ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ranya Rao: ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್‌ಗೆ 14 ದಿನ ನ್ಯಾಯಾಂಗ ಬಂಧನ

ಸೋಮವಾರ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಟಿ ರನ್ಯಾ ರಾವ್ ಅವರಿಂದ 14.8 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ರನ್ಯಾ ರಾವ್ ಆಗಾಗ್ಗೆ ದುಬೈಗೆ ಭೇಟಿ ನೀಡುತ್ತಿದ್ದ ಕಾರಣ ಡಿಆರ್ ಐ ಅಧಿಕಾರಿಗಳು ಅವರ ಮೇಲೆ ಕಣ್ಣಿಟ್ಟಿದ್ದರು. ಸೋಮವಾರ ಕೂಡ ಅವರು ದುಬೈನಿಂದ ಎಮಿರೇಟ್ಸ್‌ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್‌ಗೆ 14 ದಿನ ನ್ಯಾಯಾಂಗ ಬಂಧನ

ನಟಿ ರನ್ಯಾ ರಾವ್

ಹರೀಶ್‌ ಕೇರ ಹರೀಶ್‌ ಕೇರ Mar 5, 2025 6:36 AM

ಬೆಂಗಳೂರು: ದುಬೈನಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ (Gold Smuggling) ನಡೆಸಿ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ (Actress Rnya Rao) ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನ (Judicial Custody) ವಿಧಿಸಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಸೋಮವಾರ ರಾತ್ರಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಣೆ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಬಂಧಿಸಿದ್ದರು.

ಮಂಗಳವಾರ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾರ್ಚ್ 18ರವರೆಗೂ ನಟಿ ರನ್ಯಾ ರಾವ್‌ಗೆ ಜೈಲೇ ಗತಿಯಾಗಲಿದೆ. ಸೋಮವಾರ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಟಿ ರನ್ಯಾ ರಾವ್ ಅವರಿಂದ 14.8 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ರನ್ಯಾ ರಾವ್ ಆಗಾಗ್ಗೆ ದುಬೈಗೆ ಭೇಟಿ ನೀಡುತ್ತಿದ್ದ ಕಾರಣ ಡಿಆರ್ ಐ ಅಧಿಕಾರಿಗಳು ಅವರ ಮೇಲೆ ಕಣ್ಣಿಟ್ಟಿದ್ದರು. ಸೋಮವಾರ ಕೂಡ ಅವರು ದುಬೈನಿಂದ ಎಮಿರೇಟ್ಸ್‌ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ರನ್ಯಾ ರಾವ್ ಕರ್ನಾಟಕದಲ್ಲಿ ಕೆಲಸ ಮಾಡುತ್ತಿರುವ ಐಪಿಎಸ್ ಅಧಿಕಾರಿಯೊಬ್ಬರ ನಿಕಟ ಸಂಬಂಧಿ ಎಂದು ಹೇಳಲಾಗಿದೆ. ರನ್ಯಾ ರಾವ್ ಹೆಚ್ಚಿನ ಚಿನ್ನವನ್ನು ಧರಿಸಿದ್ದು ಮಾತ್ರವಲ್ಲದೆ ಚಿನ್ನದ ಗಟ್ಟಿಗಳನ್ನು ಮರೆಮಾಚಿ ತರಲು ಪ್ರಯತ್ನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಗಳ ಪ್ರಕಾರ, ವಿಮಾನ ನಿಲ್ದಾಣಕ್ಕೆ ಬಂದ ನಂತರ ನಟಿ ರನ್ಯಾ ರಾವ್ ತಾನು ಪೊಲೀಸ್ ಮಹಾನಿರ್ದೇಶಕರ (DGP) ಮಗಳು ಎಂದು ಹೇಳಿಕೊಂಡಿದ್ದರು. ಬಳಿಕ ಅವರು ತಮ್ಮನ್ನು ಕರೆದುಕೊಂಡು ಹೋಗುವಂತೆ ಸ್ಥಳೀಯ ಪೊಲೀಸ್ ಸಿಬ್ಬಂದಿಗೆ ಕರೆ ಮಾಡುತ್ತಿದ್ದರು. ಆಕೆಯ ಪೂರ್ವಾಪರ ವಿಚಾರಿಸದೆ ಪೊಲೀಸರು ಆಕೆಯನ್ನು ಮನೆಗೆ ಬಿಡುತ್ತಿದ್ದರು. ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರಾ, ಐಪಿಎಸ್ ಅಧಿಕಾರಿಗೆ ಈ ಬಗ್ಗೆ ಮಾಹಿತಿ ಇದೆಯಾ ಎನ್ನುವ ಬಗ್ಗೆ ಡಿಆರ್ ಐ ಅಧಿಕಾರಿಗಳು ಈಗ ತನಿಖೆ ನಡೆಸುತ್ತಿದ್ದಾರೆ.

ಕಳೆದ 15 ದಿನಗಳಲ್ಲಿ ನಟಿ ನಾಲ್ಕು ಬಾರಿ ದುಬೈಗೆ ಪ್ರಯಾಣಿಸಿದ್ದಾರೆ ಎನ್ನುವುದನ್ನು ಅಧಿಕಾರಿಗಳು ಗಮನಿಸಿದ್ದಾರೆ. ಬಳಿಕ ಅವರ ಚಲನವಲನದ ಮೇಲೆ ಕಣ್ಣಿಟ್ಟಿದ್ದಾರೆ. ಬಂಧಿಸಿದ ಬಳಿಕ ಬೆಂಗಳೂರಿನ ಹೆಚ್‌ಬಿಆರ್ ಲೇಔಟ್‌ನಲ್ಲಿರುವ ಡಿಆರ್‌ಐ ಪ್ರಧಾನ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಯಿತು. ಮಂಗಳವಾರ ಆಕೆಯನ್ನು ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರನ್ಯಾ ರಾವ್ ದೊಡ್ಡ ಕಳ್ಳಸಾಗಣೆ ದೊಡ್ಡ ಜಾಲದ ಭಾಗವಾಗಿದ್ದಾರೆಯೇ ಎನ್ನುವುದರ ಬಗ್ಗೆ ತನಿಖೆ ತೀವ್ರಗೊಂಡಿದೆ.

ರನ್ಯಾ ರಾವ್ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸುದೀಪ್ ಜೊತೆ ಮಾಣಿಕ್ಯ ಸಿನಿಮಾದಲ್ಲಿ ಹಾಗೂ ಪಟಾಕಿ ಸಿನಿಮಾದಲ್ಲಿ ಗಣೇಶ್‌ ಜತೆ ನಟಿಸಿದ್ದರು. ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಕೂಡ ಅವರು ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Ranya Rao: ಅಕ್ರಮ ಚಿನ್ನ ಸಾಗಣೆ, ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌