ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kalladka Prabhakara Bhat: ಪ್ರಚೋದನಕಾರಿ ಭಾಷಣ: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಮಂದಿ ವಿರುದ್ಧ ಎಫ್‌ಐಆರ್

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದಲ್ಲಿ, ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakara Bhat) ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 353(2) BNSರಡಿ ಪ್ರಕರಣ ದಾಖಲಾಗಿದೆ.

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಮಂದಿ ವಿರುದ್ಧ ಎಫ್‌ಐಆರ್

ಕಲ್ಲಡ್ಕ ಪ್ರಭಾಕರ ಭಟ್

ಹರೀಶ್‌ ಕೇರ ಹರೀಶ್‌ ಕೇರ Jun 2, 2025 11:43 AM

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ​ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakara Bhat) ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣದ (provocative speech) ಆರೋಪದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ಹಾಕಲಾಗಿದೆ. ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ (Suhas Shetty Murder Case) ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದಲ್ಲಿ ಮೇ 12ರಂದು ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 353(2) BNSರಡಿ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಬೆನ್ನಲ್ಲೇ ರಾತ್ರೋರಾತ್ರಿ ನೂತನ ಎಸ್‌ಪಿ ಹಿಂದೂ ಸಂಘಟನೆಗಳ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮಧ್ಯರಾತ್ರಿ ಮನೆಗಳಿಗೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಈ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡಿದ್ದ ಕಾರ್ಯಕರ್ತರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಯಾವುದೇ ಅನುಮತಿ ಪಡೆಯದೇ ಗುಂಪು ಕಟ್ಟಿಕೊಂಡು ಬಂದು ಕಡಬ ಠಾಣೆಯ ಮುಂದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಎಫ್ ಐ ಆರ್ ದಾಖಲಿಸಲಾಗಿದೆ.

ಪ್ರಮೋದ್ ರೈ ನಂದಗುರಿ, ತಿಲಕ್ ನಂದಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ್ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನುಂದಗುರಿ, ಶ್ರೇಯತ್, ಉಮೇಶ್ , ರಾಧಾಕೃಷ್ಣ, ಜಯಂತ್ ಸೇರಿದಂತೆ 15 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.‌

ಇದನ್ನೂ ಓದಿ: Kalladka Prabhakar Bhat: ಹಿಂದೂ ಹೆಣ್ಣು ಮಕ್ಕಳು ಇನ್ನುಮುಂದೆ ಬ್ಯಾಗ್‌ನಲ್ಲಿ ಚೂರಿ ಇಟ್ಕೊಂಡು ಓಡಾಡಿ: ಕಲ್ಲಡ್ಕ ಪ್ರಭಾಕರ ಭಟ್