MP Renukacharya: ದಾವಣಗೆರೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲು
ಮಾಜಿ ಸಚಿವ, ಬಿಜೆಪಿ ನಾಯಕ ರೇಣುಕಾಚಾರ್ಯ ವಿರುದ್ಧ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ (DJ) ಡಿಜೆ ಅನುಮತಿಗೆ ಆಗ್ರಹಿಸಿ ರಸ್ತೆತಡೆ ನಡೆಸಿ, ಧರಣಿ ನಡೆಸಿದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಾಗಿದೆ.

-

ದಾವಣಗೆರೆ: ಮಾಜಿ ಸಚಿವ, ಬಿಜೆಪಿ ನಾಯಕ ರೇಣುಕಾಚಾರ್ಯ ವಿರುದ್ಧ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗಣೇಶ (Renukacharya) ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿ ರಸ್ತೆತಡೆ ನಡೆಸಿ, ಧರಣಿ ನಡೆಸಿದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಆಗಸ್ಟ್ 23ರಂದು ದಾವಣಗೆರೆಯ ಜಯದೇವ ವೃತ್ತದಲ್ಲಿ ರೇಣುಕಾಚಾರ್ಯ ಅವರು ರಸ್ತೆ ತಡೆ ನಡೆಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಡಿಸಿ ಆದೇಶ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲಿಸಲಾಗಿದೆ.
ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಆಗಸ್ಟ್ 23ರಂದು ದಾವಣಗೆರೆಯ ಜಯದೇವ ವೃತ್ತದಲ್ಲಿ ರೇಣುಕಾಚಾರ್ಯ ರಸ್ತೆ ತಡೆ ನಡೆಸಿ ಧರಣಿ ನಡೆಸಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿ, ಡಿಸಿ ಆದೇಶ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಸೇರಿದ್ದಾಗ, ದಾವಣಗೆರೆ ಡಿಸಿ ಡಾ.ಗಂಗಾಧರ ಸ್ವಾಮಿ ಜಿ.ಎಂ. ಅವರು ಯಾವುದೇ ಕಾರಣಕ್ಕೂ ಡಿಜೆಗೆ ಅನುಮತಿ ಇಲ್ಲ ಎಂದು ಹೇಳಿದ್ದರು. ಹಾಗಾಗಿ ದಾವಣಗೆರೆ ಗಣೇಶ ಉತ್ಸವ ಸಮಿತಿ ಪದಾಧಿಕಾರಿಗಳು, ಡಿಜೆ ಮಾಲೀಕರು ಮನವಿ ಕೊಟ್ಟು ಡಿಜೆಗೆ ಅನುಮತಿ ಕೇಳಿದ್ದರು. ಆದರೆ, ಮನವಿ ಕೊಟ್ಟವರ ಮುಂದೆಯೇ ಮತ್ತೆ ಡಿಜೆಗೆ ಮನವಿ ಕೊಡಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ಪಡಿಸಿದ್ದರು.
ಡಿಜೆ ಮಾಲೀಕರು, ಗಣೇಶ ಆಯೋಜಕರು ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಸಭೆ ಸೇರಿ, ಡಿಜೆಗೆ ಅವಕಾಶ ಕೊಡುವಂತೆ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. . ಡಿಜೆಗೆ ಅವಕಾಶ ಕೊಡುವಂತೆ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಮತ್ತು ಎಸ್ಪಿ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು. ಈ ವೇಳೆ ಜಿಲ್ಲಾಡಳಿತ ಸ್ಪಂದಿಸದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಪ್ರತಿಭಟನಾನಿರತರು ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ರಸ್ತೆ ತಡೆ ಮಾಡಲು ಮುಂದಾಗಿದ್ದರು.
ಈ ಸುದ್ದಿಯನ್ನೂ ಓದಿ: DJ ban: ರಾಜ್ಯಾದ್ಯಂತ ಚೌತಿ, ಈದ್ ಹಬ್ಬಕ್ಕೆ ಡಿಜೆ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಜಿಲ್ಲಾಡಳಿತ ಜಗ್ಗದೇ ಇದ್ದಾಗ, ಅವಕಾಶ ಕೊಡದೇ ಇದ್ದರೂ ನಾವು ಡಿಜೆ ಬಳಕೆ ಮಾಡುತ್ತೇವೆ, ಏನ್ ಮಾಡ್ತೀರಾ, ಮಾಡಿ ಎಂದು ರೇಣುಕಾಚಾರ್ಯ ಜಿಲ್ಲಾಡಳಿತಕ್ಕೆ ಸವಾಲು ಹಾಕಿದ್ದರು. ಸರ್ಕಾರದ ಮಟ್ಟದಲ್ಲೇ ಡಿಜೆ ನಿಷೇಧಿಸಿದ್ದು, ಬಿಜೆಪಿ ನಾಯಕರು ಆಡಳಿತ ಪಕ್ಷದ ಮೇಲೆ ಮುಗಿಬಿದ್ದಿದ್ದಾರೆ. ಡಿಜೆಗೆ ಅವಕಾಶ ಕೊಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಅಲ್ಲದೇ ಹಗಲು ವೇಳೆ ಜನವಸತಿ ಪ್ರದೇಶದಲ್ಲಿ 55 ಡೆಸಿಬಲ್ ಮತ್ತು ರಾತ್ರಿ ವೇಳೆ 45 ಡೆಸಿಬಲ್ ಶಬ್ದ ಮಟ್ಟಕ್ಕೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.ದ