ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಅತ್ಯಾಚಾರಕ್ಕೆ ಯತ್ನಿಸಿ 6 ವರ್ಷದ ಬಾಲಕಿಯ ಖಾಸಗಿ ಭಾಗಕ್ಕೆ ರಾಡ್ ತುರುಕಿದ; ಪಾಪಿಯ ಕೃತ್ಯಕ್ಕೆ ಬೆಚ್ಚಿಬಿದ್ದ ದೇಶ

ಆರು ವರ್ಷದ ಬಾಲಕಿಯ ಮೇಲೆ ಭೀಕರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಬಾಲಕಿಯ ಖಾಸಗಿ ಭಾಗಕ್ಕೆ ರಾಡ್ ತುರುಕಿದ್ದು ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಹಲವಾರು ಮಂದಿಯನ್ನು ವಿಚಾರಣೆ ನಡೆಸಿರುವ ಪೊಲೀಸರು ಕೃಷಿ ಕೆಲಸಗಾರನೊಬ್ಬನನ್ನು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ

ರಾಜ್‌ಕೋಟ್: ಬಾಲಕಿಯೊಬ್ಬಳ ಖಾಸಗಿ ಭಾಗಕ್ಕೆ ರಾಡ್ ತುರುಕಿ ಗಂಭೀರವಾಗಿ ಹಲ್ಲೆ ( physically assault) ನಡೆಸಿರುವ ಘಟನೆ ಗುಜರಾತ್‌ನ (Gujarat) ರಾಜ್‌ಕೋಟ್‌ನಲ್ಲಿ (Rajkot) ನಡೆದಿದೆ. ಈ ಘಟನೆ ಕಳೆದ ಬುಧವಾರ ಅಂದರೆ ಡಿಸೆಂಬರ್ 4ರಂದು ನಡೆದಿದೆ. ಆರು ವರ್ಷದ ಬಾಲಕಿಯ (6 years girl) ಮೇಲೆ ಅತ್ಯಾಚಾರ (physically abuse) ನಡೆಸಲು ಪ್ರಯತ್ನಿಸಿದ್ದು, ಇದು ಸಾಧ್ಯವಾಗದೇ ಇದ್ದಾಗ ಆಕೆಯ ಖಾಸಗಿ ಭಾಗಕ್ಕೆ ರಾಡ್ ತುರುಕಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.

ರಾಜ್‌ಕೋಟ್‌ನ ದಾಹೋದ್ ಜಿಲ್ಲೆಯ ಅತ್ಕೋಟ್‌ನಲ್ಲಿ ಕೃಷಿ ಕಾರ್ಮಿಕ ಕುಟುಂಬವೊಂದು ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಡಿಸೆಂಬರ್ 4 ರಂದು ಪೋಷಕರು ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅವರ ಹತ್ತಿರದಲ್ಲೇ ಆಟವಾಡುತ್ತಿದ್ದ ಮಗವನ್ನು ಅಪರಿಚಿತನೊಬ್ಬ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಬೆಂಗಳೂರು ಗ್ಯಾಂಗ್‌ ರೇಪ್‌ ಕೇಸ್‌ಗೆ ಟ್ವಿಸ್ಟ್‌; ಲವರ್‌ ಬಳಿ ಸತ್ಯ ಮುಚ್ಚಿಡಲು ಸುಳ್ಳು ದೂರು ಕೊಟ್ಟ ಯುವತಿ!

ಮಗು ಜೋರಾಗಿ ಕಿರುಚಿದ ಸದ್ದು ಕೇಳಿ ಪೋಷಕರು ಆಕೆಯನ್ನು ಹುಡುಕಲು ಪ್ರಾರಂಭಿಸಿದ್ದಾರೆ. ಆಗ ಆಕೆ ಸ್ವಲ್ಪ ದೂರದಲ್ಲಿ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದನ್ನು ಕಾಣಬಹುದು. ದಾಳಿಕೋರ ಆಕೆಯ ಖಾಸಗಿ ಭಾಗಕ್ಕೆ ಲೋಹದ ರಾಡ್ ಅನ್ನುತುರುಕಿದ್ದು, ಇದರಿಂದ ಗಂಭೀರವಾಗಿ ಬಾಲಕಿ ಗಾಯಗೊಂಡಿದ್ದಳು. ಕೂಡಲೇ ಆಕೆಯನ್ನು ರಾಜ್‌ಕೋಟ್‌ನ ಜನ್ನಾ ಆಸ್ಪತ್ರೆಗೆ ದಾಖಲಿಸಲಾಯಿತು.

ಸದ್ಯ ಬಾಲಕಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಆಕೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ದೊಡ್ಡ ಪ್ರಮಾಣದಲ್ಲೇ ರಾಜ್‌ಕೋಟ್ ಪೊಲೀಸರು ತಂಡವನ್ನು ರಚಿಸಿ ಆರೋಪಿಗಾಗಿ ಹುಡುಕಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 35 ವರ್ಷದ ಕೃಷಿ ಕಾರ್ಮಿಕನನ್ನು ಬಂಧಿಸಲಾಗಿದೆ.

ಘಟನೆಯ ಕುರಿತು ಮಾಹಿತಿ ನೀಡಿರುವ ರಾಜ್‌ಕೋಟ್‌ನ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ವಿಜಯಸಿನ್ಹ ಗುರ್ಜರ್ , ಘಟನೆಯ ಮಾಹಿತಿ ತಿಳಿದ ತಕ್ಷಣ ಸುಮಾರು 10 ತಂಡಗಳನ್ನು ರಚಿಸಲಾಗಿದ್ದು, 100 ಶಂಕಿತರನ್ನು ವಿಚಾರಣೆ ನಡೆಸಲಾಗಿದೆ.

Bengaluru News: ಬೆಂಗಳೂರಿನಲ್ಲೊಂದು ಘೋರ ದುರಂತ: ಸಾಲದಿಂದ ತತ್ತರಿಸಿ ಮಗಳು, ಮೊಮ್ಮಗ ಆತ್ಮಹತ್ಯೆ, ಹೃದಯಾಘಾತದಿಂದ ಅಜ್ಜಿ ಸಾವು

ಆರೋಪಿಯ ಗುರುತನ್ನು ಪತ್ತೆ ಹಚ್ಚುವ ಸಲುವಾಗಿ ಮಕ್ಕಳ ತಜ್ಞರ ಸಮ್ಮುಖದಲ್ಲಿ ಸುಮಾರು 10 ವ್ಯಕ್ತಿಗಳನ್ನು ಮಗುವಿನ ಮುಂದೆ ಹಾಜರುಪಡಿಸಲಾಗಿದೆ. ಇವರಲ್ಲಿ ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯ ಕೃಷಿ ಕೆಲಸಗಾರ ರಾಮಸಿಂಗ್ ತೆರಾಸಿಂಗ್ ದದ್ವೇಜರ್ ಎಂಬಾತ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ವಿವಾಹಿತನಾಗಿರುವ ದದ್ವೇಜರ್ ಗೆ ಮೂವರು ಮಕ್ಕಳಿದ್ದಾರೆ ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಇತರರು ಭಾಗಿಯಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿಲ್ಲ. ಆರೋಪಿಯನ್ನು ಪಕ್ಕದ ಹೊಲದ ಬಳಿ ಬಂಧಿಸಲಾಗಿದೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಬಾಲಕಿಯ ಚೇತರಿಕೆಯ ಮೇಲೂ ನಿಗಾ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author