ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮದುವೆಯಾದ ಕೆಲವೇ ದಿನಕ್ಕೆ ಸಾಫ್ಟ್‌ವೇರ್ ಎಂಜಿನಿಯರ್‌ನನ್ನು ಹತೈಗೈದ ಮಾಜಿ ಪತಿ

ಹೈದರಾಬಾದ್ ವನಸ್ಥಲಿಪುರಂ ಪ್ರದೇಶದಲ್ಲಿ 36 ವರ್ಷದ ಸಾಫ್ಟ್‌ವೇರ್ ಉದ್ಯೋಗಿಯನ್ನು ಆಕೆಯ ಮಾಜಿ ಪತಿ ಕ್ರೂರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ವಿಚ್ಛೇದನದ ಬಳಿಕ ಮಹಿಳೆ ಮರುಮದುವೆಯಾಗಿದ್ದ ಹಿನ್ನೆಲೆಯಲ್ಲಿ ಕೋಪಗೊಂಡ ಆರೋಪಿ ಮನೆಗೆ ತೆರಳಿ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. ತಲೆಗೆ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಜಿ ಪತಿಯಿಂದ ಸಾಫ್ಟ್‌ವೇರ್ ಉದ್ಯೋಗಿಯ ಹತ್ಯೆ

ಮೃತ ಮಹಿಳೆ -

Profile
Sushmitha Jain Feb 18, 2026 11:15 PM

ಹೈದರಾಬಾದ್ಮ ಫೆ. 18: ಹೈದರಾಬಾದ್‌ನ ವನಸ್ಥಲಿಪುರಂ ಪ್ರದೇಶದಲ್ಲಿ ಬುಧವಾರ (ಫೆಬ್ರವರಿ 18) 36 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್‌ನನ್ನು ಆಕೆಯ ಮಾಜಿ ಪತಿಯೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಪೂರ್ವನಿಯೋಜಿತ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಮೃತ ಮಹಿಳೆಯನ್ನು ಸುನೀತಾ ಎಂದು ಗುರುತಿಸಲಾಗಿದ್ದು, ಈ ಘಟನೆಯು ಗ್ರೀನ್ ಸಿಟಿ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ನಡೆದಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಸಿರುವ ತನಿಖಾಧಿಕಾರಿಗಳು, ಆರೋಪಿ ಮಹೇಶ್ ಇತ್ತೀಚೆಗಷ್ಟೇ ಸುನೀತಾ ಅವರಿಂದ ವಿಚ್ಛೇದನ ಪಡೆದಿದ್ದ. ವಿಚ್ಛೇದನದ ಕೆಲವೇ ದಿನಗಳಲ್ಲಿ ಸುನೀತಾ ಮತ್ತೊಂದು ಮದುವೆಯಾಗಿದ್ದರು. ಈ ಬೆಳವಣಿಗೆಯನ್ನು ಅರಗಿಸಿಕೊಳ್ಳಲಾಗದ ಮಹೇಶ್ ಆಕೆಯ ಮೇಲೆ ತೀವ್ರ ದ್ವೇಷ ಹೊಂದಿದ್ದ ಎನ್ನಲಾಗಿದೆ.

ಅಸ್ಸಾಂ 'ಶೂಟಿಂಗ್' ವಿಡಿಯೊ ವಿವಾದ: ದ್ವೇಷ ಪ್ರಚೋದನೆ ಆರೋಪದಡಿ ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ FIR

ಪೊಲೀಸ್ ವರದಿಯ ಪ್ರಕಾರ, ಮಹೇಶ್ ಎರಡು ಚಾಕುಗಳು ಮತ್ತು ಪೆಟ್ರೋಲ್ ಕ್ಯಾನ್‌ನೊಂದಿಗೆ ಸುನೀತಾ ಅವರ ಮನೆಗೆ ತೆರಳಿದ್ದನು. ಅಲ್ಲಿ ಅವರೊಂದಿಗೆ ಜಗಳವಾಡಿದ ನಂತರ, ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಆಕೆಗೆ ಹಲವು ಬಾರಿ ಚಾಕುವಿನಿಂದ ಇರಿದಿದ್ದಲ್ಲದೆ, ತಲೆಗೆ ಫ್ಲವರ್ ಪಾಟ್‌ನಿಂದ ಬಲವಾಗಿ ಹೊಡೆದಿದ್ದಾನೆ. ಈ ಭೀಕರ ಹಲ್ಲೆಯಿಂದಾಗಿ ಸುನೀತಾ ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ಕೃತ್ಯದ ನಂತರ ಮಹೇಶ್ ಸ್ಥಳದಿಂದ ಪರಾರಿಯಾಗಿದ್ದ. ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಮಹೇಶ್ ಪೊಲೀಸ್ ವಶದಲ್ಲಿದ್ದು, ವಿಚಾರಣೆ ಮುಂದುವರಿದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಸುನೀತಾ ಅವರ ಮರುಮದುವೆಯ ಬಗ್ಗೆ ಮಹೇಶ್‌ಗೆ ಇದ್ದ ಕೋಪವೇ ಈ ಕೊಲೆಗೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಈ ಘಟನೆ ನಗರದಲ್ಲಿ ತೀವ್ರ ಸಂಚಲನ ಮೂಡಿಸಿದೆ.