ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hit and Run: ಉಡುಪಿ ಬಳಿ ಹಿಟ್‌ ಆ್ಯಂಡ್‌ ರನ್‌, ಬೈಕ್‌ ಸವಾರ ಸಾವು

ಮೃತ ವ್ಯಕ್ತಿಯನ್ನು ಪ್ರತೀಶ್ ಪ್ರಸಾದ್ ಎಂದು ಗುರುತಿಸಲಾಗಿದ್ದು, ಗಾಯಾಳು ನಿಹಾಲ್ ವಿಲ್ಸನ್ (29) ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ರಾತ್ರಿ ಉಡುಪಿಯ (Udupi news) ಕರಾವಳಿ ಜಿಲ್ಲೆಯ ಕಾಪುವಿನಿಂದ ಪಡುಬಿದ್ರಿಯ ಕಡೆಗೆ ಪ್ರಯಾಣಿಸುತ್ತಿದ್ದಾಗ ಅಪರಿಚಿತ ವಾಹನವೊಂದು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು.

ಉಡುಪಿ ಬಳಿ ಹಿಟ್‌ ಆ್ಯಂಡ್‌ ರನ್‌, ಬೈಕ್‌ ಸವಾರ ಸಾವು

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 13, 2025 6:52 AM

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಮೂಲೂರು ಬಳಿ ಅಪರಿಚಿತ ವಾಹನವೊಂದು (Hit and Run) ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ (Road Accident) ಪರಿಣಾಮ 29 ವರ್ಷದ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಪ್ರತೀಶ್ ಪ್ರಸಾದ್ ಎಂದು ಗುರುತಿಸಲಾಗಿದ್ದು, ಗಾಯಾಳು ನಿಹಾಲ್ ವಿಲ್ಸನ್ (29) ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ರಾತ್ರಿ ಉಡುಪಿಯ (Udupi news) ಕರಾವಳಿ ಜಿಲ್ಲೆಯ ಕಾಪುವಿನಿಂದ ಪಡುಬಿದ್ರಿಯ ಕಡೆಗೆ ಪ್ರಯಾಣಿಸುತ್ತಿದ್ದಾಗ ಅಪರಿಚಿತ ವಾಹನವೊಂದು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು.

ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಿಸದೇ ಪ್ರತೀಶ್ ಸಾವನ್ನಪ್ಪಿದ್ದಾರೆ. ಮೂಳೆ ಮುರಿತ ಸೇರಿದಂತೆ ಹಲವು ಗಾಯಗಳಿಂದ ಬಳಲುತ್ತಿದ್ದ ನಿಹಾಲ್ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಟ್ ಆ್ಯಂಡ್ ರನ್ ಮಾಡಿ ಪರಾರಿಯಾದ ವಾಹನವನ್ನು ಗುರುತಿಸಲು ಪೊಲೀಸರು ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನೂ ಯಾವುದೇ ನಿರ್ದಿಷ್ಟ ಪುರಾವೆಗಳು ಕಂಡುಬಂದಿಲ್ಲ ಎಂದು ಅವರು ಹೇಳಿದರು. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಯಾದಗಿರಿ: ಕೌಟುಂಬಿಕ ಕಲಹದಿಂದ ನೊಂದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ವಡಗೇರಾ ತಾಲೂಕಿನ ಕಂಠಿ ತಾಂಡಾದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ನೀಲಾಬಾಯಿ ಶಂಕರ್ (35) ಪುತ್ರಿಯರಾದ ರಾಜೇಶ್ವರಿ (10) ನಿಶಾ (4) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಶೀಲ ಶಂಕಿಸಿ ಗಂಡನ ನಿರಂತರ ಕಿರುಕುಳ ನೀಡಿದ್ದೆ ಮಹಿಳೆಯ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಸಂಬಂಧಿಕರೊಬ್ಬರು ಆರೋಪಿಸಿದ್ದಾರೆ.

ಮೃತ ದುರ್ದೈವಿ ನೀಲಾಬಾಯಿಗೆ ನಾಲ್ವರು ಪುತ್ರಿಯರು, ಒರ್ವ ಪುತ್ರ ಒಟ್ಟು ಐದು ಜನ ಮಕ್ಕಳಿದ್ದು, ಬೇಬಿ (12) ಹಾಗೂ 11 ತಿಂಗಳು ಗಂಡು ಮಗು ಶೆವಾನನ್ನು ಮನೆಯಲ್ಲಿ ಬಿಟ್ಟು, ಇನ್ನುಳಿದ ಮೂವರು ಹೆಣ್ಣು ಮಕ್ಕಳನ್ನು ಜತೆಯಲ್ಲಿ ಕರೆದುಕೊಂಡು ತಾಂಡಾದ ಬಳಿ ಇರುವ ಬಾವಿ ಬಳಿ ಹೋಗಿದ್ದಾಳೆ. ಮೊದಲು ಇಬ್ಬರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿದ್ದಾಳೆ, ಇನ್ನೊಬ್ಬ ಮಗಳು ಸಂಜು (6) ಬಾವಿಗೆ ತಳ್ಳುವಾಗ ತಪ್ಪಿಸಿಕೊಂಡು ಓಡಿ ಹೋಗಿ ತಾಂಡಾದಲ್ಲಿ ಈ ವಿಷಯ ತಿಳಿಸಿದ್ದಾಳೆ. ಅಲ್ಲಿನ ನಿವಾಸಿಗಳು ಬಾವಿಯ ಹತ್ತಿರ ಬರುವಷ್ಟರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ವಿಷಯ ತಿಳಿದ ಸಂಬಂಧಿಕರು ಮತ್ತು ತಾಂಡಾದ ಜನರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿ ಶಂಕರ್, ಡಿವೈಎಸ್ಪಿ ಅರುಣ್ ಕುಮಾರ್, ತಹಸೀಲ್ದಾರ್ ಶ್ರೀನಿವಾಸ್ ಚಾಪೆಲ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ: Honey Trap Case: ಪಪಂ ಮಾಜಿ ಅಧ್ಯಕ್ಷನಿಗೆ ಹನಿಟ್ರ್ಯಾಪ್‌ ಖೆಡ್ಡಾ, 20 ಲಕ್ಷಕ್ಕೆ ಬೇಡಿಕೆ; ಇಬ್ಬರು ಯುವತಿಯರು ವಶಕ್ಕೆ