Fraud Case: ʼಮಾಣಿಕ್ಯʼ ಸಿನಿಮಾ ನಿರ್ದೇಶಕ ಎಂಎನ್ ಕುಮಾರ್ ಪೊಲೀಸ್ ವಶಕ್ಕೆ
ಖ್ಯಾತ ನಟ ಜಗ್ಗೇಶ್ ಅವರು ನಿರ್ಮಾಪಕ ಎಂಎನ್ ಸುರೇಶ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು ಎನ್ನಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಗ್ಗೇಶ್ ಅವರು ಎಂಎನ್ ಕುಮಾರ್ ಅವರ ಮೇಲೆ ಯಾವ ಕಾರಣಕ್ಕೆ ದೂರು ನೀಡಿದ್ದರು ಎಂಬುದು ಸ್ಪಷ್ಟವಾಗಿಲ್ಲ.

ಎಂ ಎನ್ ಕುಮಾರ್

ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ʼಗೋಲ್ಡ್ ಲೇಡಿʼ ರನ್ಯಾ ರಾವ್ ನಟನೆಯ ‘ಮಾಣಿಕ್ಯ’ ಸೇರಿದಂತೆ ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ (producer) ಮಾಡಿದ್ದ ಎಂ ಎನ್ ಕುಮಾರ್ (MN Kumar) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 1.25 ಕೋಟಿ ರೂಪಾಯಿ ಹಣ ವಂಚನೆ ಪ್ರಕರಣಕ್ಕೆ (Fraud case) ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಎಂಎನ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಖ್ಯಾತ ನಟ ಜಗ್ಗೇಶ್ ಅವರು ನಿರ್ಮಾಪಕ ಎಂಎನ್ ಸುರೇಶ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು ಎನ್ನಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಗ್ಗೇಶ್ ಅವರು ಎಂಎನ್ ಕುಮಾರ್ ಅವರ ಮೇಲೆ ಯಾವ ಕಾರಣಕ್ಕೆ ದೂರು ನೀಡಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಸಾಲದ ಹಣವೋ ಅಥವಾ ಸಂಭಾವಣೆ ಬಾಕಿ ಮೊತ್ತವೇ ಎಂಬ ಬಗ್ಗೆ ಇನ್ನಷ್ಟು ವಿವರಗಳು ತಿಳಿಯಬೇಕಿದೆ.
ಎಂಎನ್ ಕುಮಾರ್ ಅವರು ಈ ಹಿಂದೆ ನಟ ಸುದೀಪ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಅಡ್ವಾನ್ಸ್ ಪಡೆದಿದ್ದ ಸುದೀಪ್ ಸಿನಿಮಾಕ್ಕೆ ಡೇಟ್ಸ್ ನೀಡಿಲ್ಲ, ಅಡ್ವಾನ್ಸ್ ಹಣವನ್ನೂ ಸಹ ವಾಪಸ್ ಮಾಡಿಲ್ಲ ಎಂದು ಆರೋಪ ಮಾಡಿದ್ದರು. ಫಿಲಂ ಚೇಂಬರ್ ಎದುರು ಸುದೀಪ್ ವಿರುದ್ಧ ಪ್ರತಿಭಟನೆ ಸಹ ಮಾಡಿದ್ದರು ಎಂಎನ್ ಸುರೇಶ್. ಆ ಬಳಿಕ ನಟ ಸುದೀಪ್ ಅವರು ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ವಿಚಾರಣೆ ಚಾಲ್ತಿಯಲ್ಲಿದೆ.
ಇಬ್ಬರು ಮಕ್ಕಳು, ಪತ್ನಿಯನ್ನು ಕೊಂದು ಜೆಸ್ಕಾಂ ಅಧಿಕಾರಿ ಆತ್ಮಹತ್ಯೆ
ಕಲಬುರಗಿ: ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು (Mass Murder case) ವ್ಯಕ್ತಿ ಆತ್ಮಹತ್ಯೆ (Self harming) ಮಾಡಿಕೊಂಡ ಘಟನೆ ಕಲಬುರಗಿ (Kalaburagi news) ನಗರದ ಹಳೆ ಜೇವರ್ಗಿ ರಸ್ತೆಯ ಗಾಬರಿ ಲೇಔಟ್ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಪತ್ನಿ ಶ್ರುತಿ (35) ಮಕ್ಕಳಾದ ಮನೀಶ್ (9), ಮೂರು ತಿಂಗಳ ಮಗು ಅನೀಶ್‌ನನ್ನು ಕೊಲೆ ಮಾಡಿ ಸಂತೋಷ್ (45) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೆಸ್ಕಾಂನಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಸಂತೋಷ್ ಕಾರ್ಯನಿರ್ವಹಿಸುತ್ತಿದ್ದ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಸಂತೋಷ್ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಸಂತೋಷ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇತ್ತೀಚೆಗೆ ಇಂಥ ಘಟನೆಗಳು ಮರುಕಳಿಸುತ್ತಿವೆ. ಚಿಕ್ಕಮಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿದ್ದ ವ್ಯಕ್ತಿ ಹೆಂಡತಿ ದೂರವಾದ ಸಿಟ್ಟಿನಿಂದ ಅತ್ತೆ, ಮಗಳು, ನಾದಿನಿಯನ್ನು ಗುಂಡು ಹಾರಿಸಿ ಕೊಂದು ತಾನೂ ಅತ್ಮಹತ್ಯೆ ಮಾಡಿಕೊಂಡಿದ್ದ. ಕೊಡಗು ಜಿಲ್ಲೆಯಲ್ಲಿ ಹೆಂಡತಿಗೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ನಾಲ್ವರನ್ನು ಕೊಚ್ಚಿ ಕೊಂದು ಪತಿಯೊಬ್ಬ ಪರಾರಿಯಾಗಿದ್ದ ಘಟನೆ ನಡೆದಿತ್ತು. ಬಳಿಕ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಇದನ್ನೂ ಓದಿ: ನರೇಗಾ ಅನುದಾನ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಶಮಿ ಕುಟುಂಬಸ್ಥರು..!