ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Case: ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಎಫ್‌ಐಆರ್‌

Girish Mattannavar: ಗಿರೀಶ್ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಂದ್ರ ದಾಸ ಎಂಬವರ ದೂರಿನ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಎಫ್‌ಐಆರ್‌

-

ಹರೀಶ್‌ ಕೇರ ಹರೀಶ್‌ ಕೇರ Sep 2, 2025 10:26 AM

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಈಗಾಗಲೇ ಗಿರೀಶ್ ಮಟ್ಟಣ್ಣವರ್ (Girish Mattannavar), ಮಹೇಶ್ ತಿಮರೋಡಿ (Mahesh Shetty Thimarodi) ಸೇರಿದಂತೆ ಹಲವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಇದೀಗ ಗಿರೀಶ್ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಧರ್ಮಸ್ಥಳದ ಕುರಿತು ಯೂಟ್ಯೂಬ್ ಚಾನೆಲ್ ಸಂದರ್ಶನ ಒಂದರಲ್ಲಿ ಅಶ್ಲೀಲವಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗಿರೀಶ್ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಂದ್ರ ದಾಸ ಎಂಬವರ ದೂರಿನ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಗಿರೀಶ್‌ ಅಪಪ್ರಚಾರ ನಡೆಸುತ್ತಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನದ ವೇಳೆ ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟಟಿದ್ದಾರೆ ಎಂದು ಆರೋಪಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 296ರ ಅಡಿ ಪ್ರಕರಣ ದಾಖಲಾಗಿದೆ.

ಸುಳ್ಳು ಮಾಹಿತಿಗೂ ದೂರು

ರೌಡಿಶೀಟರ್‌ನನ್ನು ಮಾನವ ಹಕ್ಕು ಅಧಿಕಾರಿ ಎಂದು ಪೋಲಿಸರಿಗೆ ತಪ್ಪು ಮಾಹಿತಿ ನೀಡಿರುವ ಗಿರೀಶ್‌ ಮಟ್ಟಣ್ಣನವರ್ (Girish Mattannavar) ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಬೆಂಗಳೂರಿನ ಸುರೇಶ್‌ ಎಚ್‌.ಎಂ. ಎಂಬುವವರು ದೂರು ಸಲ್ಲಿಸಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ಗಿರೀಶ್ ಮಟ್ಟಣ್ಣನವರ್‌, ಹುಬ್ಬಳ್ಳಿ-ಧಾರವಾಡ ರೌಡಿ ಶೀಟರ್ ಮದನ್ ಬುಗಡಿಯನ್ನು ಮಾನವ ಹಕ್ಕು ಆಯೋಗದ ಅಧಿಕಾರಿ ಎಂದು ಪೋಲಿಸರಿಗೆ ಪರಿಚಯಿಸಿದ್ದು, ಇದು ಅತ್ಯಂತ ಗಂಭೀರ ವಿಷಯವಾಗಿದೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Girish Mattannavar: ರೌಡಿಶೀಟರ್‌ನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯಿಸಿದ ಗಿರೀಶ್ ಮಟ್ಟಣ್ಣನವರ್ ಮೇಲೆ ಬಿತ್ತು ಕೇಸ್