ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ವೇಳೆ ಕಟ್ಟಡದ ಮೊದಲ ಮಹಡಿಯ ಬಾಲ್ಕನಿ ತಡೆ ಗೋಡೆ ಕುಸಿದು 16 ವರ್ಷದ ವಿದ್ಯಾರ್ಥಿಯೊಬ್ಬನ ಮೆದುಳು ನಿಷ್ಕ್ರಿಯವಾಗಿದ್ದು, ನಾಲ್ವರು ಗಾಯಗೊಂಡಿರುವ ಘಟನೆ (Mangaluru Wall Collapse) ನಗರದ ಎಮ್ಮೆಕೆರೆಯಲ್ಲಿ ಶನಿವಾರ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಹಳೆಅಂಗಡಿ ನಿವಾಸಿ ಮೊಹಮ್ಮದ್ ಶಮಾಜ್ (16) ಎಂದು ಗುರುತಿಸಲಾಗಿದ್ದು, ಅವರು ಕಾಲೇಜು ವಿದ್ಯಾರ್ಥಿಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಕಾರ್ಯಕ್ರಮ ನಡೆಯುತ್ತಿದ್ದಾಗ ಶಮಾಜ್ ನೆಲ ಮಹಡಿಯಲ್ಲಿ ನಿಂತಿದ್ದ ವೇಳೆ ಮೇಲಿನಿಂದ ಬಾಲ್ಕನಿ ಗೋಡೆಯ ಒಂದು ಭಾಗ ಅವರ ಮೇಲೆ ಬಿದ್ದಿದೆ ಎನ್ನಲಾಗಿದೆ.
ಘಟನೆ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದು, ಕಾರ್ಯಕ್ರಮಕ್ಕಾಗಿ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೇರಿದ್ದರು. ಹಾಲ್‌ನಲ್ಲಿ ಜನದಟ್ಟಣೆ ಹೆಚ್ಚಾದ ಕಾರಣ ಹಲವು ವಿದ್ಯಾರ್ಥಿಗಳು ಹೊರಗಿನ ಕಾರಿಡಾರ್‌ನಲ್ಲಿ ನಿಂತಿದ್ದರು.
ಈ ವೇಳೆ ಕೆಲ ವಿದ್ಯಾರ್ಥಿಗಳು ದುರ್ಬಲವಾಗಿದ್ದ ಗೋಡೆಗೆ ಒರಗಿ ನಿಂತಿದ್ದರು ಎನ್ನಲಾಗಿದೆ. ವಿದ್ಯಾರ್ಥಿಗಳ ಭಾರ ತಾಳದೆ ಗೋಡೆ ಕುಸಿದಿರುವ ಶಂಕೆ ವ್ಯಕ್ತವಾಗಿದೆ.