ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gold theft: ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, ನಗದು ಕಳವು!

ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದರು. ಆ ವೇಳೆ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಇದ್ದ ಕೈಚೀಲವನ್ನು ತಂದಿದ್ದು, ತೆರಳುವಾಗ ಅದನ್ನು ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.

ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, ನಗದು ಕಳವು!

ಸಚಿವ ಬೈರತಿ ಸುರೇಶ್ -

ಹರೀಶ್‌ ಕೇರ
ಹರೀಶ್‌ ಕೇರ Feb 10, 2026 1:15 PM

ಬೆಂಗಳೂರು, ಫೆ.10: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ (Byrathi Suresh) ಅವರ ವಿಧಾನಸೌಧದ (vidhana soudha) ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ (gold theft) ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದರು. ಆ ವೇಳೆ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಇದ್ದ ಕೈಚೀಲವನ್ನು ತಂದಿದ್ದು, ತೆರಳುವಾಗ ಅದನ್ನು ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.

ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ. ತಕ್ಷಣ ಕಾರ್ಯಾಚರಣೆ ನಡೆಸಿದ ವಿಧಾನಸೌಧ ಪೊಲೀಸರು ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ.