ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Harrassment: ಬೆಂಗಳೂರಿನ ಪಿಜಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ದರೋಡೆ

Bengaluru: ಕೆಲವು ತಿಂಗಳ ಹಿಂದೆ ಬೆಂಗಳೂರಿನ ಪಿಜಿಯೊಂದರಲ್ಲಿ ಯುವತಿಯೊಬ್ಬಳ ಹತ್ಯೆ ನಡೆದಿತ್ತು. ಇದೀಗ ಈ ಪ್ರಕರಣ ನಡೆದಿದ್ದು, ಪಿಜಿಗಳಲ್ಲಿ ವಾಸಿಸುವ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಅತಿಕ್ರಮಣ, ಲೈಂಗಿಕ ಕಿರುಕುಳ, ಹಲ್ಲೆ ಮತ್ತು ಕಳ್ಳತನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ನಗರದ ಮಹಿಳಾ ಪೇಯಿಂಗ್ ಗೆಸ್ಟ್ (Bengaluru Paying guest) ಕೇಂದ್ರವೊಂದರಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ಕೋಣೆಗೆ ನುಗ್ಗಿ 23 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ (Harassment) ನೀಡಿ ನಂತರ ಹಣವನ್ನು ದೋಚಿದ್ದಾನೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಗಂಗೋತ್ರಿ ವೃತ್ತದಲ್ಲಿರುವ ಮಹಿಳೆಯರಿಗಾಗಿರುವ ಪಿಜಿ ಕೇಂದ್ರದಿಂದ ಈ ಘಟನೆ ವರದಿಯಾಗಿದೆ. ಕೆಲವು ತಿಂಗಳ ಹಿಂದೆ ಬೆಂಗಳೂರಿನ ಪಿಜಿಯೊಂದರಲ್ಲಿ ಯುವತಿಯೊಬ್ಬಳ ಹತ್ಯೆ ನಡೆದಿತ್ತು. ಇದೀಗ ಈ ಪ್ರಕರಣ ನಡೆದಿದ್ದು, ಪಿಜಿಗಳಲ್ಲಿ ವಾಸಿಸುವ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಮುಖವಾಡ ಧರಿಸಿ ಸಿಸಿಟಿವಿ ಕ್ಯಾಮೆರಾದಲ್ಲಿ ಕಾಣಿಸಿಕೊಂಡ ವ್ಯಕ್ತಿ ಮಹಿಳಾ ಪಿಜಿಗೆ ನುಗ್ಗಿದ್ದಾನೆ. ಪಿಜಿ ಒಳಗೆ ನಗುಗ್ಗುವ ಮೊದಲು ಕಾಮುಕ, ನೆಲ ಮಹಡಿಯಲ್ಲಿನ ಎಲ್ಲಾ ಕೊಠಡಿಗಳನ್ನು ಹೊರಗಿನಿಂದ ಲಾಕ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಬಳಿಕ ಪಿಜಿಯೊಂದರ ಕೊಠಡಿಯಲ್ಲಿ ಮಲಗಿದ್ದ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆಕೆ ವಿರೋಧಿಸಿದಾಗ, ಚಾಕುವಿನಿಂದ ಬೆದರಿಸಿ, ಉಗುರುಗಳಿಂದ ಆಕೆಯ ಕಾಲುಗಳನ್ನು ಕೆರೆದು, ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಆಕೆಯ ಕಪಾಟಿನಿಂದ 2,500 ರೂ. ನಗದು ತೆಗೆದುಕೊಂಡು ಪರಾರಿಯಾಗಿದ್ದಾನೆ. ಮಹಿಳೆ ತಕ್ಷಣ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತಿಕ್ರಮಣ, ಲೈಂಗಿಕ ಕಿರುಕುಳ, ಹಲ್ಲೆ ಮತ್ತು ಕಳ್ಳತನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಕಾಮುಕ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case: ಬೆಂಗಳೂರಿನಲ್ಲಿ ದರೋಡೆ ಯತ್ನ, ಹಣ ಕೊಡದ ಯುವಕನ ಇರಿದು ಕೊಲೆ

ಹರೀಶ್‌ ಕೇರ

View all posts by this author