Physical Assault : ಮೂವರು ಶಿಕ್ಷಕರಿಂದಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
ಪಾಠ ಹೇಳಿಕೊಡುವ ಶಿಕ್ಷಕರೇ ರಕ್ಕಸರಾಗಿ ವಿದ್ಯಾರ್ಥನಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ತಮಿಳು ನಾಡಿನಲ್ಲಿ ನಡೆದಿದೆ. ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಸದ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಚೆನ್ನೈ: ತಮಿಳುನಾಡಿನ (Tamil Nadu) ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ (Physical Abuse) ಘಟನೆ ನಡೆದಿದೆ. ಘಟನೆಯನ್ನು ಸಾರ್ವಜನಿಕರು ಖಂಡಿಸಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ಸಂತ್ರಸ್ತ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ, ಆಕೆಯ ತಾಯಿ ಈ ವಿಷಯವನ್ನು ಬಹಿರಂಗಗೊಳಿಸಿದ್ದಾರೆ. ತಕ್ಷಣವೇ ಮುಖ್ಯೋಪಾಧ್ಯಾಯರು ತಕ್ಷಣವೇ ಪೊಲೀಸ್ ದೂರು ದಾಖಲಿಸಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಕೃಷ್ಣಗಿರಿಯ ಮಹಿಳಾ ಪೊಲೀಸ್ ತಂಡ ಮೂವರು ಆರೋಪಿ ಶಿಕ್ಷಕರನ್ನು ಬಂಧಿಸಿದ್ದು, ಅವರು ಈಗ 15 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ಈ ಸುದ್ದಿಯನ್ನೂ ಓದಿ: Physical Assault: ಆಟೋ ಚಾಲಕರಿಂದ ವಲಸೆ ಕಾರ್ಮಿಕ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ!
ಪ್ರತ್ಯೇಕ ಘಟನೆಯಲ್ಲಿ ಇತ್ತೀಚೆಗೆ ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ದುರುಳರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಈ ಘಟನೆ ಚೆನ್ನೈನ ಕಿಲಂಬಕ್ಕಂ ಟರ್ಮಿನಸ್ ಬಳಿ ನಡೆದಿದೆ. ಯುವತಿ ಅಸ್ಸಾಂ ಮೂಲದವಳಾಗಿದ್ದು, ಬಸ್ಸಿಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಆಕೆಯನ್ನು ಅಪಹರಿಸಿದ್ದರು. ಆಟೋ ಚಾಲಕ ಸೇರಿ ಮೂವರು ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು ಅಲ್ಲೇ ಸುತ್ತಮುತ್ತಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡು ವಿಶೇಷ ತಂಡಗಳನ್ನು ಕೂಡ ರಚಿಸಲಾಗಿದೆ.