ಚಂಡೀಗಢ : ಆಮ್ ಆದ್ಮಿ ಪಕ್ಷದ ನಾಯಕರೊಬ್ಬರನ್ನು ದುಷ್ಕರ್ಮಿಗಳು ಬೈಕಿನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಫಿರೋಜ್‌ಪುರ (Aam Admi Party) ಜಿಲ್ಲೆಯ ಮಮ್ದೋಟ್ ಪಟ್ಟಣದಲ್ಲಿ ನಡೆದಿದೆ. ಗುರುಪ್ರೀತ್ ಸಿಂಗ್ ಗೋಪಿ ಹತ್ಯೆಯದ ಆಪ್ ನಾಯಕ. ಗುರುಪ್ರೀತ್ ಮತ್ತು ಹರ್‌ಪ್ರೀತ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಕಾರಿನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿದ್ದಾರೆ.
ಬಳಿಕ ಬೈಕ್‌ಗೆ ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗುರುಪ್ರೀತ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಭೂಪಿಂದರ್ ಸಿಂಗ್ ಸಿಧು ತಿಳಿಸಿದ್ದಾರೆ. ಗುರುಪ್ರೀತ್ ಹಾಗೂ ಹರ್‌ಪ್ರೀತ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅವರ ಕೆಲ ಸ್ನೇಹಿತರು ಮತ್ತೊಂದು ಕಾರಿನಲ್ಲಿ ಹಿಂಬಾಲಿಸುತ್ತಿದ್ದರು. ದುಷ್ಕರ್ಮಿಗಳು ಆ ಕಾರಿನ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯ ಹಿಂದೆ ಹಳೆಯ ವಿವಾದವೊಂದು ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ದಾಳಿಕೋರರನ್ನು ಗುರುತಿಸಲಾಗಿದೆ ಮತ್ತು ನಮ್ಮ ತಂಡಗಳನ್ನು ರಚಿಸಲಾಗಿದೆ. ಸಾಧ್ಯವಾದಷ್ಟು ಬೇಗ ಅವರನ್ನು ಬಂಧಿಸುತ್ತೇವೆ" ಎಂದು ಎಸ್‌ಎಸ್‌ಪಿ ಭೂಪಿಂದರ್ ಸಿಂಗ್ ಸಿಧು ಹೇಳಿದ್ದಾರೆ. ಪ್ರಮುಖ ಆರೋಪಿ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಈ ಘಟನೆಯು ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಹೊಸ ಕಳವಳವನ್ನು ಹುಟ್ಟುಹಾಕಿದೆ. ಸದ್ಯ ಪೊಲೀಸರು ಆರೋಪಿಗಳ ಪತ್ತೆಗೆ ತೀವ್ರ ಶೋಧ ನಡೆಸುತ್ತಿದ್ದು, ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಗುಂಡಿನ ದಾಳಿಯ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ವಿವಾದ ಪ್ರಮುಖ ಕಾರಣವಾಗಿರಬಹುದು ಎಂಬ ಕೋನದಲ್ಲಿ ತನಿಖೆ ನಡೆಯುತ್ತಿದೆ.
ಗೋವಾ ರಾಜ್ಯದಲ್ಲಿ ಉದ್ಯಮ ನಡೆಸುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಮೂಲದ ವ್ಯಕ್ತಿಯೋರ್ವರ ಮೇಲೆ ಶುಕ್ರವಾರ ರಾತ್ರಿ ಅಪರಿಚಿತ ವ್ಯಕ್ತಿಗಳಿಂದ ಗುಂಡಿನ ದಾಳಿ ನಡೆದಿದ್ದು ಅದೃಷ್ಟವಶಾತ್ ಅವರು ಪಾರಾಗಿದ್ದಾರೆ. ಗೋವಾ ರಾಜ್ಯದಲ್ಲಿ ಉದ್ಯಮ ಹೊಂದಿರುವ ಯಲ್ಲಾಪುರ ಮೂಲದ ಶ್ರೀನಿವಾಸ ನಾಯಕರ ಮೇಲೆ ಅಪರಿಚಿತ ವ್ಯಕ್ತಿಗಳಿಬ್ಬರು ಗುಂಡು ಹಾರಿಸಿದ್ದು ತಕ್ಷಣ ಚುರುಕಿನ ಕ್ರಮ ಕೈಗೊಂಡ ಶ್ರೀನಿವಾಸ ನಾಯಕರ ಅಂಗರಕ್ಷಕರು ಪ್ರತಿದಾಳಿ ನಡೆಸಿದ್ದರಿಂದ ದುಷ್ಕರ್ಮಿಗಳ ಗುರಿ ತಪ್ಪಿದ್ದು ಅವರು ರಾಷ್ಟ್ರೀಯ ಹೆದ್ದಾರಿ ಬದಿಗೆ ಹಾರಿ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ದೇಶ, ಪಂಜಾಬ್‌ನ ಶಾಂತಿ ಬಯಸದ ಸಾಕಷ್ಟು ಶಕ್ತಿಗಳಿವೆ: ಗುಂಡಿನ ದಾಳಿ ಬಳಿಕ ಸುಖಬೀರ್ ಸಿಂಗ್ ಬಾದಲ್ ಮೊದಲ ಪ್ರತಿಕ್ರಿಯೆ
ಶ್ರೀನಿವಾಸ ನಾಯಕ ಅವರು ಪಣಜಿ ಪರವರಿಯಲ್ಲಿರುವ ನ್ಯೂ ಮೆಜಿಸ್ಟಿಕ್ ಹೊಟೇಲಿನಿಂದ ತೆರಳುತ್ತಿದ್ದ ಸಂದರ್ಭದಲ್ಲಿ ಸಮೀಪದಲ್ಲೇ ಕಾದು ಕುಳಿತಿದ್ದ ದುಷ್ಕರ್ಮಿಗಳು ಅವರ ಸಮೀಪ ಬಂದು ಗುಂಡು ಹಾರಿಸುವ ಯತ್ನ ನಡೆಸುತ್ತಿರುವ ಸಂದರ್ಭದಲ್ಲೇ ನಾಯಕರ ಅಂಗರಕ್ಷಕರ ಕಡೆಯಿಂದ ಗುಂಡಿನ ದಾಳಿ ನಡೆದಿದ್ದು ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.