ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಗಾಢ ನಿದ್ದೆಯಲ್ಲಿದ್ದ ಪತ್ನಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪತಿ

ಪತ್ನಿಯ ಚಾರಿತ್ರ್ಯ ಶಂಕೆಯಿದ್ದ ಕಾರಣ ಪತಿಯೊಬ್ಬಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಥಣಿ ತಾಲೂಕಿನ ಖಾವತ್‌ಖೋಪ್ ಗ್ರಾಮದ ಮೂಲದ ಶೋಭಾ ಪರಗೊಂಡ ಸರ್ವಾಡ್ ಎಂದು ಗುರುತಿಸಲಾಗಿದೆ.

ಸಂಗ್ರಹ ಚಿತ್ರ

ಬೆಳಗಾವಿ: ಪತ್ನಿಯ ಚಾರಿತ್ರ್ಯ ಶಂಕೆಯಿದ್ದ ಕಾರಣ ಪತಿಯೊಬ್ಬಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ (Murder Case) ಹತ್ಯೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಥಣಿ ತಾಲೂಕಿನ ಖಾವತ್‌ಖೋಪ್ ಗ್ರಾಮದ ಮೂಲದ ಶೋಭಾ ಪರಗೊಂಡ ಸರ್ವಾಡ್ ಎಂದು ಗುರುತಿಸಲಾಗಿದ್ದು, ಆರೋಪಿ ಪರಗೊಂಡ ಸರ್ವಾಡ್ ನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಮಾಹಿತಿ ಪ್ರಕಾರ, ಅಥಣಿ ತಾಲೂಕಿನ ಖವಟಕೊಪ್ಪ ಗ್ರಾಮದ ಮೂಲದ ದಂಪತಿ ಉದ್ಯೋಗದ ನಿಮಿತ್ತ ಕಟಗೇರಿ ಗ್ರಾಮದ ಆವಜೀಕರ ಮಠದಲ್ಲಿ ವಾಸವಾಗಿದ್ದರು. ಶೋಭಾ ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರೆ, ಪರ್ಗೊಂಡ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆರೋಪಿ, ಆಗಾಗ ಜಗಳವಾಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದೇ ಅನುಮಾನದ ಹಿನ್ನೆಲೆಯಲ್ಲಿ ಶೋಭಾ ನಿದ್ರೆಯಲ್ಲಿದ್ದ ವೇಳೆ ಆರೋಪಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ. ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಕೇತನ್‌ ಹತ್ಯೆಗೂ 2 ದಶಕಗಳ ಹಿಂದೆ ನಡೆದ ಬೆಂಗಳೂರು ಕೊಲೆಗೂ ಇದೆ ಸಾಮ್ಯತೆ; ರಿಂಗ್‌ ರೋಡ್‌ ಶುಭಾ ಪ್ರಕರಣ ಮುನ್ನೆಲೆಗೆ ಬಂದಿದ್ದೇಕೆ?

ಒಂಟಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಂಗಸಂದ್ರದ ಮುನಿಯಪ್ಪ ಲೇಔಟ್‌ನಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ಕೃಷ್ಣ ಬರ್ಮನ್ (40) ಕೊಲೆಯಾದ ಮಹಿಳೆ. ಇದನ್ನೂ ಓದಿ: ಮದ್ವೆಗೆ ಒಪ್ಪದೇ ಅವಾಯ್ಡ್‌ ಮಾಡ್ತಿದ್ದ ಪ್ರೇಯಸಿ – ಊಟಕ್ಕೆ ಕರೆದು ಕತ್ತುಕೊಯ್ದು ಕೊಂದ ಪ್ರಿಯಕರ ಮೃತ ಮಹಿಳೆ ಮುನಿಯಪ್ಪ ಲೇಔಟ್‌ನಲ್ಲಿ ಸಣ್ಣ ರೂಮ್ ಮಾಡಿಕೊಂಡಿದ್ದು, ಅಡುಗೆ ಕೆಲಸ ಮಾಡಿಕೊಂಡು ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ಪರಿಚಯಸ್ಥರೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಬೊಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Vishakha Bhat Heggar

View all posts by this author