ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಚಿಕ್ಕಬಳ್ಳಾಪುರದಲ್ಲಿ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಭೀಕರ ಅಪಘಾತ; ಇಬ್ಬರು ಸಾವು

ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಭೀಕರ ಅಪಘಾತ ಉಂಟಾಗಿದ್ದು, ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಂಧ್ರಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಪ್ರಯಾಣಿಕ ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಉಮಾಕಾಂತ್ ರಾವ್ ಮೃತಪಟ್ಟಿದ್ದಾರೆ.

ಸಂಗ್ರಹ ಚಿತ್ರ

ಚಿಕ್ಕಬಳ್ಳಾಪುರ: ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಭೀಕರ ಅಪಘಾತ (Road Accident) ಉಂಟಾಗಿದ್ದು, ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಂಧ್ರಪ್ರದೇಶ (Andhra Pradesh) ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಪ್ರಯಾಣಿಕ ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಉಮಾಕಾಂತ್ ರಾವ್ (77) ಪ್ರಯಾಣಿಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಗಾಯಾಳುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸೀಟಿನಲ್ಲೇ ಸಿಲುಕಿಕೊಂಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್ ಮುಂಭಾಗವನ್ನ ಎಳೆದು ಚಾಲಕನ ಮೃತದೇಹವನ್ನ ಹೊರತೆಗೆದರು.

ಪ್ರತ್ಯೇಕ ಘಟನೆಯಲ್ಲಿ, ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಮೇನಾ ಗೋಡಿ ಗ್ರಾಮದ ಬಳಿ ಅಷ್ಟ- ಶುಜಲ್‌ಪುರ ಹೆದ್ದಾರಿಯಲ್ಲಿ ಟ್ರಕ್ ಒಂದು ಎಸ್‌ಯುವಿ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರದಿಂದಲೇ ದೊಡ್ಡ ಶಬ್ದ ಕೇಳಿಬಂದಿತು ಎಂದು ಸ್ಥಳೀಯರು ಹೇಳಿದ್ದು, ಈ ಶಬ್ಧ ಕೇಳಿ ತಕ್ಷಣ ಸ್ಥಳಕ್ಕೆ ಧಾವಿಸಿದರು. ಎಸ್‌ಯುವಿ (ಬೊಲೆರೊ) ಒಳಗೆ ಸಿಲುಕಿಕೊಂಡಿದ್ದ ಸಂತ್ರಸ್ತರ ರಕ್ತ ರಸ್ತೆಯಾದ್ಯಂತ ಹರಡಿಕೊಂಡಿತ್ತು. ಈ ಭೀಕರ ದೃಶ್ಯಗಳನ್ನು ಕಂಡ ಜನರು ಆಘಾತಕ್ಕೊಳಗಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಪೊಲೀಸರು ಆರಂಭದಲ್ಲಿ ನಾಲ್ಕು ಸಾವುನೋವುಗಳನ್ನು ವರದಿ ಮಾಡಿದ್ದರು. ಆದರೆ, ಚಿಕಿತ್ಸೆಯ ಸಮಯದಲ್ಲಿ ಮತ್ತೊಬ್ಬ ಗಾಯಗೊಂಡ ವ್ಯಕ್ತಿ ಸಾವನ್ನಪ್ಪಿದ್ದಾನೆ ಹೀಗಾಗಿ ಸಾವಿನ ಸಂಖ್ಯೆ ಐದಕ್ಕೆ ಏರಿಕೆ ಕಂಡಿದೆ.

ಥೈಲೆಂಡ್‌ನಲ್ಲಿ ಭೀಕರ ಅಪಘಾತ: 11 ವರ್ಷದ ಬಾಲಕ ಚಾಲನೆ ಮಾಡಿದ ಟ್ರಕ್‌ ಹರಿದು 9 ಭಿಕ್ಷುಕರ ದುರ್ಮರಣ

ಬೊಲೆರೊದಲ್ಲಿ ಒಂಬತ್ತು ಜನರು ಪ್ರಯಾಣಿಸುತ್ತಿದ್ದರು. ಅವರೆಲ್ಲರೂ ರಾಜ್‌ಗಢ ಜಿಲ್ಲೆಯ ನಿವಾಸಿಗಳಾಗಿದ್ದು, ವೈದ್ಯಕೀಯ ಅಪಾಯಿಂಟ್‌ಮೆಂಟ್‌ಗಾಗಿ ಅಷ್ಟಾಗೆ ಪ್ರಯಾಣಿಸುತ್ತಿದ್ದರು ಎಂದು ಉಪ - ವಿಭಾಗೀಯ ಪೊಲೀಸ್ ಅಧಿಕಾರಿ (SDOP) ಅಷ್ಟ ದಾಮೋದರ್ ಗುಪ್ತಾ ಹೇಳಿದ್ದಾರೆ.

Vishakha Bhat Heggar

View all posts by this author