಬೆಳಗಾವಿಯ ಶಿವಬಸವನಗರದ ನಿವಾಸದಲ್ಲಿ ಶಿವಾನಂದ ನೀಲಣ್ಣವರ್ ಅವರನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆಗಾಗಿ ಠಾಣೆಗೆ ಕರೆದೊಯ್ದಿದ್ದಾರೆ.
ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಮೇಲೆ ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ್ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದರು. ಅಂದಾಜು 4,500 ಕೋಟಿ ಹಣ ವಂಚನೆ ಮಾಡಿದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಸೂಚನೆಯ ಮೇರೆಗೆ ಶಿವಾನಂದ ನೀಲಣ್ಣನವರ್ಗೆ ಸೇರಿದ 2 ಕಚೇರಿ ಮೇಲೆ ದಾಳಿ ಮಾಡಲಾಗಿತ್ತು. ಸುಮಾರು 8 ಗಂಟೆಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಲಾಗಿತ್ತು.
ಮೂಲಗಳ ಪ್ರಕಾರ 45 ಸಾವಿರ ಜನರು, ಶಿವಂ ಶಿವಂ ಅಸೋಸಿಯೇಟ್ಸ್‌ನಲ್ಲಿ ಹಣ ಹೂಡಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪರಿಶೀಲನೆ ವೇಳೆ 400 ಕೋಟಿ ರೂ. ಮೌಲ್ಯದ ಬಾಂಡ್ ಪೇಪರ್ಗಳು, ಸ್ಟಾಕ್ಮಾರ್ಕೆಟ್, ರಿಯಲ್ ಎಸ್ಟೇಟ್, ರೆಸಾರ್ಟ್ಗಳಲ್ಲಿ ಹೂಡಿಕೆ ಮಾಡಿರುವುದು ಹಾಗೂ ಆನ್ಲೈನ್ನಲ್ಲಿ ಹಣದ ವ್ಯವಹಾರ ನಡೆದಿರುವ ಮಾಹಿತಿ ಸಿಕ್ಕಿದೆ.
Koppal Tractor accident: ಕೊಪ್ಪಳದಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಟ್ಯಾಂಕರ್ ಡಿಕ್ಕಿಯಾಗಿ 7 ಮಂದಿ ದುರ್ಮರಣ!
ಕರ್ನಾಟಕ ಸೇರಿ ಮಹಾರಾಷ್ಟ್ರ ಜನರು ಈ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿರುವ ಮಾಹಿತಿ ಲಭ್ಯವಾಗಿದ್ದು, ಈಗಾಗಲೇ 4 ಖಾತೆಗಳನ್ನು ಫ್ರೀಜ್ ಮಾಡಿ ಅಧಿಕಾರಿಗಳು ನಿಗಾವಹಿಸಿದ್ದಾರೆ.