Physical Abuse: ಭಾವಿ ಪತಿಯ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
ಮದುವೆಯಾಗಲಿರುವ ಹುಡಗನ ಮುಂದೆಯೇ ಹುಡುಗಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಬ್ಬರ ನಿಶ್ಚಿತಾರ್ಥ ನಡೆದಿತ್ತು, ಇನ್ನೇನು ಕೆಲವೇ ದಿನಗಳಲ್ಲಿ ಇಬ್ಬರ ಮದುವೆ ಕೂಡ ನಡೆಯುವುದಿತ್ತು. ಆದರೆ ಕಾಮುಕರು ಹುಡಗನ ಮುಂದೆಯೇ ಆಕೆಯ ಮೇಲೆ ಮೃಗಗಳಂತೆ ಎರಗಿದ್ದಾರೆ.


ಲಖನೌ: ಮದುವೆಯಾಗಲಿರುವ ಹುಡಗನ ಮುಂದೆಯೇ ಹುಡುಗಿಯನ್ನು ಸಾಮೂಹಿಕ ಅತ್ಯಾಚಾರ (Physical Abuse) ನಡೆಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಬ್ಬರ ನಿಶ್ಚಿತಾರ್ಥ ನಡೆದಿತ್ತು, ಇನ್ನೇನು ಕೆಲವೇ ದಿನಗಳಲ್ಲಿ ಇಬ್ಬರ ಮದುವೆ ಕೂಡ ನಡೆಯುವುದಿತ್ತು. ಆದರೆ ಕಾಮುಕರು ಹುಡಗನ ಮುಂದೆಯೇ ಆಕೆಯ ಮೇಲೆ ಮೃಗಗಳಂತೆ ಎರಗಿದ್ದಾರೆ. ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ ಈ ಘಟನೆ ನಡೆದಿದ್ದು, 8 ಮಂದಿ ಕಾಮುಕರು ಈ ಕೃತ್ಯ ನಡೆಸಿದ್ದಾರೆ. ವರನನ್ನು ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಏಪ್ರಿಲ್ 10 ರಂದು ಮಧ್ಯಾಹ್ನ ಸುಮಾರು 2.30ರ ಈ ಘಟನೆ ನಡೆದಿದ್ದು, ಯುವಕ ಹಾಗೂ ಯುವತಿ ರಸ್ತೆ ಬಳಿ ಕಾಲುವೆಯ ಹತ್ತಿರ ನಿಂತು ಮಾತಾನಾಡುತ್ತಿದ್ದರು. ಕಾಮುಕರ ಗುಂಪು ಅವರ ಬಳಿ ಬಂದಿದೆ. ಅವರು ಅಸಭ್ಯವಾಗಿ ಮಾತನಾಡಿದ್ದಾರೆ. ಬಳಿಕ ವರನನ್ನು ಒತ್ತಾಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದುಷ್ಕರ್ಮಿಗಳು ಅವರ ಬಳಿ ಇದ್ದ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದರು. ದೂರಿನ ಪ್ರಕಾರ, ಹಲವು ಪುರುಷರು ಆಕೆಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಒಬ್ಬೊಬ್ಬರಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ.
ಆರೋಪಿಗಳನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ತ್ವರಿತ ನ್ಯಾಯಕ್ಕಾಗಿ ಪೊಲೀಸರು ತ್ವರಿತ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರನ್ನು ಅಖಿಲೇಶ್ ಪ್ರತಾಪ್ ಸಿಂಗ್, ಅಮಿತ್ ಕುಮಾರ್, ಸೋನು, ಅಜಯ್ ಕುಮಾರ್, ರಿಂಕು, ಸೌರಭ್, ಬ್ರಿಜೇಶ್, ಸೋನು ಕುಮಾರ್ ಎಂದು ಗುರುತಿಸಲಾಗಿದೆ - ಎಲ್ಲರೂ ಕಾಸ್ಗಂಜ್ ನಿವಾಸಿಗಳು. ಇಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ ಆದರೆ ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು" ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ರಾಜೇಶ್ ಕುಮಾರ್ ಭಾರ್ತಿಯಾ ಹೇಳಿದ್ದಾರೆ. ಆರೋಪಿಗಳ ಪೈಕಿ ಓರ್ವ ಆರೋಪಿ ಅಖಿಲೇಶ್ ಪ್ರತಾಪ್ ಸಿಂಗ್ ಬಿಜೆಪಿ ಶಾಸಕ ದೇವೇಂದ್ರ ಸಿಂಗ್ ಅವರ ಆಪ್ತ ಸಹಾಯಕ ಎಂದು ತಿಳಿದು ಬಂದಿದೆ.
ಈ ಸುದ್ದಿಯನ್ನೂ ಓದಿ: Goa Murder Case: ವಿದೇಶಿ ಯುವತಿ ಮೇಲೆ ಅತ್ಯಾಚಾರ-ಕೊಲೆ; ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಪ್ರತ್ಯೇಕ ಘಟನೆಯಲ್ಲಿ ನವವಿವಾಹಿತೆಯನ್ನು ಆಕೆಯ ಪತಿಯೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಎಂಟು ಮಂದಿಗೆ ಮಧ್ಯಪ್ರದೇಶದ ರೇವಾ ನ್ಯಾಯಾಲಯವು ಜೀವ ಇರುವವರೆಗೂ ಸೆರೆವಾಸದ ಶಿಕ್ಷೆ ವಿಧಿಸಿದೆ. 2024ರ ಅಕ್ಟೋಬರ್ನಲ್ಲಿ ಈ ಅತ್ಯಾಚಾರ ನಡೆದಿದ್ದು, ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿರುವ ಸಾಕ್ಷ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಪರಿಶೀಲಿಸಿದ ನಂತರ ಎಂಟು ಜನ ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು ನೀಡಿದೆ.