ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vijayapura News: ನೀರು ಕುಡಿಯಲು ಹೋಗಿ ಬಾವಿಗೆ ಬಿದ್ದ ಬಾಲಕ, ರಕ್ಷಿಸಲು ಹೋದ ಅಜ್ಜಿಯೂ ನೀರುಪಾಲು!

Vijayapura News: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ತೋಟದಲ್ಲಿ ಘಟನೆ ನಡೆದಿದೆ. ನೀರು ಕುಡಿಯಲು ಬಾವಿಗೆ ಇಳಿದಿದ್ದ ಬಾಲಕ ಜಾರಿ ನೀರಿಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಅಜ್ಜಿ ತೆರಳಿದ್ದು, ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ.

ಬಾವಿಯಲ್ಲಿ ಮುಳುಗಿದ ಬಾಲಕ, ರಕ್ಷಿಸಲು ಹೋದ ಅಜ್ಜಿಯೂ ನೀರುಪಾಲು!

Profile Prabhakara R Mar 14, 2025 10:23 PM

ವಿಜಯಪುರ: ನೀರು ಕುಡಿಯಲು ಬಾವಿಗೆ ಇಳಿದಿದ್ದ ಬಾಲಕ ಕಾಲು ಜಾರಿ ಮುಳುಗಿದ್ದು, ಬಾಲಕನ ರಕ್ಷಿಸಲು ಹೋದ ಅಜ್ಜಿಯೂ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ತೋಟದಲ್ಲಿ ನಡೆದಿದೆ.

ಅಸಾದ್‌ ಮುಲ್ಲಾ (12) ಮೃತ ಬಾಲಕ, ಸಲೀಮಾ‌ ಮುಲ್ಲಾ (55) ಮೃತ ಅಜ್ಜಿ‌ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಹೊರ್ತಿ ಪೊಲೀಸರು ಬಾವಿಯೊಳಗಿದ್ದ ಇಬ್ಬರ ಶವವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ಬಗ್ಗೆ ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Jewargi Protest: ಪುರಸಭೆ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಜೇವರ್ಗಿಯಲ್ಲಿ ಪೌರ ಸೇವಾ ನೌಕರರ ಪ್ರತಿಭಟನೆ

ಪ್ರೇಮಿಯಿಂದ ವಂಚನೆ, ಪುತ್ರಿ ಸೂಸೈಡ್, ನೊಂದ ತಾಯಿ ನೇಣಿಗೆ ಶರಣು

ಮಂಡ್ಯ: ಮಂಡ್ಯದಲ್ಲಿ (Mandya news) ಮನಕಲಕುವ ಘಟನೆಯೊಂದು ನಡೆದಿದೆ. ಪ್ರಿಯಕರ ಮೋಸ (Fraud) ಮಾಡಿದ್ದರಿಂದ ನೊಂದ ಯುವತಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಪುತ್ರಿಯ ಆತ್ಮಹತ್ಯೆಯಿಂದ ಮನನೊಂದು ತಾಯಿ ಸಹ ನೇಣಿಗೆ ಶರಣಾಗಿದ್ದಾರೆ. ಈ ದಾರುಣ ಘಟನೆ (Crime news) ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ವಿಜಯಲಕ್ಷ್ಮಿ ಹಾಗೂ ಆಕೆಯ ತಾಯಿ ಲಕ್ಷ್ಮಿ (50) ಮೃತಪಟ್ಟವರು.

25 ದಿನಗಳ ಹಿಂದೆ ಲಕ್ಷ್ಮಿ ಅವರ ಪುತ್ರಿ ವಿಜಯಲಕ್ಷ್ಮಿ (21) ಆತ್ಮಹತ್ಯೆ ಮಾಡಿಕೊಂಡಿದ್ದಳು. ಫೆಬ್ರವರಿ 21ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈಕೆಗೆ ಪಕ್ಕದ ಮಾರಸಿಂಗನಹಳ್ಳಿ ನಿವಾಸಿ ಹರಿಕೃಷ್ಣ ಎಂಬಾತ ಮೋಸ ಮಾಡಿದ್ದ ಎಂಬ ಆರೋಪ ಕೇಳಿಬಂದಿತ್ತು. ಒಂದುವರೆ ವರ್ಷದಿಂದ ವಿಜಯಲಕ್ಷ್ಮಿ ಮತ್ತು ಹರಿಕೃಷ್ಣ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಬೇರೆ ಹುಡುಗಿಯರ ಜೊತೆ ಹರಿಕೃಷ್ಣ ಸಂಪರ್ಕದಲ್ಲಿ ಇದ್ದ. ಈ ಬಗ್ಗೆ ಪ್ರಶ್ನಿಸಿ ಯುವತಿ ವಿಜಯಲಕ್ಷ್ಮಿ ಮದುವೆಗೆ ಪಟ್ಟು ಹಿಡಿದಿದ್ದಾಳೆ. ಮದುವೆಗೆ ನಿರಾಕರಿಸಿ ಹರಿಕೃಷ್ಣ, ವಿಜಯಲಕ್ಷ್ಮಿಯನ್ನು ಆವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಇದರಿಂದ ಮನನೊಂದು ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಳು.

ಈ ಕುರಿತು ವಿಜಯಲಕ್ಷ್ಮಿ ತಂದೆ ಮಂಡ್ಯ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ನ್ಯಾಯ ಕೇಳಲು ಹೋದವರ ವಿರುದ್ಧವೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ವ್ಯಕ್ತವಾಗಿತ್ತು. ಮಗಳ ಸಾವಿಗೆ ನ್ಯಾಯ ಸಿಕ್ಕಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷ್ಮಿ ಶವ ಸಾಗಿಸಲು ಬಿಡದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಆರೋಪಿ ಹರಿಕೃಷ್ಣ ಮತ್ತು ಕುಟುಂಬದವರನ್ನು ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming: ಪ್ರೀತಿಸಿ ಮದುವೆಯಾಗಿ 22 ದಿನಕ್ಕೆ ಆತ್ಮಹತ್ಯೆಗೆ ಶರಣಾದ ಜೋಡಿ; ಕಾರಣ ಕೇಳಿದ್ರೆ ಶಾಕ್‌ ಆಗ್ತೀರಿ!