ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಸರಾ ವೇಳೆ ದೇಶವನ್ನೇ ಬೆಚ್ಚಿ ಬೀಳಿಸಿದ ಘೋರ ಕೃತ್ಯ: ಮೂವರು ಅಪ್ರಾಪ್ತರು ಸೇರಿ ಏಳು ಮಂದಿಯಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ದಸರಾ ಹಬ್ಬದ ವೇಳೆ ತೆಲಂಗಾಣದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮೂವರು ಅಪ್ರಾಪ್ತರು ಸೇರಿದಂತೆ 7 ಮಂದಿಯನ್ನು ಬಂಧಿಸಲಾಗಿದೆ. ಪೋಷಕರು ಕೆಲಸಕ್ಕಾಗಿ ಹೊರಗೆ ಹೋಗಿದ್ದ ವೇಳೆ ಬಾಲಕಿಯನ್ನು ಅಪಹರಿಸಿ ನೆರೆಯ ಗ್ರಾಮಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಲಾಗಿದೆ.

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: 7 ಮಂದಿಯ ಬಂಧನ

ಸಂಗ್ರಹ ಚಿತ್ರ -

ತೆಲಂಗಾಣ: ದಸರಾ (dasara) ಎಂದರೆ ದೇವಿಯನ್ನು ಆರಾಧಿಸುವ ಹಬ್ಬ. ಈ ಸಂದರ್ಭದಲ್ಲಿ ಕನ್ಯೆಯರನ್ನು ದೇವಿಯ ಸ್ವರೂಪ ಎಂದು ಭಾವಿಸಿ ಪೂಜಿಸಲಾಗುತ್ತದೆ. ಇಂತಹ ಸಂದರ್ಭದಲ್ಲೇ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ( physical abuse) ನಡೆಸಿರುವ ಘಟನೆ ತೆಲಂಗಾಣದಲ್ಲಿ (Telangana crime) ನಡೆದಿದೆ. ಸಿದ್ದಿಪೇಟೆ ಜಿಲ್ಲೆಯ 15 ವರ್ಷದ ಬಾಲಕಿಯ ಮೇಲೆ ಏಳು ಮಂದಿ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಪ್ರಾಪ್ತರು ಸೇರಿದಂತೆ ಏಳು ಮಂದಿಯನ್ನು ತೆಲಂಗಾಣ ಪೊಲೀಸರು (telangana police) ಬಂಧಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು ಬಾಲಕಿಯ ಪೋಷಕರು ಜಮೀನಿನಲ್ಲಿ ಕೆಲಸಕ್ಕೆಂದು ಹೋಗಿದ್ದ ವೇಳೆ ಏಳು ಮಂದಿ ಬಾಲಕಿಯನ್ನು ಅಪಹರಿಸಿ ನೆರೆಯ ಗ್ರಾಮವೊಂದಕ್ಕೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ 'ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ' ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಜನದಟ್ಟಣೆಯ ರಸ್ತೆಯಲ್ಲೇ ಬೈಕ್ ಸವಾರನನ್ನು ಬೆನ್ನಟ್ಟಿ ಕೊಲೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ಪೋಷಕರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ 15 ವರ್ಷದ ಬಾಲಕಿಯೊಬ್ಬಳ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಏಳು ಮಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆರೋಪಿಗಳು ಬಾಲಕಿಯನ್ನು ಅಪಹರಿಸಿ ನೆರೆಯ ಗ್ರಾಮವೊಂದಕ್ಕೆ ಕರೆದೊಯ್ದಿದ್ದು ಅಲ್ಲಿ ಈ ಅಪರಾಧ ಕೃತ್ಯವನ್ನು ನಡೆಸಿದ್ದಾರೆ. ಮರುದಿನ ಬೆಳಗ್ಗೆ ಬಾಲಕಿಯನ್ನು ಆರೋಪಿಗಳು ಕರೆತಂದು ಮರಳಿ ಗ್ರಾಮದ ಬಳಿ ಬಿಟ್ಟು ಹೋದರು.

KSOU Exam Scam: ಶಿವಮೊಗ್ಗದಲ್ಲಿ ನಡೆದ ಕೆಎಸ್‌ಒಯು ಪರೀಕ್ಷೆಯಲ್ಲಿ ಸಾಮೂಹಿಕ ನಕಲು; ಹಣ ಪಡೆದು ಕಾಪಿ ಮಾಡಲು ಅವಕಾಶ?

ಮನೆಗೆ ಮರಳಿದ ಬಾಲಕಿ ಪೋಷಕರಿಗೆ ನಡೆದ ಘಟನೆಯ ಬಗ್ಗೆ ತಿಳಿಸಿದಳು. ಕೂಡಲೇ ಆಕೆಯ ತಂದೆ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ತನಿಖೆ ಆರಂಭಿಸಿದ ಪೊಲೀಸರು ಏಳು ಮಂದಿ ಆರೋಪಿಗಳನ್ನು ಕೂಡ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಚೆರಿಯಾಲ್ ಪಟ್ಟಣ ಮತ್ತು ಧೂಲ್‌ಮಿಟ್ಟಾ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.