ಚಿಂತಾಮಣಿ: ಚಿಂತಾಮಣಿ-ಶಿಡ್ಲಘಟ್ಟ ರಸ್ತೆಯ ಉಪ್ಪರಪೇಟೆ ಬಳಿ ರಾತ್ರಿ ಎರಡು ದ್ವಿಚಕ್ರ ವಾಹನ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಶಿಡ್ಲಘಟ್ಟ ಪಟ್ಟಣದ ನಿವಾಸಿಗಳಾದ ಕೃಷ್ಣ (21 ವರ್ಷ), ರಮಾದೇವಿ(40 ವರ್ಷ) ನಿಜಾಮುಲ್ಲಾ(40 ವರ್ಷ), ಶಾಮೀರ್ (25 ವರ್ಷ)ಎಂದು ಗುರುತಿಸಲಾಗಿದ್ದು
ಇವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಎರಡು ಬೈಕ್‌ಗಳ ನಡುವೆ ನೇರ ಡಿಕ್ಕಿ ಸಂಭವಿಸಿದ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ವಾಗಿ ಜಜ್ಜುಗುಜ್ಜಾಗಿವೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯರು ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಆದರೆ ಗಾಯಗಳ ತೀವ್ರತೆ ಹೆಚ್ಚಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ನಾಲ್ವರನ್ನೂ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಲ್ಲಿ 25 ವರ್ಷದ ಶಾಮೀರ್ ಅವರ ಸ್ಥಿತಿ ಚಿಂತಾಜನಕ ವಾಗಿದೆ ಎಂದು ತಿಳಿದುಬಂದಿದೆ.
ವಿಷಯ ತಿಳಿದ ತಕ್ಷಣ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ಎರಡೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.