ಮೂವರು ಮಹಿಳೆಯರು ಸೇರಿ ನಾಲ್ವರು ಬಂಧನ
ನಗರದ ಕರೇಕಲ್ಲಹಳ್ಳಿ ಸಮೀಪದ ಇಡಗೂರು ಮುಖ್ಯರಸ್ತೆ ಬಳಿಯ ಹಳೆಯ ಮನೆಯೊಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ರೇಷ್ಮಾ (41), ಆಯೇಷಾ (25), ಕವಿತಾಬಾಯಿ (31) ಹಾಗೂ ಶಶಿಕುಮಾರ್ (23) ಎಂದು ಗುರುತಿಸಲಾಗಿದೆ.
-
ಗೌರಿಬಿದನೂರು: ನಗರದ ಕರೇಕಲ್ಲಹಳ್ಳಿ ಸಮೀಪದ ಇಡಗೂರು ಮುಖ್ಯರಸ್ತೆ ಬಳಿಯ ಹಳೆಯ ಮನೆಯೊಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ರೇಷ್ಮಾ (41), ಆಯೇಷಾ (25), ಕವಿತಾಬಾಯಿ (31) ಹಾಗೂ ಶಶಿಕುಮಾರ್ (23) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: Gauribidanur News: ಸ್ವಯಂ ತೆರವುಗೊಳಿಸದಿದ್ದರೆ ಮುನ್ಸೂಚನೆ ಇಲ್ಲದೆ ನಗರಸಭೆಯಿಂದ ಕಾರ್ಯಾಚರಣೆ: ಪೌರಾಯುಕ್ತ ರಮೇಶ್
ಸ್ಥಳೀಯರಿಂದ ಬಂದ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹಳೆಯ ಮನೆ ಯೊಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ನಾಲ್ವರನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರ ಪೈಕಿ ರೇಷ್ಮಾ ಎಂಬವರು ಸುಮಾರು ಒಂದು ವರ್ಷದ ಹಿಂದೆ ಮನೆಯನ್ನು ಬಾಡಿಗೆಗೆ ಪಡೆದಿದ್ದರು ಎನ್ನಲಾಗಿದೆ. ಈ ಮನೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.