ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಹಿಟ್‌ ಆ್ಯಂಡ್ ರನ್ ಕೇಸ್‌: ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಇಬ್ಬರು ಮಹಿಳೆಯರು ಬಲಿ

ನಗರದ ಹೊಸಕೆರೆಹಳ್ಳಿ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಹಿಟ್‌ ಆ್ಯಂಡ್ ರನ್ ಅಪಘಾತ ನಡೆದಿದ್ದು, ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪರಿಚಿತ ವಾಹನ ಮಹಿಳಾ ಕಾರ್ಮಿಕರಿಗೆ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.

ಹಿಟ್‌ ಆ್ಯಂಡ್ ರನ್ ಕೇಸ್‌: ನೈಸ್ ರಸ್ತೆಯಲ್ಲಿ ಇಬ್ಬರು ಮಹಿಳೆಯರು ಬಲಿ

ಸಾಂಧರ್ಬಿಕ ಚಿತ್ರ -

Vishakha Bhat
Vishakha Bhat Dec 13, 2025 8:26 AM

ಬೆಂಗಳೂರು: ನಗರದ ಹೊಸಕೆರೆಹಳ್ಳಿ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಹಿಟ್‌ ಆ್ಯಂಡ್ ರನ್ (Road Accident) ಅಪಘಾತ ನಡೆದಿದ್ದು, ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪರಿಚಿತ ವಾಹನ ಮಹಿಳಾ ಕಾರ್ಮಿಕರಿಗೆ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಮೃತರನ್ನು ಯಾದಗಿರಿ ಮೂಲದ ರಂಗಮ್ಮ (45) ಹಾಗೂ ಚೌಡಮ್ಮ (55) ಎಂದು ಗುರುತಿಸಲಾಗಿದೆ. ನೈಸ್ ರಸ್ತೆ ಬದಿಯಲ್ಲಿ ಹುಲ್ಲು ತೆರವು ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ, ಸಂಜೆ ಸುಮಾರು 5:54ರ ವೇಳೆಗೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕೆಂಗೇರಿ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಪೊಲೀಸರು ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಚಾಲಕನ ಪತ್ತೆಗೆ ಮುಂದಾಗಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ; ವೃದ್ಧ ದಂಪತಿ ಸೇರಿ ಮೂವರ ಸಾವು

ಪ್ರತ್ಯೇಕ ಘಟನೆಯಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದೇವನಹಳ್ಳಿ ತಾಲೂಕಿನ ಸಾದಹಳ್ಳಿ ನಿವಾಸಿಗಳಾದ ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ಗುರುತಿಸಲಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ KA 50 MA 0789 ಸಂಖ್ಯೆಯ ಕಾರು, ಚಾಲಕನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.