ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು, ಸಿಗರೇಟ್‌ನಿಂದ ಸುಟ್ಟ ಕಾಮುಕನ ಎನ್‌ಕೌಂಟರ್‌; ಯೋಗಿ ನಾಡಲ್ಲಿ ಮುಂದುವರಿದ ದುಷ್ಕರ್ಮಿಗಳ ಬೇಟೆ

Crime News: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮುಷರಫ್‌ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಅಪರಾಧಿಯನ್ನು ಪೊಲೀಸರು ಭಾನುವಾರ ರಾತ್ರಿ ಪತ್ತೆ ಹಚ್ಚಿದ್ದಾರೆ. ಸದ್ಯ ಪೊಲೀಸರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಾಂದರ್ಭಿಕ ಚಿತ್ರ

ಲಖನೌ, ಜೂ. 22: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು, ರೌಡಿಗಳನ್ನು, ದುಷ್ಕರ್ಮಿಗಳನ್ನು ಮಟ್ಟ ಹಾಕಲು ಪಣ ತೊಟ್ಟಿದ್ದು, ಈ ಬಗ್ಗೆ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈಗಾಗಲೇ ಪೊಲೀಸರು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಪರಾಧಿಗಳ ವಿರುದ್ಧ ಸಮರ ಸಾರಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಪ್ರಯಾಗ್‌ರಾಜ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದವರ ಮೇಲೆ ಎನ್‌ಕೌಂಟರ್‌ ನಡೆಸಿ ಆತನ ಹೆಡೆಮುರಿ ಕಟ್ಟಲಾಗಿದೆ (Crime News). ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ, ಸಿಗರೇಟ್‌ನಿಂದ ಸುಟ್ಟ ಕಾಮುಕನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್‌ ಬಲೆಗೆ ಬಿದ್ದ ಅಪರಾಧಿಯನ್ನು ಮುಷರಫ್‌ ಎಂದು ಗುರುತಿಸಲಾಗಿದೆ.

ʼʼಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಅಪಹರಿಸಿದ್ದ ಮುಷರಫ್‌ ತೆರೆದ ಸ್ಥಳದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಅಲ್ಲದೆ ಸಿಗರೇಟ್‌ನಿಂದ ಸುಟ್ಟು ಆಕೆಗೆ ಚಿತ್ರಹಿಂಸೆ ನೀಡಿದ್ದ. ಇದೀಗ ಆತನನ್ನು ಬಂಧಿಸಲಾಗಿದೆʼʼ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆ ಮೇಲೆ ಗ್ಯಾಂಗ್ ರೇಪ್, ಖಾಸಗಿ ಅಂಗಕ್ಕೆ ಗುಂಡು, ಕಲ್ಲು ತುರುಕಿ ವಿಕೃತಿ ಮೆರೆದ ದುಷ್ಕರ್ಮಿಗಳು

ಘಟನೆ ವಿವರ

ಜೂನ್‌ 14ರಂದು ಸಂತ್ರಸ್ತೆ ತನ್ನ ಮನೆಯವರೊಂದಿಗೆ ಮನೆಯ ಬಾಲ್ಕನಿಯಲ್ಲಿ ಮಲಗಿದ್ದಳು. ತಡರಾತ್ರಿ ಮನೆಗೆ ನುಗ್ಗಿದ ಮುಷರಫ್‌ ಬಾಲಕಿಯನ್ನು ಎಳೆದುಕೊಂಡು ಹೋಗಿದ್ದ. ಬಳಿಕ ಬಯಲಿನಲ್ಲಿ ಆಕೆಯ ಮೇಲೆರಗಿ ಅತ್ಯಾಚಾರ ನಡೆಸಿದ್ದಲ್ಲದೆ ಆಕೆಯ ಶರೀರದ ತುಂಬ ಸಿಗರೇಟ್‌ನಿಂದ ಸುಟ್ಟು ವಿಕೃತಿ ಮೆರೆದಿದ್ದ ಎಂದು ಮೂಲಗಳು ತಿಳಿಸಿವೆ.

ಹಿಂಸೆ ತಾಳಲಾರದೆ ಬಾಲಕಿಯ ಪ್ರಜ್ಞೆ ತಪ್ಪಿದಾಗ ಮುಷರಫ್‌ ಅಲ್ಲಿಂದ ಪರಾರಿಯಾಗಿದ್ದ. ಹುಡುಕಾಟ ನಡೆಸಿದ ಮನೆಯವರು ಕೊನೆಗೆ ಗದ್ದೆಯೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ಪತ್ತೆ ಹಚ್ಚಿದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಈ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ದೃಢವಾಗಿದ್ದು, ಸದ್ಯ ಆಕೆಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಬಾಲಕಿಗೆ ಮುಷರಫ್‌ನ ಪರಿಚಯ ಮೊದಲೇ ಇತ್ತೇ ಎನ್ನುವುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಕೈಗೆತ್ತಿಕೊಂಡರು.

9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಹುಡುಗ

ಎನ್‌ಕೌಂಟರ್‌

ದೂರು ದಾಖಲಾಗುತ್ತಿದ್ಧಂತೆ ಪೊಲೀಸರು ಮುಷರಫ್‌ನ ಪತ್ತೆಗೆ ಬಲೆ ಬೀಸಿದ್ದರು. ಜೂನ್‌ 21ರ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರ ಕಣ್ಣಿಗೆ ಬಿದ್ದ. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ. ಕೂಡಲೇ ಪೊಲೀಸರು ಆತನ ಕಾಲಿಗೆ ಶೂಟ್‌ ಮಾಡಿ ಬಂಧಿಸಿದರು. ಸದ್ಯ ಮುಷರಫ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನಿಗೆ ನೆರವಾದ ಇತರ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ದೇಸಿ ನಿರ್ಮಿತ ಪಿಸ್ತೂಲ್‌ ಅನ್ನು ಮುಷರಫ್‌ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ರಾಜಕೀಯ ನಾಯಕರು ಸಂತ್ರಸ್ತೆ ಮನೆಯವರನ್ನು ಭೇಟಿಯಾಗಿ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.

image

ಮುಷರಫ್‌ ಮತ್ತು ಸಂತ್ರಸ್ತೆ ಒಂದೇ ಗ್ರಾಮದವರು. ಮುಷರಫ್‌ ಆಕೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿ ಪರಾರಿಯಾಗಿದ್ದ. ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಭಾನುವಾರ ಪೊಲೀಸರ ಮೇಲೆಯೇ ದಾಳಿ ನಡೆಸಿ ಓಡಿ ಹೋಗಲು ಯತ್ನಿಸಿದ್ದ. ಆಗ ಪೊಲೀಸರು ಪ್ರತಿದಾಳಿ ನಡೆಸಿ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಮನೀಷ್‌ ಶಾಂಡಿಲ್ಯ, ಪ್ರಯಾಗ್‌ರಾಜ್‌ ಎಡಿಸಿಪಿ

ಅಪರಾಧ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author