ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದುರಂತ ಅಂತ್ಯ ಕಂಡ ಕೌಟುಂಬಿಕ ಕಲಹ: ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಹೊಡೆದು ಕೊಂದ ಪತ್ನಿ

Crime News: ಪತ್ನಿಯು ಮೊಬೈಲ್ ಫೋನ್‌ನಿಂದ ಪತಿ ತಲೆಗೆ ಹೊಡೆದು ಕೊಂದಿರುವ ಟನೆ ಒಡಿಶಾದಲ್ಲಿ ನಡೆದಿದೆ. ತಲೆಗೆ ಗಂಭೀರ ಗಾಯಗೊಂಡ ಪತಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಗಾಯಗೊಂಡ ಸಂತ್ರಸ್ತನನ್ನು ತಕ್ಷಣವೇ ಒಡಿಶಾದ ಬೋಲಂಗೀರ್‌ನಲ್ಲಿರುವ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತಾದರೂ ಮೃತಪಟ್ಟಿದ್ದಾರೆ.

ಮೊಬೈಲ್ ಫೋನ್‌ನಿಂದ ಪತಿಯನ್ನು ಕೊಂದ ಪತ್ನಿ

ಪತ್ನಿಯ ದಾಳಿಯಿಂದ ಗಂಭೀರ ಗಾಯಗೊಂಡ ಪತಿ -

Priyanka P
Priyanka P Jul 13, 2026 6:49 PM

ಭುವನೇಶ್ವರ, ಜು. 13: ಕೌಟುಂಬಿಕ ಕಲಹವೊಂದು ದುರಂತ ಅಂತ್ಯ ಪಡೆದುಕೊಂಡ ಘಟನೆ ಒಡಿಶಾದ (Odisha) ಬೋಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. ಕೌಟುಂಬಿಕ ಜಗಳದ ಬಳಿಕ ಪತಿ ಸಾವಿಗೀಡಾಗಿದ್ದಾರೆ. ಘರ್ಷಣೆ ವೇಳೆ ಪತ್ನಿ ಮೊಬೈಲ್ ಫೋನ್‌ನಿಂದ ಪತಿ ತಲೆಗೆ ಹೊಡೆದಿದ್ದಾಳೆ ಎಂದು ಆರೋಪಿಸಲಾಗಿದೆ. ಶನಿವಾರ (ಜು. 11) ದಂಪತಿ ತಮ್ಮ ನಿವಾಸದಲ್ಲಿ ತೀವ್ರ ಜಗಳವಾಡಿದರು. ಘರ್ಷಣೆಯ ಸಮಯದಲ್ಲಿ, ಪತ್ನಿ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಹೊಡೆದಿದ್ದಾಳೆ. ಇದರಿಂದ ಪತಿಯ ತಲೆಗೆ ಗಂಭೀರ ಗಾಯಗಳಾಗಿದ್ದವು (Crime News). ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಪತಿ ಮೃತಪಟ್ಟಿದ್ದಾರೆ.

ಪತ್ನಿಯ ದಾಳಿಯಿಂದ ತಲೆಗೆ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಬೋಲಂಗೀರ್‌ನಲ್ಲಿರುವ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ನಂತರ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ಗಮನಿಸಿದ ನಂತರ ಡಿಸ್ಚಾರ್ಜ್ ಮಾಡಿ ಮನೆಗೆ ಮರಳಲು ಅನುಮತಿ ನೀಡಿದರು. ಆದರೆ ಮನೆಗೆ ತಲುಪಿದ ಕೂಡಲೇ ಅವರ ಆರೋಗ್ಯ ಅನಿರೀಕ್ಷಿತವಾಗಿ ಹದಗೆಟ್ಟಿತು. ಕುಟುಂಬ ಸದಸ್ಯರು ತುರ್ತು ವೈದ್ಯಕೀಯ ಆರೈಕೆಗಾಗಿ ಅವರನ್ನು ಮತ್ತೆ ಅದೇ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರ ಪ್ರಯತ್ನಗಳ ಹೊರತಾಗಿಯೂ, ಅವರು ಮೃತಪಟ್ಟರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆ ನಿಜವಾದ ಕಾರಣ ಏನು ಎಂಬುದನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯು ಸಾವಿನ ಕಾರಣವನ್ನು ಕಂಡುಹಿಡಿಯುವಲ್ಲಿ ಮತ್ತು ತನಿಖೆಗೆ ಮಾರ್ಗದರ್ಶನ ನೀಡುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿದೆ ಪೋಸ್ಟ್:



ತನಿಖೆ ಮತ್ತು ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಘಟನೆಯು ಸ್ಥಳೀಯ ನಿವಾಸಿಗಳನ್ನು ಆಘಾತಕ್ಕೀಡು ಮಾಡಿದೆ. ಇದು ಕೌಟುಂಬಿಕ ಕಲಹಗಳು ಕೆಲವೊಮ್ಮೆ ಹಿಂಸಾಚಾರಕ್ಕೆ ತಿರುಗಿದಾಗ ಉಂಟಾಗುವ ದುರಂತದತ್ತ ಬೆಳಕು ಚೆಲ್ಲುತ್ತದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ತನಿಖೆ ನಡೆಯುತ್ತಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವ ಮೊದಲು ವಿಧಿವಿಜ್ಞಾನ ಮತ್ತು ವೈದ್ಯಕೀಯ ಸಾಕ್ಷ್ಯಗಳಿಗಾಗಿ ಕಾಯುತ್ತಿದ್ದಾರೆ.

ಮೋಟಾರು ಪಂಪ್ ಕದ್ದರೆಂದು ಯುವಕರಿಬ್ಬರನ್ನು ಕಂಬಕ್ಕೆ ಕಟ್ಟಿ ವಿದ್ಯುತ್ ಶಾಕ್ ನೀಡಿದ ಗ್ರಾಮಸ್ಥರು

ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು. ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ವೈವಾಹಿಕ ಜೀವನ ಆರಂಭವಾದ ಕೆಲವೇ ತಿಂಗಳುಗಳಲ್ಲಿ ಈ ಘಟನೆ ನಡೆದಿದೆ.