ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಹತ್ತಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಮಯೂರ ಗ್ರಾಮದಲ್ಲಿ ನಡೆದಿದೆ. ಮಯೂರ ಗ್ರಾಮದ ಗುರುರಾಜ್ ಬಿರಾದರ್ (18) ಹಲ್ಲೆಗೊಳಗಾದ ಯುವಕ. ಯುವಕ ಒಂಟಿಯಾಗಿ ಸಿಕ್ಕ ವೇಳೆ ಶ್ರೀಶೈಲ್, ಅಜಯಕುಮಾರ್, ಮುತ್ತುರಾಜ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಯುವಕನನ್ನು ನೆಲಕ್ಕೆ ಕೆಡವಿ ಹಿಗ್ಗಾಮುಗ್ಗಾ ಥಳಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಹಲ್ಲೆಗೊಳಗಾದ ಗುರುರಾಜ್ ಬಿರಾದರ್ ನೀಡಿದ ದೂರಿನ ಮೇರೆಗೆ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಲ್ಲೆಗೆ ನಿಖರ ಕಾರಣವೇನು ಹಾಗೂ ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕೈಗೊಳ್ಳಲಾಗಿರುವ ಕ್ರಮದ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಗಣೇಶ ಮೂರ್ತಿ ನೋಡಲು ಹೋಗಿ ಮಸಣ ಸೇರಿದ ಯುವಕ
ಕಲಬುರಗಿ: ಗಣೇಶ ಮೂರ್ತಿ ನೋಡಲು ತೆರಳಿದ್ದ ಯುವಕರು ಬೈಕ್ ರೇಸಿಂಗ್ ವೇಳೆ ಪರಸ್ಪರ ಡಿಕ್ಕಿಯಾಗಿ, ಓರ್ವ ಯುವಕ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಗರದ ಹೀರಾಪುರದ ಡಾ.ಬಿ.ಆರ್ ಅಂಬೇಡ್ಕರ್ ಮೇಲ್ಸೇತುವೆ ಬಳಿ ಸೋಮವಾರ ರಾತ್ರಿ ನಡೆದಿದೆ.
ನಗರದ ಹೊರವಲಯದ ಕೋಟನೂರ (ಡಿ) ಗ್ರಾಮದ ಪ್ರಶಾಂತ ಪೊಲೀಸ್ ಬಿರಾದಾರ ಮೃತಪಟ್ಟ ಯುವಕ. ಇದೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಲಿಂಗರಾಜ್ ಪೂಜಾರಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ಮುಂದಿನ 24 ಗಂಟೆಗಳ ಕಾಲ ನಿರ್ಣಾಯಕ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಗಣೇಶ ಮೂರ್ತಿ ವೀಕ್ಷಿಸಲು ತೆರಳಿದ್ದ ಯುವಕರು ಬೈಕ್ ರೇಸಿಂಗ್ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ರೇಸ್‌ನಲ್ಲಿ ಭಾಗಿಯಾಗಿದ್ದ ಯುವಕರ ಬೈಕ್‌ಗಳೇ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಪ್ರಶಾಂತ ಹಾಗೂ ಲಿಂಗರಾಜ್ ಅವರ ತಲೆಗೆ ಗಂಭೀರ ಗಾಯಗಳಾಗಿ ಧಾರಾಕಾರ ರಕ್ತಸ್ರಾವವಾಗಿದೆ. ಘಟನೆಯಲ್ಲಿ ಸಚಿನ್ ಹಾಗೂ ಸಿದ್ದರಾಮ ಎಂಬ ಯುವಕರಿಗೂ ಗಾಯಗಳಾಗಿವೆ.
Horrific tragedy in Belagavi; ಬೆಳಗಾವಿಯಲ್ಲಿ ಭೀಕರ ದುರಂತ ; ಹಬ್ಬದ ದಿನವೇ ಒಂದೇ ಕುಟುಂಬದ ನಾಲ್ವರು ಸಾವು
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಚಾರಿ-1 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.