ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದೆಹಲಿಯಲ್ಲಿ ಕುಸಿದ ನಾಲ್ಕು ಅಂತಸ್ತಿನ ಕಟ್ಟಡ: ಗರ್ಭಿಣಿ, ಮಕ್ಕಳು ಸೇರಿ 5 ಮಂದಿ ಸಾವು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಗರ್ಭಿಣಿ, ಮಕ್ಕಳು ಸೇರಿ 5 ಮಂದಿ ಸಾವನ್ನಪ್ಪಿದ್ದಾರೆ. ಒಳಗಡೆ ಹಲವಾರು ಮಂದಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಈಶಾನ್ಯ ದೆಹಲಿಯ ಸೀಮಾಪುರಿಯಲ್ಲಿ ಈ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಸಂಗ್ರಹ ಚಿತ್ರ

ದೆಹಲಿ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು (Delhi building collapse) ಐದು ಮಂದಿ ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ (delhi) ನಡೆದಿದೆ. ಈಶಾನ್ಯ ದೆಹಲಿಯ ಸೀಮಾಪುರಿಯಲ್ಲಿ( delhi seemapuri) ಬುಧವಾರ ಮಧ್ಯಾಹ್ನ ಕಟ್ಟಡ ಕುಸಿದು ಗರ್ಭಿಣಿ (pregnant), ಮಕ್ಕಳು ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ. ಒಂದಿಬ್ಬರು ಒಳಗಡೆ ಸಿಲುಕಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆಯನ್ನು ಗುರುವಾರ ಕೂಡ ಮುಂದುವರಿಸಲಾಗಿದೆ. ಕಟ್ಟಡದ ಮಾಲೀಕ ತಲೆ ಮರೆಸಿಕೊಂಡಿದ್ದು, ಅವನಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಶಾನ್ಯ ದೆಹಲಿಯ ಸೀಮಾಪುರಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಕ್ಕಳು, ಗರ್ಭಿಣಿ ಮಹಿಳೆ ಸೇರಿ ಐವರು ಮೃತಪಟ್ಟಿದ್ದಾರೆ. ಬುಧವಾರ ಈ ದುರಂತ ಸಂಭವಿಸಿದೆ. ಗುರುವಾರ ಎರಡು ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿದ ಮತ್ತಿನಲ್ಲಿ ಭಾರೀ ಅನಾಹುತ; ಪೆಟ್ರೋಲ್ ಬಂಕ್‌ಗೆ ಜಾಗ್ವಾರ್ ಡಿಕ್ಕಿ, ಹೊತ್ತಿ ಉರಿದ ಕಾರು

ರಕ್ಷಣಾ ಮತ್ತು ಶೋಧ ಕಾರ್ಯಗಳನ್ನು ಮುಂದುವರಿಸಲಾಗಿದೆ. ಸ್ಥಳೀಯರ ಪ್ರಕಾರ ಇನ್ನೂ ಒಂದಿಬ್ಬರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ. ಕಟ್ಟಡದ ಮಾಲೀಕ ಅನ್ವರ್ ತಲೆಮರೆಸಿಕೊಂಡಿದ್ದು ಆತನನ್ನು ಬಂಧಿಸಲು ಪೊಲೀಸ್ ತಂಡಗಳು ಕಾರ್ಯನಿರ್ವಹಿಸುತ್ತಿವೆ. ದುರಂತ ಸಂಭವಿಸಿದ ಸಮಯದಲ್ಲಿ ಇಬ್ಬರು ನಿವಾಸಿಗಳು ಕಟ್ಟಡದಲ್ಲಿ ಇರಲಿಲ್ಲ. ಇದರಲ್ಲಿ ಒಬ್ಬ ಮಾಲೀಕನಾಗಿದ್ದನು ಎಂದು ಶಾಹ್ದಾರಾ ಪೊಲೀಸ್ ಉಪ ಆಯುಕ್ತ ರಾಜೇಂದ್ರ ಪ್ರಸಾದ್ ಮೀನಾ ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರಾಗಿದ್ದಾರೆ. ಇವರು ಇದೇ ಕಟ್ಟಡದಲ್ಲಿದ್ದ ನಿವಾಸಿಗಳಾಗಿದ್ದರು. ಒಬ್ಬ ಮಹಿಳೆಯ ವಯಸ್ಸು 60 ವರ್ಷಗಳಾಗಿದ್ದರೆ, ಇನ್ನೊಬ್ಬರು 35 ವರ್ಷದವರಾಗಿದ್ದರು. ಹಲವು ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿವೆ. ಹೆಚ್ಚಿನ ಮಂದಿ ಸಿಲುಕಿಕೊಂಡಿದ್ದಾರೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ ಎಂದರು.

ಮೃತ ಮಹಿಳೆಯರ ಗುರುತು ಪತ್ತೆ ಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ಅದರ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು. ಬುಧವಾರ ರಾತ್ರಿ ಪತ್ತೆಯಾದ ಮೂರು ಮೃತದೇಹಗಳಲ್ಲಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ 21 ವರ್ಷದ ಗುಲಾಫ್ಸಾ ಕೂಡ ಸೇರಿದ್ದರು ಎಂದು ಅವರು ಹೇಳಿದರು.

ಸೀಮಾಪುರಿಯ ಕಿರಿದಾದ ಗಲ್ಲಿಯಲ್ಲಿರುವ ಈ ಕಟ್ಟಡ ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಕುಸಿದಿದೆ. ಈದ್ಗಾ ಮೈದಾನದ ಪಕ್ಕದಲ್ಲಿದ್ದ ಕಟ್ಟಡಕ್ಕೆ ಪ್ರವೇಶಿಸಲು ಇದ್ದ ಏಕೈಕ ಮಾರ್ಗದಲ್ಲಿನ ಅವಶೇಷಗಳನ್ನು ತೆರವುಗೊಳಿಸಲು ಅಗ್ನಿಶಾಮಕ ಸಿಬ್ಬಂದಿಗೆ ಸಹಾಯ ಮಾಡಲು ಸ್ಥಳೀಯರು ಕೂಡ ಧಾವಿಸಿದ್ದಾರೆ. ಸುಮಾರು 25 ಚದರ ಗಜಗಳಷ್ಟು ವಿಸ್ತೀರ್ಣದಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ಪಕ್ಕದಲ್ಲಿ ಇನ್ನೊಂದು ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು, ಇದರ ಕಾರ್ಯದಿಂದ ಈ ಕಟ್ಟಡ ಕುಸಿದಿರಬಹುದು ಎಂದು ಶಂಕಿಸಲಾಗಿದೆ.

ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾರ್ಯ ಕಾನೂನುಬಾಹಿರವಾಗಿದೆ. ಈ ಬಗ್ಗೆ ಹಿಂದೆಯೇ ದೂರು ದಾಖಲಾಗಿತ್ತು ಎಂದು ಸ್ಥಳೀಯರು ಈಶಾನ್ಯ ದೆಹಲಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅಜಯ್ ಕುಮಾರ್ ಅವರಿಗೆ ತಿಳಿಸಿದ್ದಾರೆ.

ಹೊಸ ಕಟ್ಟಡದ ಅನಧಿಕೃತ ಭಾಗವನ್ನು ತೆರವುಗೊಳಿಸಲು ಕೆಲವು ಕಾರ್ಮಿಕರನ್ನು ನಿಯೋಜಿಸಲಾಗಿತ್ತು.ಕಳೆದ ಮೂರು-ನಾಲ್ಕು ದಿನಗಳಿಂದ ಕೆಲಸವಾಗುತ್ತಿದ್ದು, ಇದರಿಂದ ಭೂಮಿಯಲ್ಲಿ ಕಂಪನ ಉಂಟಾಗುತ್ತಿತ್ತು. ಇದರಿಂದಲೇ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ. ಎನ್ನಲಾಗಿದೆ. ಆದರೆ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಅಜಯ್ ಕುಮಾರ್ ತಿಳಿಸಿದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಲವು ತಂಡಗಳು ಸೇರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಚುನಾವಣಾ ಆಯೋಗದ ವಿರುದ್ಧ ರಾಜಕೀಯ ಪ್ರೇರಿತ ಅಪಪ್ರಚಾರ ಸಲ್ಲದು

ಅವಶೇಷಗಳನ್ನು ಒಡೆಯಲು ಮತ್ತು ತೆರವುಗೊಳಿಸಲು ಕ್ರೇನ್‌, ಅರ್ಥ್ ಮೂವರ್‌ಗಳನ್ನು ಬಳಸಲಾಗುತ್ತಿದೆ. ತುರ್ತು ವೈದ್ಯಕೀಯ ನೆರವು ನೀಡಲು ಆಂಬ್ಯುಲೆನ್ಸ್‌ಗಳನ್ನು ವೈದ್ಯಕೀಯ ತಂಡಗಳೊಂದಿಗೆ ನಿಯೋಜಿಸಲಾಗಿದೆ. ಇದರೊಂದಿಗೆ ಜನದಟ್ಟಣೆಯನ್ನು ನಿಯಂತ್ರಿಸಲು ದೆಹಲಿ ಪೊಲೀಸರೊಂದಿಗೆ ಸಶಸ್ತ್ರ ಸೀಮಾ ಬಲ್ ಸಿಬ್ಬಂದಿ ಮತ್ತು ನಾಗರಿಕ ರಕ್ಷಣಾ ಸ್ವಯಂ ಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author