ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder case: ಕೊಡಲಿಯಿಂದ ಕೊಚ್ಚಿ ಪತ್ನಿ ಹತ್ಯೆಗೈದು ಪತಿ ಪರಾರಿ

Murder case: ನಿತ್ಯ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ಜಗಳ ತಾರಕಕ್ಕೇರಿದ್ದು, ರೊಚ್ಚಿಗೆದ್ದ ಶಿವಪ್ಪ ಪತ್ನಿ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿ ಆಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಕೊಡಲಿಯಿಂದ ಕೊಚ್ಚಿ ಪತ್ನಿ ಹತ್ಯೆಗೈದು ಪತಿ ಪರಾರಿ

ಹರೀಶ್‌ ಕೇರ ಹರೀಶ್‌ ಕೇರ May 22, 2025 9:50 AM

ಕೊಪ್ಪಳ : ಪತಿಯೊಬ್ಬ (Husband) ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು (wife) ಹತ್ಯೆಗೈದ ಆಘಾತಕಾರಿ ಘಟನೆ ಕೊಪ್ಪಳದ (koppala news) ಬೂದಗುಂಪ ಗ್ರಾಮದಲ್ಲಿ ನಡೆದಿದೆ. ಬೂದಗುಂಪ ಗ್ರಾಮದಲ್ಲಿ ಶಿವಪ್ಪ ಎಂಬಾತ ಕೊಡಲಿಯಿಂದ ಕೊಚ್ಚಿ ಪತ್ನಿ ಗಂಗಮ್ಮ ದೊಣ್ಣೆ (38) ಎಂಬವರನ್ನು ಹತ್ಯೆ (Murder case) ಮಾಡಿ ಪರಾರಿಯಾಗಿದ್ದಾರೆ. ಶಿವಪ್ಪ ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ನಿತ್ಯ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ಜಗಳ ತಾರಕಕ್ಕೇರಿದ್ದು, ರೊಚ್ಚಿಗೆದ್ದ ಶಿವಪ್ಪ ಪತ್ನಿ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿ ಆಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸೂಟ್​ಕೇಸ್​ನಲ್ಲಿ ಯುವತಿಯ ಶವ ಪತ್ತೆ

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರೈಲ್ವೆ ಬ್ರಿಡ್ಜ್ ಸಮೀಪ ಅಪರಿಚಿತ ಯುವತಿಯ ಶವ (Dead Body Found) ಸೂಟ್ ಕೇಸ್‌ನಲ್ಲಿ ಪತ್ತೆಯಾಗಿದೆ. ನೀಲಿ ಬಣ್ಣದ ಸೂಟ್ ಕೇಸ್ ಕಂಡಿದ್ದು, ಅದನ್ನು ಪರಿಶೀಲಿಸಿದಾಗ ಸಾರ್ವಜನಿಕರು ಶಾಕ್ ಆಗಿದ್ದಾರೆ. ಸುಮಾರು 18 ವರ್ಷ ವಯಸ್ಸಿನ ಯುವತಿ ಶವ ಸೂಟ್ ಕೇಸ್‌ನಲ್ಲಿ ಪತ್ತೆಯಾಗಿದೆ.

ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಕೈ ಕಾಲುಗಳನ್ನು ಮಡಚಿ ಇಡೀ ದೇಹವನ್ನು ಸೂಟ್ ಕೇಸ್‌ನಲ್ಲಿ ತುಂಬಲಾಗಿದೆ. ಕಿವಿ ಮತ್ತು ಮೂಗಿನಲ್ಲಿ ರಕ್ತಸ್ರಾವ ಆಗಿರುವ ಕುರುಹು ಇದ್ದು, ಉಳಿದಂತೆ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಬೇರೆಲ್ಲೋ ಕೊಲೆಗೈದು ರೈಲಿನಲ್ಲಿ ಸಾಗುವ ವೇಳೆ ಮೃತದೇಹವನ್ನು ಹೊರಗೆ ಎಸೆದಿರುವ ಶಂಕೆ ಇದೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಆರಂಭದಲ್ಲಿ ಸ್ಥಳೀಯರಿಗೆ ಸೂಟ್ ಕೇಸ್‌ನಲ್ಲಿ ಯುವತಿ ಮುಖ ಮಾತ್ರ ಕಾಣಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸೂರ್ಯನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೈಲ್ವೆ ಹಳಿ ಸಮೀಪ ಯುವತಿ ಶವ ಪತ್ತೆ ಹಿನ್ನೆಲೆ ರೈಲ್ವೆ ಕೇಸ್ ದಾಖಲಿಸಿಕೊಳ್ಳಲಿದ್ದಾರೆ ಎಂದು ಪೊಲೀಸರು ಕಾದು ಕುಳಿತಿದ್ದರು. ಆದರೆ ರೈಲ್ವೆ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಬಳಿಕ ಸೂರ್ಯನಗರ ಠಾಣೆ ಪೊಲೀಸರು ‌ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌; ನಟ ದರ್ಶನ್‌ ವಿರುದ್ಧ 132 ಪುಟಗಳ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಕೆ