ಮದುವೆ ಭರವಸೆ ನೀಡಿ ಬಾಲಕಿಯ ಹತ್ಯೆ; ಇನ್‌ಸ್ಟಾಗ್ರಾಮ್ ಸ್ನೇಹಿತನಿಂದಲೇ ಕೊಲೆ
Crime News: ಮದುವೆ ಭರವಸೆ ನೀಡಿ ಆಮಿಷವೊಡ್ಡಿ ಬಾಲಕಿಯನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿದ್ದ ವ್ಯಕ್ತಿಯೇ ಈ ಕೃತ್ಯ ಎಸಗಿರುವುದು ಭಾರಿ ಆಘಾತ ಮೂಡಿಸಿದೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಾಂದರ್ಭಿಕ ಚಿತ್ರ. -
ಲಖನೌ, ಜ. 26: ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ ಮದುವೆಯಾಗುವುದಾಗಿ ಭರವಸೆ ನೀಡಿ ಸಂಬಂಧ ಬೆಳೆಸಿ, ವ್ಯಕ್ತಿಯೊಬ್ಬ ಬಾಲಕಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ಲಖನೌದಲ್ಲಿ ನಡೆದಿದೆ. ಐದು ದಿನಗಳ ಹಿಂದೆ ರೈಲ್ವೆ ಹಳಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ (Crime News).
ಶಂಕಿತ ಆರೋಪಿಗಳನ್ನು ಅಂಶು ಗೌತಮ್ ಮತ್ತು ಆತನ ಸಹಚರರಾದ ಆಶಿಕ್, ವೈಭವ್ ಮತ್ತು ರಿಷಭ್ ಎಂದು ಗುರುತಿಸಲಾಗಿದೆ. ಆರೋಪಿ ಅಂಶು ಇನ್‌ಸ್ಟಾಗ್ರಾಮ್‌ನಲ್ಲಿ ಹುಡುಗಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದ. ಅವನು ಮೊಬೈಲ್ ಫೋನ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಅವಳೊಂದಿಗೆ ಸಂಪರ್ಕ ಬೆಳೆಸಿದ್ದ ಎಂದು ಮೃತ ಬಾಲಕಿಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಮದುವೆಯ ಭರವಸೆ ನೀಡಿ ಅಂಶು ಕೊನೆಗೆ ದೂರವಿಟ್ಟಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ತನ್ನ ಮಗಳು ಹಿಂತಿರುಗದಿದ್ದಾಗ, ಆಕೆ ಅಂಶುವಿನ ಕುಟುಂಬ ಸದಸ್ಯರನ್ನು ಸಂಪರ್ಕಿಸಿದರು. ಆದರೆ ಯಾವುದೇ ಸಹಾಯ ಸಿಗಲಿಲ್ಲ ಎಂದು ದೂರಿದ್ದಾರೆ.
ಪ್ರಿಯಕರನ ಹೊಟ್ಟೆ ಸೀಳಿ ಖಾಸಗಿ ಅಂಗ ಕತ್ತರಿಸಿ ಕೊಂದ ನಾಲ್ವರಿಗೆ ಜೀವಾವಧಿ ಶಿಕ್ಷೆ
ಬಾಲಕಿ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಇನ್ಸ್‌ಪೆಕ್ಟರ್ ಸುರೇಶ್ ಸಿಂಗ್ ನೇತೃತ್ವದಲ್ಲಿ ಪೊಲೀಸ್ ತಂಡವನ್ನು ರಚಿಸಲಾಗಿದೆ. ತ್ವರಿತ ಕಾರ್ಯಾಚರಣೆಯಲ್ಲಿ, ತಂಡವು ನಾಲ್ವರು ಆರೋಪಿಗಳನ್ನು ಬಂಧಿಸಿದೆ. ವಿಚಾರಣೆಯ ಸಮಯದಲ್ಲಿ, ಅಂಶು ಮತ್ತು ಅವನ ಸಹಚರರು ಜಗಳವಾಡಿ ಬಾಲಕಿಯನ್ನು ಕತ್ತು ಹಿಸುಕಿ ಕೊಂದು ಆಕೆಯ ದೇಹವನ್ನು ರೈಲ್ವೆ ಹಳಿಗಳ ಮೇಲೆ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣದಲ್ಲಿ ಪೋಕ್ಸೊ ಕಾಯ್ದೆ ಸೇರಿದಂತೆ ಕಠಿಣ ಸೆಕ್ಷನ್‌ಗಳನ್ನು ಉಲ್ಲೇಖಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ಶಂಕಿತರನ್ನು ಮತ್ತಷ್ಟು ವಿಚಾರಣೆ ನಡೆಸಲಾಗುತ್ತಿದ್ದು, ಆರೋಪಿಗಳಿಗೆ ಸಾಧ್ಯವಾದಷ್ಟು ಕಠಿಣ ಶಿಕ್ಷೆಯನ್ನು ನೀಡುವ ಸಲುವಾಗಿ ಪ್ರತಿಯೊಂದು ಆಯಾಮಗಳಲ್ಲೂ ತನಿಖೆ ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ ಇಂಜೆಕ್ಟ್ ಮಾಡಿದ ಭಗ್ನ ಪ್ರೇಮಿ; ಇದೆಂಥಾ ಹುಚ್ಚಾಟ
ಧಾರಾವಾಹಿ, ಪಾಡ್‌ಕಾಸ್ಟ್‌ಗಳಲ್ಲಿ ಕೆಲಸ ಮಾಡುವ ನೆಪದಲ್ಲಿ ಕಲಾವಿದೆಯ ಮೇಲೆ ಅತ್ಯಾಚಾರ
ಧಾರಾವಾಹಿ ಮತ್ತು ಪಾಡ್‌ಕಾಸ್ಟ್‌ಗಳಲ್ಲಿ ಕೆಲಸ ಮಾಡುವುದಾಗಿ ಭರವಸೆ ನೀಡಿ ಕಲಾವಿದೆಯೊಬ್ಬರಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ಮಾಡಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೆ ತನ್ನ ಆಕ್ಷೇಪಾರ್ಹ ವಿಡಿಯೊಗಳನ್ನು ಮಾಡಿ ಅಶ್ಲೀಲ ವೆಬ್‌ಸೈಟ್‌ಗಳಿಗೆ ಅಪ್‌ಲೋಡ್ ಮಾಡಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಸಮ್ತಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಲ್ಲಿ ಸೋನು ಗುಪ್ತಾ, ಸಲ್ಮಾನ್, ರಮೇಶ್, ಅಲಿ ಮತ್ತು ಸೋನಿಯಾ ಗುಪ್ತಾ ಸೇರಿದ್ದಾರೆ. ಅವರೆಲ್ಲರೂ ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.