ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಿಂತಾಮಣಿ ಬಳಿ ಭೀಕರ ಅಪಘಾತ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಮೃತರನ್ನು ಆಂಧ್ರಪ್ರದೇಶದ ಮದನಪಲ್ಲಿ ನಿವಾಸಿ ಕೆಂಚಲ್ಲ ಮಧು ನಾಯ್ಡು (28) ಎಂದು ಗುರುತಿಸ ಲಾಗಿದೆ. ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾ ಗಿದ್ದು, ಸವಾರ ಗಂಭೀರವಾಗಿ ಮೃತಪಟ್ಟಿದ್ದಾರೆ.

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

-

Profile
Ashok Nayak Aug 12, 2026 10:51 PM

ಚಿಂತಾಮಣಿ: ಚಿಂತಾಮಣಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವೈಜಕೂರು ಮತ್ತು ಜೋಡಿ ರಸ್ತೆಯ ಮಧ್ಯೆ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಆಂಧ್ರಪ್ರದೇಶದ ಮದನಪಲ್ಲಿ ನಿವಾಸಿ ಕೆಂಚಲ್ಲ ಮಧು ನಾಯ್ಡು (28) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸವಾರ ಗಂಭೀರವಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Shidlaghatta Crime: ಅಕ್ರಮವಾಗಿ ಸಾಗಿಸುತ್ತಿದ್ದ ಗೋಧಿ ಕ್ಯಾಂಟರ್ ಸೆರೆ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಅಪಘಾತದ ಬಳಿಕ ಹೆದ್ದಾರಿಯಲ್ಲಿ ಮೃತದೇಹ ಹಾಗೂ ಅವಶೇಷಗಳು ಬಿದ್ದಿದ್ದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಮಾಹಿತಿ ನೀಡಿ ದರೂ ಪೊಲೀಸರು ತಡವಾಗಿ ಸ್ಥಳಕ್ಕೆ ಬಂದಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ದರು. ಬಳಿಕ ಹೆದ್ದಾರಿ ಗಸ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ಸುಗಮಗೊಳಿಸಿದರು.

ಮೃತದೇಹವನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನ ಹಾಗೂ ಚಾಲಕನ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.