ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ: ಮಹಿಳೆ ಸೇರಿ ಐವರ ಬಂಧನ

Crime News: ಮಧ್ಯಪ್ರದೇಶದ ಗ್ವಾಲಿಯರ್‌ನಿಂದ ಅಪಹರಿಸಲ್ಪಟ್ಟ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಆರನೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ತನ್ನ ಮಗಳನ್ನು ಬೆಂಗಳೂರಿಗೆ ಕರೆದೊಯ್ಯುವುದಾಗಿ ಆಮಿಷವೊಡ್ಡಲಾಗಿದೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಇಂದೋರ್: ಈ ವರ್ಷದ ಆರಂಭದಲ್ಲಿ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಿಂದ ಅಪಹರಿಸಲ್ಪಟ್ಟ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಆರನೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸಂತ್ರಸ್ತ ಬಾಲಕಿಯನ್ನು ಈ ವರ್ಷದ ಜನವರಿಯಲ್ಲಿ ಅಪಹರಿಸಿ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಬಾಲಕಿಯ ತಾಯಿ ಫೆಬ್ರವರಿಯಲ್ಲಿ (Crime News) ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಮಗಳನ್ನು ಬೆಂಗಳೂರಿಗೆ ಕರೆದೊಯ್ಯುವುದಾಗಿ ಆಮಿಷವೊಡ್ಡಲಾಗಿದೆ ಎಂದು ಆಕೆ ದೂರಿದ್ದರು.

ದೂರಿನ ನಂತರ, ಪೊಲೀಸರು ಮಗುವಿಗಾಗಿ ಹುಡುಕಾಟ ಆರಂಭಿಸಿದರು. ಅಂತಿಮವಾಗಿ ಬೆಂಗಳೂರಿನಲ್ಲಿ ಬಾಲಕಿಯನ್ನು ರಕ್ಷಿಸಲಾಯಿತು. ಆಕೆಯನ್ನು ವಶದಲ್ಲಿಟ್ಟುಕೊಂಡಿದ್ದ ವ್ಯಕ್ತಿಯನ್ನು ಸಹ ಸ್ಥಳದಿಂದ ಬಂಧಿಸಲಾಗಿದೆ. ಬಾಲಕಿಯನ್ನು ರಕ್ಷಿಸಿದ ನಂತರ, ಅಧಿಕಾರಿಗಳು ಆಕೆಯನ್ನು ಗ್ವಾಲಿಯರ್‌ನಲ್ಲಿ ತಾತ್ಕಾಲಿಕ ಆಶ್ರಯದಲ್ಲಿ ಇರಿಸಿದರು. ಅಲ್ಲಿ ಒಂದು ತಿಂಗಳು ಕಳೆದ ನಂತರ, ಬಾಲಕಿಯನ್ನು ಮತ್ತೆ ಕುಟುಂಬದೊಂದಿಗೆ ಸೇರಿಸಲಾಯಿತು.

ಮನೆಯಲ್ಲಿ ಬಾಲಕಿಯು ತನ್ನ ತಾಯಿಗೆ ತಾನು ಅನುಭವಿಸಿದ ಭೀಕರ ಅನುಭವವನ್ನು ಹೇಳಿಕೊಂಡಳು. ಹೀಗಾಗಿ ಬಾಲಕಿಯ ತಾಯಿ ಮತ್ತೊಂದು ಪೊಲೀಸ್ ದೂರು ದಾಖಲಿಸಿದರು. ಬೆಂಗಳೂರಿನಲ್ಲಿ ತನ್ನ ಮಗಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಲ್ಲದೆ, ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಬಾಲಕಿಯ ತಾಯಿ ದೂರಿನಲ್ಲಿ ಹೇಳಿದ್ದಾರೆ. ಅಪಹರಣ ಮತ್ತು ನಂತರದ ಲೈಂಗಿಕ ಶೋಷಣೆಗೆ ಇಬ್ಬರು ಮಹಿಳೆಯರು ಸಹಕರಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಲಿಂಗಸುಗೂರಿನಲ್ಲಿ ಹೀನ ಕೃತ್ಯ; ತಂದೆ, ಆತನ ಸ್ನೇಹಿತನಿಂದಲೇ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ!

ದೂರಿನ ಆಧಾರದ ಮೇಲೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಾಲ್ವರು ಪುರುಷರು ಮತ್ತು ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ಪ್ರಕಾರ, ಆರೋಪಿಗಳಲ್ಲಿ ಕೆಲವರು ಅಪಹರಣಕ್ಕೆ ಸಹಾಯ ಮಾಡಿದರೆ, ಇತರರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಒಬ್ಬ ಆರೋಪಿ ಪರಾರಿಯಾಗಿದ್ದು, ಆತನನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ.

ದೆಹಲಿಯಲ್ಲಿ ಅತ್ಯಾಚಾರ

ಸಮಯ ಕೇಳಲೆಂದು ಬಸ್ ಬಳಿ ಹೋಗಿದ್ದಾಗ ತನ್ನನ್ನು ಒಳಗೆ ಎಳೆದು ಹಾಕಿ ಮೂವರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ದೆಹಲಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ. ದೆಹಲಿಯ ಪಿತಾಂಪುರದ ಮೂವರು ಮಕ್ಕಳ ತಾಯಿ, 30 ವರ್ಷದ ಮಹಿಳೆ ಮೇಲೆ ಸೋಮವಾರ ( ಮೇ 11) ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾಳೆ. ಘಟನೆಯ ಕುರಿತು ಪೊಲೀಸರಿಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾಳೆ.

ಸರಸ್ವತಿ ವಿಹಾರ್ ಬಸ್ ನಿಲ್ದಾಣದಲ್ಲಿ ಆ ದಿನ ಆಕೆ ಬಸ್‌ನಲ್ಲಿದ್ದವರ ಬಳಿ ಸಮಯ ಕೇಳಲೆಂದು ಹೋಗಿದ್ದಳು. ಆಕೆ ಬಸ್ ಒಳಗೆ ಕಾಲಿಟ್ಟ ಕೆಲವೇ ಕ್ಷಣಗಳಲ್ಲಿ ಬಸ್ ಚಲಿಸಲು ಪ್ರಾರಂಭಿಸಿದ್ದು, ಅದರಲ್ಲಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಬಸ್‌ನ ಹಿಂಭಾಗಕ್ಕೆ ತಳ್ಳಿ ಅತ್ಯಾಚಾರ ಮಾಡಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ.