ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಾಲಕನ ಕಣ್ಣೆದುರೇ ಹಸುವಿನ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Viral News: ಕಾಮುಕನೊಬ್ಬ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯೊಂದು ವರದಿಯಾಗಿದೆ. ಎರಡು ವರ್ಷದ ಹಸುವಿನ ಮೇಲೆ ಈ ಪಾಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನನ್ನು ಕನುಭಾಯಿ ಗೊಂಡಾಲಿಯಾ ಎಂದು ಗುರುತಿಸಲಾಗಿದ್ದು, ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಗಾಂಧಿನಗರ, ಸೆ.13: ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಇದಕ್ಕೆ ಸಾಕ್ಷಿ ಎನ್ನುವಂತೆ ಕಾಮುಕನೊಬ್ಬ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯೊಂದು ವರದಿಯಾಗಿದೆ. ಎರಡು ವರ್ಷದ ಹಸುವಿನ  ಮೇಲೆ ಪಾಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಆರೋಪದ ಮೇರೆಗೆ ಕನುಭಾಯಿ ಗೊಂಡಾಲಿಯಾ ಎಂಬ ವ್ಯಕ್ತಿಯನ್ನು ಗುಜರಾತ್‌ನ (Gujarat News) ರಾಜ್‌ಕೋಟ್ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಾಲಕ ಮೆರ್ಖಿಭಾಯಿ ಚಾವ್ಡಾ ಎಂಬವರಿಗೆ ಸೇರಿದ ಹಸುವೊಂದು ಕಾಣೆಯಾಗಿತ್ತು. ಅದನ್ನು ಹುಡುಕಿಕೊಂಡು ಹೋಗುವಾಗ ಆರೋಪಿ ಕನುಭಾಯಿ ಹಸುವಿನೊಂದಿಗೆ ಈ ಕೃತ್ಯ ವೆಸಗುತ್ತಿರುವುದು ಕಣ್ಣಿಗೆ ಬಿದ್ದಿದೆ. ಮಾಲಕ ಗಮನಿಸುತ್ತಿದ್ದಂತೆ ಕಾಮುಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ:



ಘಟನೆಯ ನಂತರ ಚಾವ್ಡಾ ಪೊಲೀಸರನ್ನು ಸಂಪರ್ಕಿಸಿ ಗೊಂಡಾಲಿಯಾ ವಿರುದ್ಧ ದೂರು ದಾಖಲಿಸಿದರು. ದೂರಿನ ಮೇರೆಗೆ ಪೊಲೀಸರು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11(1)(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಥಳದಲ್ಲಿದ್ದ ಮತ್ತೊಬ್ಬ ವ್ಯಕ್ತಿ ಈ ಘಟನೆಯನ್ನು ಸಂಪೂರ್ಣ ರೆಕಾರ್ಡ್ ಮಾಡಿದ್ದಾರೆ.

ಸರ್ಕಾರಿ ವಾಹನ ದುರುಪಯೋಗ ಪಡಿಸಿಕೊಂಡ ಸಬ್ ಇನ್ಸ್‌ಪೆಕ್ಟರ್‌ ವಿರುದ್ಧ ಕ್ರಮ

​ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಡಿಯೊ ಸಾಕ್ಷ್ಯಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮಕ್ಕಾಗಿ ತನಿಖೆ ಮುಂದುವರಿಸಿದ್ದಾರೆ. ಈ ದೃಶ್ಯ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ. ಬಳಕೆದಾರರೊಬ್ಬರು ಇಂತಹ ಕಾಮುಕರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕೆಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಇಂತಹ ವ್ಯಕ್ತಿಗಳಿಂದಲೇ ಸಮಾಜಕ್ಕೆ ಕೆಟ್ಟ ಹೆಸರು ಎಂದು ಕಿಡಿಕಾರಿದ್ದಾರೆ.