Self Harming: ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ
ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಳಗಾವಿ: ಬೆಳಗಾವಿಯಲ್ಲಿ (Belagavi news) ಘೋರ ಘಟನೆ ನಡೆದಿದೆ. ತಮ್ಮ ಮನೆಯಲ್ಲಿಯೇ ನಡೆಯುತ್ತಿರುವ ಮದುವೆಗೆ ತೆರಳಲೂ ಮೇಲಧಿಕಾರಿಗಳು ರಜೆ (Leave) ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ಕೆಎಸ್ಆರ್ಟಿಸಿ ಚಾಲಕನೊಬ್ಬ (KSRTC driver) ಬಸ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ಇಲ್ಲಿನ ಹಳೆ ಗಾಂಧಿನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ (47) ಸಾವಿಗೆ ಶರಣಾದವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು.
ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.
ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್‌ಸ್ಪಕ್ಟರ್ ಲೋಕಾಯುಕ್ತ ದಾಳಿಗೆ ಹೆದರಿ ಪರಾರಿ
ಬೆಂಗಳೂರು: ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್ಪೆಕ್ಟರ್ಗೆ ರಿಯಾಲ್ಟಿ ಡೀಲ್ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ (Lokayukta) ಶಾಕ್ ನೀಡಿದ್ದು ಬಂಧನ ಭೀತಿ ಹಿನ್ನೆಲೆಯಲ್ಲಿ ಪರಾರಿಯಾಗಿರುವ ಘಟನೆ ನಡೆದಿದೆ. ಸುಳ್ಳು ಕೇಸ್ ದಾಖಲಿಸಿ 4 ಕೋಟಿ ರೂ. ಮೌಲ್ಯದ ಮನೆ ಮಾರಾಟಕ್ಕೆ ನಾಗರಬಾವಿಯ (Naagarabhaavi) ಖಾಸಗಿ ಹೋಟೆಲ್ನಲ್ಲಿ ಡೀಲ್ ನಡೆದಿತ್ತು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta raid) ಮಾಡಿದ್ದಾರೆ. ವಿಚಾರ ತಿಳಿದು ಮನೆಯಲ್ಲೇ ಪೊಲೀಸ್ ಜೀಪ್ ಬಿಟ್ಟು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿ ಆಗಿದ್ದಾರೆ. ನಿನ್ನೆ ಸಂಜೆ 5 ಗಂಟೆಯಿಂದ ಮುಂಜಾನೆ 3 ಗಂಟೆವರೆಗೆ ಕಾರ್ಯಾಚರಣೆ ಮಾಡಲಾಗಿದೆ.
ಸಿವಿಲ್ ಕಂಟ್ರ್ಯಾಕ್ಟರ್ ಚನ್ನೇಗೌಡ ಪತ್ನಿ ಅನುಷಾ ಎಂಬವರಿಗೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪಿಐ ಕುಮಾರ್ನಿಂದ ಕಿರುಕುಳ ಆರೋಪ ಕೇಳಿಬಂದಿದೆ. ಸುಳ್ಳು ಕೇಸ್ ದಾಖಲಿಸಿ ಚನ್ನೇಗೌಡಗೆ ಸೇರಿದ 4 ಕೋಟಿ ರೂ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದು, ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಪಿಐ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಮಾಡಲಾಗಿದೆ.
ಈ ಹಿಂದೆ ದಾಖಲಾಗಿದ್ದ ಪ್ರಕರಣಕ್ಕೆ ಬಿ ರಿಪೋರ್ಟ್ ಹಾಕುತ್ತೇನೆ. ಮನೆ ಬರೆದುಕೊಡಿ ಎಂದು ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡಿದ್ದು, ಈ ಹಿಂದೆ ಚನ್ನೇಗೌಡ ಮನೆಗೆ ಕೆಲ ಪುಂಡರನ್ನು ನುಗ್ಗಿಸಿ ದಾಂಧಲೆ ಮಾಡಿಸಿದ್ದಾರೆ. ಈ ವೇಳೆ ಸಿವಿಲ್ ಕಂಟ್ರ್ಯಾಕ್ಟರ್ ಚನ್ನೇಗೌಡ ವಿಡಿಯೋ ಮಾಡಿಕೊಂಡಿದ್ದರು. ಚನ್ನೇಗೌಡರನ್ನು ಠಾಣೆಗೆ ಕರೆಸಿ ಒತ್ತಾಯಪೂರ್ವಕವಾಗಿ ಅಗ್ರಿಮೆಂಟ್ಗೆ ಸಹಿ ಮಾಡಿಸಿ, ಆನ್ಲೈನ್ ಮೂಲಕ 4 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.
ಸೋದರ ಸಂಬಂಧಿ ಗವಿಗೌಡ, ದಿವ್ಯಾ ಹೆಸರಿಗೆ ಮನೆ ನೋಂದಣಿಗೆ ಒತ್ತಡ ಹೇರಿದ್ದು, ನಿನ್ನೆ ಸಂಜೆ ಅಗ್ರಿಮೆಂಟ್ಗೆ ಸಹಿ ಹಾಕಿಸಲು ನಾಗರಬಾವಿಯ ಖಾಸಗಿ ಹೋಟೆಲ್ಗೆ ಚನ್ನೇಗೌಡ ಪತ್ನಿ ಅನುಷಾರನ್ನು ಕರೆಸಿದ್ದರು. ಈ ವೇಳೆ ಲೋಕಾ ದಾಳಿ ವಿಚಾರ ತಿಳಿಯುತ್ತಿದ್ದಂತೆ ಕುಮಾರ್ ಪರಾರಿ ಆಗಿದ್ದಾರೆ. ಆದರೆ, ಇಬ್ಬರು ಕಾನ್ಸ್ಟೇಬಲ್ಗಳು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಕಾನ್ಸ್ಟೇಬಲ್ಗಳಾದ ಉಮೇಶ್, ಅನಂತ್ ಸೋಮಶೇಖರ್ ಆರಾಧ್ಯ, ಖರೀದಿದಾರ ಗವಿಗೌಡ, ದಿನೇಶ್ ಸೇರಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: Girl death: ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಸೇವಿಸಿ ಬಾಲಕಿ ಸಾವು, ಪೋಷಕರ ನಿರ್ಲಕ್ಷ್ಯದಿಂದ ಅನಾಹುತ