ಬೆಂಗಳೂರು, ಫೆ. 21 : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಚಾಕೊಲೇಟ್ (chocolate) ನೀಡುವುದಾಗಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ (Harassment) ಎಸಗಿರುವ ಘಟನೆ ಬೆಂಗಳೂರಿನ (Bengaluru crime news) ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಷ್ಟೆ ಅಲ್ಲದೇ 9 ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಆರೋಪಿಯನ್ನು ಪೊಲೀಸರು ಬಂದಿಸಿದ್ದು, ಆತನ ಮೇಲೆ ಪೋಕ್ಸೋ ಕೇಸ್ (pocso case) ದಾಖಲಿಸಲಾಗಿದೆ.
ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತನಿಂದ ಈ ದುಷ್ಕೃತ್ಯ ನಡೆದಿದೆ. ಶಾಲಾ ಆವರಣ ಮತ್ತು ಶೌಚಾಲಯದಲ್ಲಿ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರಂಭದಲ್ಲಿ ಒಬ್ಬ ಬಾಲಕಿ ಆರೋಪಿಯ ನೀಚತನದ ಬಗ್ಗೆ ಬಾಯಿ ಬಿಟ್ಟಿದ್ದಾಳೆ. ತದನಂತರ 9 ವಿದ್ಯಾರ್ಥಿಗಳ ಜೊತೆಗೆ ಈತ ಅಸಭ್ಯವಾಗಿ ವರ್ತಿಸಿರುವುದು ಗೊತ್ತಾಗಿದೆ. ಆರೋಪಿ ಕೃತ್ಯದ ಬಗ್ಗೆ ಪೋಷಕರ ಬಳಿ ಮಕ್ಕಳು ಎಲ್ಲ ವಿಚಾರ ತಿಳಿಸಿದ್ದಾರೆ. ನಿನ್ನೆ ಬೆಳಿಗ್ಗೆ ಆರೋಪಿ ಕೃಷ್ಣಮೂರ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ಹಾಸ್ಟೆಲ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ನಗರದ ಪ್ರತಿಷ್ಟಿತ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ (Student sef harming) ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ (Doddaballapura) ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು (Bengaluru) ಸರ್ಜಾಪುರ ಮೂಲದ ನಯನಾ (20) ಮೃತಪಟ್ಟಿರುವ ದುರ್ದೈವಿ.
POCSO Case: ಚಾಕೊಲೇಟ್ ನೀಡಿ ದೌರ್ಜನ್ಯ ಎಸಗಿದ ವಾಹನ ಚಾಲಕ, 10 ತರಗತಿ ಬಾಲಕಿಗೆ ಹೆರಿಗೆ
ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇವನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ (Gitam University) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಳು. 14ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಶೋಧಿಸಲಾಗುತ್ತಿದೆ.