ಚಿಂತಾಮಣಿ, ಆ. 16: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ 26 ವರ್ಷದ ಗೃಹಿಣಿಯೊಬ್ಬರು ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ದೂರು ದಾಖಲಾಗಿದೆ. ಮೃತರನ್ನು ಮಮತಾಶ್ರೀ ಎಂದು ಗುರುತಿಸಲಾಗಿದೆ (Chikkaballapur News). ಸುಮಾರು ಐದು ವರ್ಷಗಳ ಹಿಂದೆ ಮೋಹನ್ ರೆಡ್ಡಿ ಅವರನ್ನು ವಿವಾಹವಾಗಿದ್ದ ಮಮತಾಶ್ರೀ ಅವರಿಗೆ ನಾಲ್ಕು ವರ್ಷದ ಗಂಡು ಮಗುವಿದೆ.
ಇತ್ತೀಚೆಗೆ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ. ಘಟನೆಗೂ ಮುನ್ನ ಮಮತಾಶ್ರೀ ಬರೆದಿಟ್ಟಿದ್ದ ಪತ್ರವೊಂದು ಪೊಲೀಸರಿಗೆ ದೊರೆತಿದ್ದು, ಅದರಲ್ಲಿ ಮಗುವಿನ ಆರೈಕೆ ಕುರಿತು ಕೆಲವು ಉಲ್ಲೇಖಗಳಿವೆ ಎಂದು ತಿಳಿದುಬಂದಿದೆ.
ಮೃತರ ತಂದೆ ನೀಡಿದ ದೂರಿನ ಆಧಾರದ ಮೇಲೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆಗೆ ಕಾರಣ, ಕೌಟುಂಬಿಕ ಪರಿಸ್ಥಿತಿ ಹಾಗೂ ಪತ್ರದ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ. ತನಿಖೆಯ ನಂತರವೇ ಘಟನೆಯ ನಿಖರ ಕಾರಣ ತಿಳಿದು ಬರಬೇಕಿದೆ.
ಮಮತಾಶ್ರೀ ಬರೆದ ಡೆತ್‌ನೋಟ್‌ನಲ್ಲಿ ತಮ್ಮ 4 ವರ್ಷದ ಮಗನನ್ನು ತಮ್ಮ ಪೋಷಕರ ವಶಕ್ಕೆ ಒಪ್ಪಿಸಬೇಕು ಹಾಗೂ ಅಂತ್ಯ ಸಂಸ್ಕಾರದಲ್ಲಿ ಪತಿ ಭಾಗವಹಿಸಬಾರದು ಎಂದು ಉಲ್ಲೇಖಿಸಿದ್ದಾರೆ. ವರದಕ್ಷಿಣೆ ಕಿರುಕುಳ ಸೇರಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸರಣಿ ಆತ್ಮಹತ್ಯೆಗೆ ಮತ್ತೊಂದು ಸೇರ್ಪಡೆ; ಗದಗದಲ್ಲಿ ಇಂಜಿನಿಯರ್ ಆತ್ಮಹತ್ಯೆ
ಕೌಟುಂಬಿಕ ಕಲಹ; ಇಬ್ಬರು ಮಕ್ಕಳನ್ನು ಕೊಂದು, ಆತ್ಮಹತ್ಯೆಗೆ ಯತ್ನಿಸಿದ ತಾಯಿ
ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬರು, ಇಬ್ಬರು ಪುಟ್ಟ ಮಕ್ಕಳಿಗೆ ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಕುಡಿಸಿ, ತಾನೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಇತ್ತೀಚೆಗೆ ಯಶವಂತಪುರದ ಮತ್ತಿಕೆರೆಯಲ್ಲಿ ಸಂಭವಿಸಿತ್ತು. ಘಟನೆಯಲ್ಲಿ ನಾಲ್ಕು ವರ್ಷದ ನಿವೇದ್ ಚೌದರಿ ಮತ್ತು ಎರಡು ವರ್ಷದ ನಿರ್ಮಲ್ ಚೌದರಿ ಮೃತಪಟ್ಟಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ತಾಯಿ ಪವಿತ್ರಾ ಸದ್ಯ ಚೇತರಿಸಿಕೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಮೂಲತಃ ಪಾವಗಡದವರಾದ ಪ್ರಶಾಂತ್ ಐದಾರು ವರ್ಷಗಳಿಂದ ಮತ್ತಿಕೆರೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಮತ್ತು ಪತ್ನಿ ಪವಿತ್ರಾ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.
ಕ್ರೈಂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.