ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Murder Attempt: ಗೃಹ ಸಚಿವ ಪರಮೇಶ್ವರ್‌ ಆಪ್ತನ ಕೊಲೆ ಯತ್ನ, ಅಂಕೋಲಾದಲ್ಲಿ ಹಾಡಹಗಲೇ ದಾಳಿ

ಕಳೆದ ಬುಧವಾರ ಮಧ್ಯಾಹ್ನ ಗೋಪಾಲಕೃಷ್ಣ ನಾಯಕ್ ಅವರು ಅಂಕೋಲಾದಲ್ಲಿ ಇದ್ದಾಗ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ, ಆರೋಪಿಗಳು ಅತ್ಯಂತ ಕ್ರೂರವಾಗಿ ನಾಯಕ್ ಅವರ ತಲೆಗೆ ಚಾಕುವಿನಿಂದ ಹಲವು ಬಾರಿ ಚುಚ್ಚಿ ಕೊಲೆಗೆ ಯತ್ನಿಸಿರುವುದು ಸೆರೆಯಾಗಿದೆ.

ಕೊಲೆ ಯತ್ನ

ಕಾರವಾರ, ಮಾ.31: ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ (Home minister G Parameshwar) ಅವರ ಆಪ್ತ ಹಾಗೂ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ನಡೆದ ಭೀಕರ ಹತ್ಯೆ ಯತ್ನ (Murder Attempt) ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಮಾರ್ಚ್ 25ರಂದು ಅಂಕೋಲಾದಲ್ಲಿ ಹಾಡಹಗಲೇ ನಡೆದ ಈ ದಾಳಿಯ ಮತ್ತೊಂದು ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ.

ಕಳೆದ ಬುಧವಾರ ಮಧ್ಯಾಹ್ನ ಗೋಪಾಲಕೃಷ್ಣ ನಾಯಕ್ ಅವರು ಅಂಕೋಲಾದಲ್ಲಿ ಇದ್ದಾಗ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ, ಆರೋಪಿಗಳು ಅತ್ಯಂತ ಕ್ರೂರವಾಗಿ ನಾಯಕ್ ಅವರ ತಲೆಗೆ ಚಾಕುವಿನಿಂದ ಹಲವು ಬಾರಿ ಚುಚ್ಚಿ ಕೊಲೆಗೆ ಯತ್ನಿಸಿರುವುದು ಸೆರೆಯಾಗಿದೆ. ಹಗಲು ಹೊತ್ತಿನಲ್ಲೇ ನಡೆದ ಈ ಕೃತ್ಯ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಏಳು ಆರೋಪಿಗಳ ಬಂಧನ: ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ, ದಾಳಿಯಲ್ಲಿ ಭಾಗಿಯಾಗಿದ್ದ ಗೋವಾ ಮೂಲದ ಏಳಕ್ಕೂ ಹೆಚ್ಚು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

Murder Case: ಪತಿಯಿಂದ ನಡುರಸ್ತೆಯಲ್ಲಿ ಪತ್ನಿಯ ಬರ್ಬರ ಕೊಲೆ, ಶವದ ಮೇಲೆ ಕಾರು ಹತ್ತಿಸಿ ವಿಕೃತಿ

ಸುಪಾರಿ ದಂಧೆಯ ಶಂಕೆ: ಪ್ರಾಥಮಿಕ ತನಿಖೆಯ ಪ್ರಕಾರ, ಇದೊಂದು ಸುಪಾರಿ (Contract Killing) ನೀಡಿದ ಪ್ರಕರಣ ಎನ್ನಲಾಗುತ್ತಿದೆ. ಬಂಧಿತರು ಕೇವಲ ದಾಳಿ ಮಾಡಿದವರಾಗಿದ್ದು, ಈ ಹತ್ಯೆ ಯತ್ನಕ್ಕೆ ಸುಪಾರಿ ಕೊಟ್ಟ ಅಸಲಿ ಮಾಸ್ಟರ್ ಮೈಂಡ್ ಯಾರು ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸುಪಾರಿ ಕೊಟ್ಟ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ರಾಜಕೀಯ ಸಂಚಲನ: ಗೃಹ ಸಚಿವರ ಆಪ್ತರ ಮೇಲೆಯೇ ಇಂತಹ ದಾಳಿ ನಡೆದಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗಾಯಾಳು ಗೋಪಾಲಕೃಷ್ಣ ನಾಯಕ್ ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಹರೀಶ್‌ ಕೇರ

View all posts by this author