ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಹೃದಯವಿದ್ರಾವಕ ಘಟನೆ; ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ

ಗೌರಿಬಿದನೂರಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, (Self Harming) ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ನಗರೆದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಮೃತ ಯುವತಿ.

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, (Self Harming) ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರೆದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಮೃತ ಯುವತಿ. ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದ ಸ್ವರ್ಣ ಕಾಲೇಜಿನ ಹಾಸ್ಟೆಲ್‌ನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

ನಂತರ ಮನೆಗೆ ಬಂದಿದ್ದ ಮಗಳನ್ನ ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಳು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮಗಳು ಸ್ವರ್ಣ ಸಾವನ್ನಪ್ಪಿದ್ದಾಳೆ. ಈಕೆ ತಂದೆ ಕಳೆದ 3 ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಅಂದಿನಿಂದಲೂ ಮಾನಸಿಕವಾಗಿ ಕುಗ್ಗಿ ಹೋಗಿ ಖಿನ್ನತೆಗೆ ಒಳಗಾಗಿದ್ದಳು. ಗಂಡ ಹಾಗೂ ಮಗಳನ್ನು ಕಳೆದುಕೊಂಡ ತಾಯಿಗೆ ದಿಕ್ಕು ತೋಚದಂತಾಗಿದೆ. ಅಕ್ಕನ ಸಾವಿನಿಂದ ತಮ್ಮ ಸಹ ಕುಗ್ಗಿ ಹೋಗಿದ್ದು ತಾಯಿಗೆ ಆತಂಕ ಭಯ ಮೂಡಿಸಿದೆ. ಬೆಂಗಳೂರಿನ ಹೈಗ್ರೌಂಡ್ ಪೊಲೀಸರು ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಮೃತ ಸ್ವರ್ಣ ತಾಯಿ ಬಳಿ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತ್ಯೇಕ ಘಟನೆಯಲ್ಲಿ, 27 ವರ್ಷದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ವಿಜಯಲಕ್ಷ್ಮಿ ಮತ್ತು ಅವರ ಒಂದು ವರ್ಷದ ಮಗ ಭುವನ್ ಹಾಗೂ 4 ವರ್ಷದ ಮಗಳು ಬೃಂದಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯಲಕ್ಷ್ಮಿ ಮತ್ತು ಅವರ ಪತಿ ರಮೇಶ್ ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿಯವರಾಗಿದ್ದು, ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ರಮೇಶ್ ಇಲ್ಲಿನ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ ಗಂಡ ರಮೇಶ್ ಇಲ್ಲದ ಸಮಯದಲ್ಲಿ ಪತ್ನಿ ವಿಜಯಲಕ್ಷ್ಮೀ ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾನೂ ಫ್ಯಾನಿಗೆ ಕೊರಳೊಡ್ಡಿದ್ದಾರೆ. ಇಂದು ವಿಜಯಲಕ್ಷ್ಮೀ ತಂಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆ ಬಳಿಕ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ: Actress Rakshitha: ನಟಿ ರಕ್ಷಿತಾ ಆತ್ಮೀಯ ಸ್ನೇಹಿತೆ ಆತ್ಮಹತ್ಯೆ! ಭಾವುಕ ಪೋಸ್ಟ್ ಫುಲ್‌ ವೈರಲ್

ಸ್ಥಳಕ್ಕೆ ಆಗಮಿಸಿದ ಬಾಗಲಗುಂಟೆ ಪೊಲೀಸರು ಮೃತದೇಹಗಳನ್ನ ನೇಣಿನ ಕುಣಿಕೆಯಿಂದ ಇಳಿಸಿ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದಾರೆ. ರಮೇಶ್ ಇತ್ತೀಚೆಗೆ ಮತ್ತೊಂದು ಮದುವೆಯಾಗಿದ್ದು, ಪತ್ನಿಗೆ ಡಿವೋರ್ಸ್ ಕೊಡುವಂತೆ ಬೆದರಿಕೆ ಹಾಕುತ್ತಿದ್ದ. ಮನೆಯಲ್ಲಿದ್ದಾಗ ಬೇರೆ ಬೇರೆ ಹುಡುಗಿಯರ ಜೊತೆ ಫೊನ್​​ನಲ್ಲಿ ಮಾತನಾಡುತ್ತಿದ್ದ. ಇದರಿಂದ ವಿಜಯಲಕ್ಷ್ಮೀ ಮಾನಸಿಕವಾಗಿ ನೊಂದಿದ್ದಳು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.