ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hampi Horror: ಹಂಪಿ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ಹಲ್ಲೆ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಗಂಗಾವತಿ ನಿವಾಸಿ ಯುವಕರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಇವರನ್ನು ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22), ಚೇತನ್ ಸಾಯಿ (21) ಎಂದು ಗುರುತಿಸಲಾಗಿದೆ. ಮೂರನೇ ಆರೋಪಿಯ ಗುರುತು ಗೊತ್ತಾಗಬೇಕಿದೆ.

ಹಂಪಿ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯೂ ಬಂಧನ

ಹರೀಶ್‌ ಕೇರ ಹರೀಶ್‌ ಕೇರ Mar 10, 2025 7:23 AM

ಕೊಪ್ಪಳ: ಹಂಪಿ ಸಮೀಪದ ಸಾನಾಪುರ ಕೆರೆ ಬಳಿ ಇತ್ತೀಚೆಗೆ ನಡೆದಿದ್ದ ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲಿನ ಬರ್ಬರ (Hampi Horrir) ಅತ್ಯಾಚಾರ ಪ್ರಕರಣಕ್ಕೆ (Physical Abuse) ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭಾನುವಾರ ತಿಳಿಸಿದ್ದಾರೆ. ಅಪರಾಧದ (Assault Case) ನಂತರ ತಲೆಮರೆಸಿಕೊಂಡಿದ್ದ ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.

ಹಲ್ಲೆ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಗಂಗಾವತಿ ನಿವಾಸಿ ಯುವಕರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಇವರನ್ನು ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22), ಚೇತನ್ ಸಾಯಿ (21) ಎಂದು ಗುರುತಿಸಲಾಗಿದೆ. ಮೂರನೇ ಆರೋಪಿಯ ಗುರುತು ಗೊತ್ತಾಗಬೇಕಿದೆ.

ಮಾರ್ಚ್ 6ರಂದು ತುಂಗಭದ್ರಾ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿ ಮೇಲೆ 3 ಜನರು ಹಲ್ಲೆ ನಡೆಸಿದ್ದರು. ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಇತರೆ ಮೂರು ಪುರುಷರ ಮೇಲೂ ಹಲ್ಲೆ ಮಾಡಿ ಕಾಲುವೆಗೆ ತಳ್ಳಿದ್ದರು. ಈ ಪೈಕಿ ನಾಪತ್ತೆಯಾಗಿದ್ದ ಪ್ರವಾಸಿಯ ಶವ ನಿನ್ನೆ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ. ಮೃತನನ್ನು ಒರಿಸ್ಸಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿದೆ.

ಈ ಪೈಶಾಚಿಕ ಕೃತ್ಯದಲ್ಲಿ ಮೂವರು ವ್ಯಕ್ತಿಗಳು ಭಾಗಿಯಾಗಿದ್ದು, ಮಾರ್ಚ್ 8ರಂದು ಇಬ್ಬರನ್ನು ಬಂಧಿಸಿದರೆ, ಮೂರನೇ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಪ್ರವಾಸಿಗರಿಗೆ ಭದ್ರತೆ ಹೆಚ್ಚಿಸುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಶಿವರಾಜ ತಂಗಡಗಿ ತಿಳಿಸಿದರು.

ಇದನ್ನೂ ಓದಿ: Murder Case: ಪ್ರೇಯಸಿಯೊಂದಿಗೆ ಮದುವೆಗೆ ಹಠ; ಮಗನನ್ನೇ ಕೊಲೆಗೈದ ತಂದೆ, ಅಣ್ಣ!

ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನ, ಮೂವರು ಗಂಭೀಋ

ಚಿಂತಾಮಣಿ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಜೀವ ದಹನ ಹೊಂದಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಕೆಂಚರ‍್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಡಪ ಹೈವೇ ರಸ್ತೆಯ ಜೋಗ್ಯನಹಳ್ಳಿ ಹಾಗೂ ನಂದಿಗಾನಹಳ್ಳಿ ಮಧ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಗಳನ್ನು ಬೆಂಗಳೂರು ಹಾಗೂ ಆಂಧ್ರಪ್ರದೇಶ ಕಡಪ ಮೂಲದ ಧನಂಜಯ ರೆಡ್ಡಿ (31), ಕಳಾವತಿ (50) ಎಂದು ಗುರುತಿಸಲಾಗಿದೆ.

ಕಡಪ ಮೂಲದವರಾದ ಶೋಭಾ (21), ಮಹಾಲಕ್ಷ್ಮಿ (60), ಮನ್ವಿತ್ (3) ಇವರಿಗೆ ಗಾಯಗಳಾಗಿವೆ. ಮೃತಪಟ್ಟವರು ಒಂದೇ ಕುಟುಂಬದವರಾಗಿದ್ದು ಕಾರಿನಲ್ಲಿ ಬೆಂಗಳೂರು ಕಡೆ ಹೋಗುತ್ತಿದ್ದರು. ಬೆಂಗಳೂರು ಕಡೆಯಿಂದ ಖಾಸಗಿ ಭಾರತಿ ಬಸ್ ತಿರುಪತಿ ಕಡೆ ಹೋಗುತ್ತಿದ್ದು ಜೋಗ್ಯನಹಳ್ಳಿ ಹಾಗೂ ನಂದಿಗಾನಹಳ್ಳಿ ಮಧ್ಯದ ಹೈವೇ ರಸ್ತೆಯಲ್ಲಿ ಮುಖಮುಖಿ ಡಿಕ್ಕಿಯಾಗಿವೆ.

ಜಿಲ್ಲಾ ರಕ್ಷಣಾಧಿಕಾರಿಗಳಾದ ಕುಶಾಲ್ ಚೌಕ್ಸೆ, ಅಡಿಷನಲ್ ಎಸ್ಪಿ ರಜಾ ಇಮಾಮ್ ಖಾಸಿಂ,ಡಿವೈಎಸ್ಪಿ ಮುರಳಿಧರ್, ಸರ್ಕಲ್ ಇನ್ಸ್ಪೆಕ್ಟರ್ ವೆಂಕಟರವಣಪ್ಪ, ಶಿವ ರಾಜಾ, ಸಬ್ ಇನ್ಸ್ಪೆಕ್ಟರ್ ಮಮತಾ ಹಾಗೂ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.