ಹಾಸನ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಅಪ್ರಾಪ್ತನೊಬ್ಬ ತನ್ನನ್ನು ಸಾಕಿದ ಮಹಿಳೆಯ ಮೇಲೆಯೇ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆಗೈದ (Murder Case) ಪ್ರಕರಣ ಹಾಸನ ಜಿಲ್ಲೆಯಲ್ಲಿ (Hassan crime news) ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ಬಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಮೀನಾಕ್ಷಮ್ಮ (43) ಎಂದು ಗುರುತಿಸಲಾಗಿದೆ.
ಈಕೆಯನ್ನು ಹತ್ಯೆಗೈದ ಬಾಲಕ ಚಿಕ್ಕಂದಿನಲ್ಲಿದ್ದಾಗಲೇ ತಂದೆ-ತಾಯಿಯನ್ನು ಕಳೆದುಕೊಂಡು, ಮೀನಾಕ್ಷಮ್ಮ ಅವರ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದ. ಸೆ.15ರಂದು ಬಾಲಕ ಮೀನಾಕ್ಷಮ್ಮ ಜೊತೆಗೆ ಜಗಳ ತೆಗೆದಿದ್ದಾನೆ. ನಂತರ ಆಕೆಯ ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಸೆ.16ರಂದು ತಮ್ಮ ತಾಯಿಯದ್ದು ಅನುಮಾನಾಸ್ಪದ ಸಾವು ಎಂದು ಅವರ ಪುತ್ರ ದಿನೇಶ್ ಪೊಲೀಸರಿಗೆ ದೂರು ನೀಡಿದ್ದರು. ಅಪ್ರಾಪ್ತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.
ಬಾವಿಗೆ ಹಾರಿ ಮಗಳು ಆತ್ಮಹತ್ಯೆ, ರಕ್ಷಿಸಲು ಹೋದ ತಾಯಿಯೂ ಸಾವು
ಕಲಬುರಗಿ : ಮದುವೆ ವಿಚಾರಕ್ಕೆ ಸಂಭವಿಸಿದ ಗಲಾಟೆಯಿಂದ ನೊಂದ ಮಗಳು ಬಾವಿಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಈ ವೇಳೆ ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ತಾಯಿ ಜಗದೇವಿ (47), ಪುತ್ರಿ ಮಧುಮತಿ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮಧುಮತಿ ಮದುವೆ ವಿಷಯಕ್ಕೆ ಕುಟುಂಬದಲ್ಲಿ ಜಗಳ ನಡೆದಿತ್ತು. ಮದುವೆ ವಿಷಯಕ್ಕೆ ಗಲಾಟೆಯಾಗಿ ಮಧುಮತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳನ್ನು ರಕ್ಷಿಸಲು ಹೋಗಿ ತಾಯಿಯೂ ಬಾವಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Man burnt alive: ಚಿತ್ರದುರ್ಗದಲ್ಲಿ ಕಾರು ಆಕಸ್ಮಿಕವಾಗಿ ಹೊತ್ತಿ ಉರಿದು ಯುವಕ ಸಜೀವ ದಹನ