ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fire: ವಸತಿ ಕಟ್ಟಡದಲ್ಲಿ ಬೆಂಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮಹಾರಾಷ್ಟ್ರದ ಮುಂಬೈನ ಕಫೆ ಪರೇಡ್ ಪ್ರದೇಶದ ಕ್ಯಾಪ್ಟನ್ ಪ್ರಕಾಶ್ ಪೇಥೆ ಮಾರ್ಗದಲ್ಲಿರುವ ಶಿವಶಕ್ತಿ ನಗರದ ಚಾಲ್‌ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಓರ್ವ ಬಾಲಕ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಒಂದು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ (Fire on chawl) ಕಾಣಿಸಿಕೊಂಡು ಬಾಲಕನೋರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ (Maharastra) ಮುಂಬೈನ ಕಫೆ ಪರೇಡ್ (Mumbai's Cuffe Parade) ಪ್ರದೇಶದ ಚಾಲ್‌ನಲ್ಲಿ ಸೋಮವಾರ ನಡೆದಿದೆ. ಕ್ಯಾಪ್ಟನ್ ಪ್ರಕಾಶ್ ಪೇಥೆ ಮಾರ್ಗದಲ್ಲಿರುವ ಶಿವಶಕ್ತಿ ನಗರದ ಚಾಲ್‌ನಲ್ಲಿ ಸೋಮವಾರ ಬೆಳಗ್ಗೆ ಸುಮಾರು 4.15ಕ್ಕೆ ಈ ಘಟನೆ ನಡೆದಿದೆ. ಗಾಯಾಳುಗಳನ್ನು ತಕ್ಷಣ ಸೇಂಟ್ ಜಾರ್ಜ್ ಆಸ್ಪತ್ರೆಗೆ (St George's Hospital) ಕರೆದೊಯ್ಯಲಾಯಿತು. ಆದರೆ ಅಲ್ಲಿ 15 ವರ್ಷದ ಯಶ್ ವಿಠ್ಠಲ್ ಖೋಟ್ ಎಂಬ ಬಾಲಕ ಮೃತಪಟ್ಟಿದ್ದಾನೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (Brihanmumbai Municipal Corporation) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಿವಶಕ್ತಿ ನಗರದ ಚಾಲ್‌ನಲ್ಲಿ ಸೋಮವಾರ ಮುಂಜಾನೆ ನಡೆದ ಬೆಂಕಿ ದುರಂತದಲ್ಲಿ ದೇವೇಂದ್ರ ಚೌಧರಿ (30), ವಿರಾಜ್ ಖೋಟ್ (13) ಮತ್ತು ಸಂಗ್ರಾಮ್ ಕುರ್ನೆ (25) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಐಸಿಯುಗೆ ದಾಖಲಿಸಲಾಗಿದೆ.

ಚಾಲ್‌ನ ಮೊದಲ ಮಹಡಿಯಲ್ಲಿ ಸುಮಾರು 10x10 ಅಡಿ ಅಳತೆಯ ಪ್ರದೇಶದಲ್ಲಿ ವಿದ್ಯುತ್ ವೈರಿಂಗ್, ಅಳವಡಿಕೆಗಳು, ಮೂರು ವಿದ್ಯುತ್ ವಾಹನ ಬ್ಯಾಟರಿಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಇಡಲಾಗಿತ್ತು. ಇಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ವಾಹನವನ್ನು ಸ್ಥಳಕ್ಕೆ ಕಳುಹಿಸಲಾಯಿತು. ಸರಿಸುಮಾರು ಅರ್ಧ ಗಂಟೆಯ ಅವಧಿಯಲ್ಲಿ ಅಂದರೆ ಬೆಳಗ್ಗೆ 4.35 ರ ಹೊತ್ತಿಗೆ ಬೆಂಕಿಯನ್ನು ನಂದಿಸಲಾಗಿದೆ. ಈ ಬೆಂಕಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಇದನ್ನೂ ಓದಿ: Chinese Firecrackers: ಗ್ರಾಹಕರೇ ಎಚ್ಚರ; ಮಾರ್ಕೆಟ್‌ಗೆ ಬರ್ತಿದೆ ಚೈನಾ ಪಟಾಕಿ! ಖರೀದಿಸಿದ್ರೆ ಗೋವಿಂದಾ..

ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಬೆಂಕಿ

ಇನ್ನೊಂದು ಪ್ರಕರಣದಲ್ಲಿ ಸೋಮವಾರ ಮುಂಜಾನೆ ಗುಜರಾತ್‌ನ ದೇವಭೂಮಿ ದ್ವಾರಕಾದಲ್ಲಿರುವ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದರು. ಕೆಲ ಕಾಲ ಪ್ರಯತ್ನದ ಬಳಿಕ ಬೆಂಕಿಯನ್ನು ನಂದಿಸಲಾಗಿದೆ. ಹೆಚ್ಚಿನ ಅಪಾಯವೇನೂ ಸಂಭವಿಸಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Viral News: ಆಧ್ಯಾತ್ಮಿಕ ಕೋರ್ಸ್‌ಗೆ ಸೇರಿದ್ದ ಮಹಿಳೆ ಕಳೆದುಕೊಂಡಿದ್ದು ಬರೋಬ್ಬರಿ 3 ಕೋಟಿ ರೂ.!

ಪೀಠೋಪಕರಣಗಳ ಗೋದಾಮಿನಲ್ಲಿ ಬೆಂಕಿ

ಮತ್ತೊಂದು ಪ್ರಕರಣದಲ್ಲಿ ಮಧ್ಯಪ್ರದೇಶದ ಕಟ್ನಿಯಲ್ಲಿರುವ ಪೀಠೋಪಕರಣಗಳ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಬೆಂಕಿ ಅವಘಡದಿಂದ ಸುಮಾರು 4 ಲಕ್ಷ ರೂ. ಗೂ ಹೆಚ್ಚು ಮೌಲ್ಯದ ಸರಕುಗಳು ನಾಶವಾಗಿವೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಮೋದ್ ಚತುರ್ವೇದಿ ತಿಳಿಸಿದ್ದಾರೆ.

ಒಂದು ಪೀಠೋಪಕರಣ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಇದು ಯಾಕಾಯಿತು ಎನ್ನುವುದು ತಿಳಿದುಬಂದಿಲ್ಲ. 4 ಲಕ್ಷ ರೂ. ಗೂ ಹೆಚ್ಚು ಮೌಲ್ಯದ ಸರಕುಗಳು ನಾಶವಾಗಿವೆ. ನಿರಂತರ ಪ್ರಯತ್ನದ ಬಳಿಕ ಬೆಂಕಿಯನ್ನು ನಂದಿಸಲಾಯಿತು ಎಂದು ಮಾಲೀಕರು ಹೇಳಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author