ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Sadhu Kokila: ನಟ ಸಾಧು ಕೋಕಿಲ, ಮಂಡ್ಯ ರಮೇಶ್‌ಗೆ ಬಿಗ್ ರಿಲೀಫ್: ಲೈಂಗಿಕ ದೌರ್ಜನ್ಯ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಮೈಸೂರಿನ ಬ್ಯೂಟಿ ಪಾರ್ಲರ್‌ನ ಮಹಿಳೆಯೊಬ್ಬರಿಂದ ಈ ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ್ದ ಮೈಸೂರಿನ ಸರಸ್ವತಿ ಪುರಂ ಪೊಲೀಸರು, ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಮಸಾಜ್ ಮಾಡಿಸಿಕೊಳ್ಳುವಾಗ ಲೈಂಗಿಕ ದೌರ್ಜನ್ಯ ಮಾಡಿದ್ದರೆಂದು ಆರೋಪ ಮಾಡಲಾಗಿತ್ತು. ಈ ಪ್ರಕರಣ ರದ್ದು ಕೋರಿ ಇಬ್ಬರೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮಂಡ್ಯ ರಮೇಶ್‌, ಸಾಧು ಕೋಕಿಲ

ಬೆಂಗಳೂರು, ಫೆ.12: ಲೈಂಗಿಕ ದೌರ್ಜನ್ಯ (Harassment) ಪ್ರಕರಣದಲ್ಲಿ ಕನ್ನಡದ ನಟರಾದ ಸಾಧು ಕೋಕಿಲ (Sadhu Kokila) ಹಾಗೂ ಮಂಡ್ಯ ರಮೇಶ್ (Mandya Ramesh) ವಿರುದ್ಧ ಹಾಕಲಾದ ಕೇಸನ್ನು ಕರ್ನಾಟಕ ಹೈಕೋರ್ಟ್‌ (Karnataka high court) ರದ್ದುಗೊಳಿಸಿದೆ. ಆ ಮೂಲಕ ಇಬ್ಬರು ನಟರಿಗೂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ಕುರಿತಂತೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಉಮಾ ಅವರನ್ನೊಳಗೊಂಡ ನ್ಯಾಯಪೀಠ ಆದೇಶ ಮಾಡಿದೆ.

ಮೈಸೂರಿನ ಬ್ಯೂಟಿ ಪಾರ್ಲರ್‌ನ ಮಹಿಳೆಯೊಬ್ಬರಿಂದ ಈ ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ್ದ ಮೈಸೂರಿನ ಸರಸ್ವತಿ ಪುರಂ ಪೊಲೀಸರು, ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಮಸಾಜ್ ಮಾಡಿಸಿಕೊಳ್ಳುವಾಗ ಲೈಂಗಿಕ ದೌರ್ಜನ್ಯ ಮಾಡಿದ್ದರೆಂದು ಆರೋಪ ಮಾಡಲಾಗಿತ್ತು. ಈ ಪ್ರಕರಣ ರದ್ದು ಕೋರಿ ಇಬ್ಬರೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣವೇನು?

ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಗುಮಾನಿ ಮೇರೆಗೆ 2017ರ ಡಿ.20ರಂದು ಮೈಸೂರಿನ ಸ್ವಾಮಿ ಆರ್ಕೇಡ್‌ ಕಟ್ಟಡದಲ್ಲಿದ್ದ ಲೈಕ್‌ ಟ್ರೆಂಡ್‌ ಫ್ಯಾಮಿಲಿ ಸಲೂನ್‌ ಮೇಲೆ ಸರಸ್ವತಿಪುರಂ ಠಾಣಾ ಪೊಲೀಸರು ದಾಳಿ ನಡೆಸಿದ್ದರು. ಆ ವೇಳೆ ಸಲೂನ್‌ನಲ್ಲಿ ಮಹಿಳಾ ಸಿಬ್ಬಂದಿ ಹಾಗೂ ಸಲೂನ್‌ ಮಾಲೀಕ ರಾಜೇಶ್‌ ಇದ್ದರು. ಮಹಿಳೆಯನ್ನು ವಿಚಾರಣೆ ನಡೆಸಿದಾಗ, ''ಸಲೂನ್‌ ಭೇಟಿ ನೀಡುವ ಗ್ರಾಹಕರ ದೇಹದ ಎಲ್ಲಾ ಭಾಗಗಳಿಗೆ ಮಸಾಜ್‌ ಮಾಡುವಂತೆ ರಮೇಶ್‌ ನನಗೆ ಹೇಳುತ್ತಿದ್ದರು. ನಟ ಸಾಧು ಕೋಕಿಲ ಸಹ ಸಲೂನ್‌ಗೆ ಬರುತ್ತಿದ್ದರು. ಅವರ ದೇಹದ ಎಲ್ಲಾ ಭಾಗಗಳಿಗೂ ನಾನು ಮಸಾಜ್‌ ಮಾಡಿದೆ,'' ಎಂದು ಹೇಳಿಕೆ ನೀಡಿದ್ದರು.

ಆಲ್ಬಂ ಸಾಂಗ್‌ ರಿಲೀಸ್‌ ಮಾಡಿದ ಸಾ‌ ರಾ ಮಹೇಶ್‌ ಪತ್ನಿ ಅನಿತಾ; ಹಾಡು ಕೇಳಿ ಸಾಧುಕೋಕಿಲ ಏನಂದ್ರು ನೋಡಿ!

ಆ ಕುರಿತು ತನಿಖೆ ನಡೆಸಿದ್ದ ಪೊಲೀಸರು, ಸಾಧು ಕೋಕಿಲ ವಿರುದ್ಧ ಐಪಿಸಿ ಸೆಕ್ಷನ್‌ 354 ಅನ್ವಯ ಮಹಿಳೆಯ ಘನತೆಗೆ ಧಕ್ಕೆ ತಂದ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಹೈಕೋರ್ಟ್‌ ಮೆಟ್ಟಿಲೇರಿದ ಸಾಧು ಕೋಕಿಲ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದಾರೆ.

ಅರ್ಜಿದಾರರ ಪರ ವಕೀಲರು, ಸಲೂನ್‌ನ ಮಹಿಳಾ ಸಿಬ್ಬಂದಿಯ ಘನತೆಗೆ ಧಕ್ಕೆ ತಂದ ಆರೋಪ ಸಂಬಂಧ ಸಾಧು ಕೋಕಿಲ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಇಲ್ಲ. ಅಧೀನ ನ್ಯಾಯಾಲಯದ ಮುಂದೆ ನೀಡಿದ ಈ ಹೇಳಿಕೆಯಲ್ಲಿ ಮಹಿಳೆಯು ಈ ಆರೋಪ ಮಾಡಿಲ್ಲ. ಆಕೆ ತಿಳಿಸಿದ ದಿನಾಂಕದಂದು ಅರ್ಜಿದಾರರು ಸಲೂನ್‌ಗೆ ಭೇಟಿಯೇ ನೀಡಿರಲಿಲ್ಲ. ಆದರೂ, ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇದರಿಂದ ಅರ್ಜಿದಾರರಿಗೆ ತೇಜೋವಧೆಯಾಗುತ್ತಿದೆ. ಹಾಗಾಗಿ, ಪ್ರಕರಣ ಹಾಗೂ ಆ ಕುರಿತ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು, ಎಂದು ಕೋರಿದ್ದರು. ಈ ಮನವಿಯನ್ನು ಈಗ ಹೈಕೋರ್ಟ್‌ ಪುರಸ್ಕರಿಸಿದೆ.

ಬಲವಂತದ ಮತಾಂತರ, ಲೈಂಗಿಕ ದೌರ್ಜನ್ಯ; ಜಾಲದೊಳಗೆ ಸಿಕ್ಕಿಬಿದ್ದಿದ್ದು ಬರೋಬ್ಬರಿ 350ಕ್ಕೂ ಹೆಚ್ಚು ಹಿಂದೂ ಮಹಿಳೆಯರು

ಹರೀಶ್‌ ಕೇರ

View all posts by this author