ರಾಮನಗರ, ಆ. 19: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ತವರು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಸದ್ಯ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ (Ramanagara News). ಇತ್ತ ರಾಮನಗರ ತಾಲೂಕಿನ ಭೈರಮಂಗಲದ ವೃಷಭಾವತಿ ನಾಲೆಯಲ್ಲಿ ಕಂತೆ ಕಂತೆ ನೋಟುಗಳು ತೇಲುತ್ತಿರುವುದನ್ನು ಕಂಡು ಬಂದಿದ್ದು, ಘಟನೆಯ ವಿಡಿಯೊ ವೈರಲ್ ಆಗಿದೆ. ಅತ್ತ ರಾಮನಗರದ ದೊಡ್ಡೇರಿ ಗ್ರಾಮದ ಬಳಿ ಫಾರ್ಮ್‌ಹೌಸ್‌ನಲ್ಲಿ ನಕಲಿ ಔಷಧ ದಂಧೆ ಜಾಲ ಪತ್ತೆಯಾಗಿದೆ. ಆಘಾತಕಾರಿ ಸಂಗತಿ ಎಂದರೆ ಈ ನಕಲಿ ಔಷಧ ಜಾಲ ಪೊಲೀಸರ ಗಮನಕ್ಕೆ ಬಾರದೆ ಒಂದೂವರೆ ವರ್ಷದಿಂದ ಕಾರ್ಯ ನಿರ್ವಹಿಸುತ್ತಿತ್ತು ಎಂದು ಮೂಲಗಳು ತಿಳಿಸಿವೆ. ಸದ್ಯ ಈ ಎರಡು ಕಾರಣ ಮುಂದಿಟ್ಟುಕೊಂಡು ಬಿಜೆಪಿ ಆಡಳಿತರೂಢ ಕಾಂಗ್ರೆಸ್ ವಿರುದ್ಧ ಮುಗಿ ಬಿದ್ದಿದೆ.
ಭೈರಮಂಗಲದ ವೃಷಭಾವತಿ ನಾಲೆಯಲ್ಲಿ 500 ಮುಖಬೆಲೆಯ ಸುಮಾರು 20 ಕಂತೆ ನೋಟುಗಳು ನೀರಿನಲ್ಲಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಆರಂಭದಲ್ಲಿ ಅಚ್ಚರಿಗೊಳಗಾದರು. ಮೊದಲಿಗೆ ಅಸಲಿ ಹಣವೇ ಎಂದುಕೊಳ್ಳಲಾಗಿತ್ತು. ಆದರೆ ಪರಿಶೀಲಿಸಿದಾಗ ಎಲ್ಲ ನೋಟುಗಳು ನಕಲಿ ಎಂದು ತಿಳಿದು ಬಂದಿದೆ. ಸದ್ಯ ಈ ಘಟನೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯಲ್ಲಿ ಖೋಟಾ ನೋಟು ದಂಧೆ ಸಕ್ರಿಯವಾಗಿದ್ಯಾ ಎನ್ನುವು ಅನುಮಾನ ಕಾಡುತ್ತಿದೆ. ಈ ನೋಟುಗಳು ಬಂದಿದ್ದು ಎಲ್ಲಿಂದ? ಎಸೆದಿದ್ದು ಯಾರು? ಎನ್ನುವ ಪ್ರಶ್ನೆಯನ್ನು ಈ ಘಟನೆ ಹುಟ್ಟು ಹಾಕಿದ್ದು, ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ವೃಷಭಾವತಿ ನದಿಯಲ್ಲಿ ತೇಲಿದ ಕಂತೆ ಕಂತೆ ನೋಟುಗಳು:
ನಕಲಿ ಔಷಧ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ
ಇನ್ನು ದೊಡ್ಡೇರಿ ಗ್ರಾಮದ ಬಳಿ ಫಾರ್ಮ್‌ಹೌಸ್‌ನಲ್ಲಿ ನಕಲಿ ಔಷಧ ದಂಧೆ ಜಾಲ ಪತ್ತೆಯಾದ ಬೆನ್ನಲ್ಲೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ವಿದೇಶದಲ್ಲಿರುವ ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ದಾರೆ.ಈ ದಂಧೆಯ ಜಾಲ ಹಲವು ರಾಜ್ಯಗಳಿಗೆ ವಿಸ್ತರಿಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಸಮಗ್ರ ತನಿಖೆ ಕೈಗೆತ್ತಿಕೊಂಡಿದ್ದಾರೆ.
ದೊಡ್ಡೇರಿ ಗ್ರಾಮದ ಬಳಿಯ 10 ಎಕರೆ ಫಾರ್ಮ್ ಹೌಸ್ನಲ್ಲಿ ನಕಲಿ ಔಷಧಗಳನ್ನು ತಯಾರಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಲೈಸನ್ಸ್ ಪಡಯದೇ ಕಂಪನಿ ಕಾರ್ಯನಿರ್ವಹಿಸುತ್ತಿದ್ದುದು ಪತ್ತೆಯಾಗಿದೆ. ಕಡಿಮೆ ಬೆಲೆಯ ಔಷಧಿಗಳನ್ನು ಹೊರ ರಾಜ್ಯಗಳಿಂದ ತರಿಸಿ, ಪ್ರತಿಷ್ಠಿತ ಎಂಎನ್‌ಸಿ ಕಂಪನಿಗಳ ಲೇಬಲ್ ಅಂಟಿಸಿ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಆರೋಪಿಗಳು ಹಿಮಾಚಲ ಪ್ರದೇಶ, ತೆಲಂಗಾಣ ಸೇರಿ ಹಲವು ರಾಜ್ಯಗಳಿಂದ ಅಗ್ಗದ ಔಷಧ ತರಿಸುತ್ತಿದ್ದರು ಎನ್ನಲಾಗಿದೆ.
₹500 ನೋಟುಗಳೇ ನಕಲಿ ನೋಟು ತಯಾರಕರ ಟಾರ್ಗೆಟ್!
ಪತ್ತೆಯಾಗಿದ್ದು ಹೇಗೆ?
ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿ, ಪ್ರಕರಣದ ಪ್ರಮುಖ ಆರೋಪಿ ಪ್ರಶಾಂತ್ ಸದ್ಯ ವಿದೇಶದಲ್ಲಿದ್ದಾನೆ ಎಂದು ತಿಳಿಸಿದ್ದಾರೆ. ಫಾರ್ಮ್‌ಹೌಸ್‌ನಲ್ಲಿ ಅನುಮಾನಾಸ್ಪದವಾಗಿ ವಾಹನಗಳು ಓಡಾಡುತ್ತಿರುವುದು ಹಾಗೂ ಬೃಹತ್ ಸಂಖ್ಯೆಯಲ್ಲಿ ಬಾಕ್ಸ್‌ಗಳನ್ನು ಲೋಡ್ ಮಾಡುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ತಿಳಿಸಿದ ಬಳಿಕ ಕೃತ್ಯ ಬೆಳಕಿಗೆ ಬಂದಿದೆ. ದಾಳಿ ವೇಳೆ ಸುಮಾರು 5 ಕೋಟಿ ರುಪಾಯಿ ಮೌಲ್ಯದ ನಕಲಿ ಔಷಧಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.