Self Harming: ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ಗ್ರಾಪಂ ಅಧ್ಯಕ್ಷೆ
ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಪಾವಗಡದ ಬ್ಯಾಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಗಳನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿ ಮಾಡಿಕೊಂಡಿರುವ ಘಟನೆ ಭಾನುವಾರ (ಫೆ. 16) ಬೆಂಗಳೂರಲ್ಲಿ ನಡೆದಿದೆ. ಮೃತರನ್ನು ಶ್ರುತಿ (33) ಮತ್ತು ರೋಶಿಣಿ (5) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಶ್ರುತಿ.

ಬೆಂಗಳೂರು: ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಪಾವಗಡದ ಬ್ಯಾಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಗಳನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿ ಮಾಡಿಕೊಂಡಿರುವ ಘಟನೆ ಭಾನುವಾರ (ಫೆ. 16) ಬೆಂಗಳೂರಲ್ಲಿ ನಡೆದಿದೆ (Self Harming). ಮೃತರನ್ನು ಶ್ರುತಿ (33) ಮತ್ತು ರೋಶಿಣಿ (5) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಬಗಲಗುಂಟೆಯ ರಾಮಯ್ಯ ಲೇಔಟ್‌ನಲ್ಲಿರುವ ಮನೆಯಲ್ಲಿ ಇವರು ನೇಣಿಗೆ ಶರಣಾಗಿದ್ದಾರೆ. ಶ್ರುತಿ ಮೊದಲು ತನ್ನ5 ವರ್ಷದ ಮಗಳು ರೋಷಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ.
ಆಟವಾಡಲು ಹೊರ ಹೋಗಿದ್ದ ಪುತ್ರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಮುನ್ನ ಶ್ರುತಿ ಡೆತ್ನೋಟ್ ಬರೆದಿಟ್ಟಿದ್ದು, ಇದರಲ್ಲಿ ಪತಿ ಗೋಪಾಲಕೃಷ್ಣ ಪರಸ್ತ್ರಿಯೊಂದಿಗಿನ ಅನೈತಿಕ ಸಂಬಂಧದ ಹೊಂದಿರುವ ಬಗ್ಗೆ ಉಲ್ಲೇಖಿಸಿದ್ದಾರೆ.
ಶ್ರುತಿ ಈ ಹಿಂದೆ ಆಡಿಟಿಂಗ್ ಕೆಲಸ ಮಾಡುತ್ತಿದ್ದ ಗೋಪಾಲಕೃಷ್ಣನನ್ನು ಪ್ರೀತಿಸಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ʼʼಭಾನುವಾರ ಸಂಜೆ ಪತಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭ ಶ್ರುತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಮಗ ಮನೆಯ ಹೊರಗಡೆ ಆಟವಾಡುತ್ತಿದ್ದ. ಆತ ಮನೆಯೊಳಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆʼʼ ಎಂದು ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಒಂದೇ ಕುಟುಂಬದ ನಾಲ್ವರು ಅಸಹಜ ಸಾವು
ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಕೊಲೆ ಹಾಗೂ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ತಾಯಿ, ಪತ್ನಿ ಹಾಗೂ ಮಗನಿಗೆ ವಿಷವುಣಿಸಿದ ಗಂಡಸು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.
ಕುಶಾಲ್ (15), ಚೇತನ್ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು. ಚೇತನ್ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ ಸಾಯಿಸಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ: Self Harming: ಒಂದೇ ಕುಟುಂಬದ ನಾಲ್ವರು ಅಸಹಜ ಸಾವು; ವಿಷ ನೀಡಿ ಕೊಂದು ನೇಣು ಹಾಕಿಕೊಂಡ ಅನುಮಾನ
ಚೇತನ್ ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಡೆತ್ನೋಟ್ ಪತ್ತೆಯಾಗಿದೆ. ಅದರಲ್ಲಿ ಅವರು, ʼʼನಮ್ಮ ಸಾವಿಗೆ ನಾವೇ ಕಾರಣ. ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ. ನಮ್ಮ ಸಾವಿಗೆ ಬೇರೆ ಯಾರೂ ಕಾರಣರಲ್ಲ. ನನ್ನ ಸ್ನೇಹಿತರು, ಸಂಬಂಧಕರಿಗೆ ಯಾರೂ ತೊಂದರೆ ಕೊಡಬೇಡಿ. ನಮ್ಮನ್ನು ಕ್ಷಮಿಸಿಬಿಡಿʼʼ ಎಂದು ಬರೆದಿದ್ದಾರೆ.