ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಡಿಸಿಎಂ ಡಿಕೆಶಿ, ನಟ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಅನಾಹುತ

ರಾಯಚೂರು ಜಿಲ್ಲೆ ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಫೌಂಡೇಷನ್ ವತಿಯಿಂದ ಭಾನುವಾರ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ನಟ ಕಿಚ್ಚ ಸುದೀಪ್‌ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು. ಈ ವೇಳೆ ವೇದಿಕೆ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ.

ಸಿಂಧನೂರಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ.

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ನಟ ಸುದೀಪ್ ಹಾಗೂ ಹಲವು ಸಚಿವರು, ಶಾಸಕರು ಭಾಗವಹಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಫೌಂಡೇಷನ್ ಆಯೋಜಿಸಿದ್ದ 151 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ವೇದಿಕೆ ಬಳಿ ಬೆಂಕಿ ಹೊತ್ತಿಕೊಂಡಿದ್ದು, ವೈಯರ್, ಸ್ಪೀಕರ್, ಬಟ್ಟೆಗಳಿಗೆ ಬೆಂಕಿ ಕಿಡಿ ತಾಕಿದೆ. ಡಿ.ಕೆ ಶಿವಕುಮಾರ್ ಹಾಗೂ ಗಣ್ಯರು ವೇದಿಕೆಯಿಂದ ತೆರಳುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಧ್ಯಮಗಳೊಂದಿಗೆ ಮಾತನಾಡಲು ಆಗಮಿಸುತ್ತಿದ್ದಂತೆ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ನವ ಜೋಡಿಗಳಿಗೆ ಶುಭ ಹಾರೈಸಿದ ಡಿಕೆಶಿ

ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ಶ್ರೀ ಬಸನಗೌಡ ಫೌಂಡೇಷನ್ ವತಿಯಿಂದ ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪಾಲ್ಗೊಂಡು ನವ ಜೋಡಿಗಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ 5001 ತಾಯಂದಿರಿಗೆ ಉಡಿ ತುಂಬಿ ಗೌರವಿಸಲಾಯಿತು. ಬಸನಗೌಡ ಬಾದರ್ಲಿ ಅವರು ವಿಧಾನ ಪರಿಷತ್ ಶಾಸಕರಾಗಿ ಒಂದು ವರ್ಷ ಪೂರ್ಣಗೊಳಿಸಿದ ಈ ಅವಧಿಯಲ್ಲಿ ಕೈಗೊಂಡ ಜನಪರ ಸಾಧನೆಯ ಕೈಪಿಡಿ ಕೂಡ ಅನಾವರಣಗೊಳಿಸಲಾಯಿತು.

ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಬಸನಗೌಡ ಬಾದರ್ಲಿ ಅವರ ಜನಪರ ಕೆಲಸಗಳಲ್ಲಿ ಅವರೊಂದಿಗೆ ನಾವಿದ್ದೇವೆ ಎಂದು ತಿಳಿಸಿದರು.

Tungabhadra Dam Crest Gates: ಮೇ 15ರಂದು ತುಂಗಭದ್ರಾ ಅಣೆಕಟ್ಟು ಹೊಸ ಗೇಟ್‌ಗಳ ಉದ್ಘಾಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಎನ್.ಎಸ್.ಬೋಸರಾಜು, ಈಶ್ವರ್ ಖಂಡ್ರೆ, ಮಧು ಬಂಗಾರಪ್ಪ, ಶಿವರಾಜ ತಂಗಡಗಿ, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ್, ಸಭಾಧ್ಯಕ್ಷರಾದ ಯು.ಟಿ.ಖಾದರ್, ಸಭಾಪತಿಗಳಾದ ಬಸವರಾಜ ಹೊರಟ್ಟಿ ಹಾಗೂ ನಟ ಸುದೀಪ್ ಅವರು ಉಪಸ್ಥಿತರಿದ್ದರು.