ಪತ್ನಿ ಕತ್ತು ಹಿಸುಕಿ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿರಾಯ ಅರೆಸ್ಟ್
ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಕಥೆ ಕಟ್ಟಿದ್ದ ಪತಿ ಅರೆಸ್ಟ್ ಆಗಿದ್ದಾನೆ. ಶೀಲ ಶಂಕಿಸಿ ಪತ್ನಿಯನ್ನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಕಥೆ (Murder Case) ಕಟ್ಟಿದ್ದ ಪತಿ ಅರೆಸ್ಟ್ ಆಗಿದ್ದಾನೆ. ಶೀಲ ಶಂಕಿಸಿ ಪತ್ನಿಯನ್ನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಶಾ ಎಂಬ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದ ಗಂಡ ವಿರೂಪಾಕ್ಷ ಹಾಗೂ ಕೊಲೆ ಮಾಡಲು ಸಹಕರಿಸಿದ ಸ್ನೇಹಿತ ಪುಂಡಲಿಕ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆರ್.ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ತಿಂಗಳ 10ನೇ ತಾರೀಖು ಫ್ಯಾನಿಗೆ ನೇಣು ಹಾಕಿಕೊಂಡ ರೀತಿಯಲ್ಲಿ ಆಶಾ ಶವ ಪತ್ತೆಯಾಗಿತ್ತು. ಮೊದಲು ಆರ್. ಆರ್ ನಗರ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದರು, ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಎನ್ನುವುದು ಬೆಳಕಿಗೆ ಬಂದಿದೆ. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪತಿ ವಿರೂಪಾಕ್ಷನನ್ನ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಾನು ಹಾಗೂ ಸ್ನೇಹಿತ ಕೊಲೆ ಮಾಡಿರೋದಾಗಿ ಬಾಯ್ಬಿಟ್ಟಿದ್ದಾರೆ. ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಮೂಲತಃ ತುಮಕೂರು ಜಿಲ್ಲೆ ಕುಣಿಗಲ್ ಮೂಲದ ವಿರೂಪಾಕ್ಷ ಹಾಗೂ ಮೃತ ಆಶಾ, ಕಳೆದ ಆರು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಬೆಂಗಳೂರಿನ ಆರ್.ಆರ್ ನಗರದಲ್ಲಿ ಚಾಟ್ಸ್ ಸೆಂಟರ್ ಇಟ್ಟುಕೊಂಡು ಸಂಸಾರ ಮಾಡುತ್ತಿದ್ದರು. ಆದರೆ ಇಬ್ಬರೆ ನಡುವೆ ಪದೇ ಪದೇ ಜಗಳವಾಗುತ್ತಿತ್ತು.
ಮೂವರು ಪುರುಷರೊಂದಿಗೆ ಅಸಭ್ಯ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಪತ್ನಿ; ಮದುವೆಯಾದ ನಾಲ್ಕೇ ತಿಂಗಳಿಗೆ ಕೊಲೆ ಮಾಡಿದ ಪತಿ
ವಿರೂಪಾಕ್ಷಗೆ ಬೇರೆ ಕಡೆ ಅಕ್ರಮ ಸಂಬಂಧ ಇದೆ ಎಂದು ಮೃತ ಆಶಾ ಮತ್ತು ಪತಿಯ ನಡುವೆ ಗಲಾಟೆಯಾಗಿತ್ತು, ಹೀಗಾಗಿ ಕಳೆದ ಒಂದುವರೆ ತಿಂಗಳಿಂದ ಆಶಾ ಹಾಗೂ ವಿರೂಪಾಕ್ಷ ಪ್ರತ್ಯೇಕವಾಗಿ ವಾಸವಿದ್ದರು, ಇಬ್ಬರ ನಡುವೆ ಕೌಟುಂಬಿಕ ಕಲಹವಿದ್ದ ಕಾರಣ ವಿಚ್ಚೇದನಕ್ಕೂ ಅರ್ಜಿ ಸಲ್ಲಿಸಿದ್ದರು. ಆದ್ರೆ ಇದೇ ತಿಂಗಳ 10 ನೇ ಆಶಾಳನ್ನ ಕುತ್ತಿಗೆ ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ.