ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಪ್ಪ-ಅಮ್ಮ ಕ್ಷಮಿಸಿ, ನಾನು ಮಾಡುತ್ತಿರೋದು ಸರಿಯಲ್ಲ; ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ಹಾಸ್ಟೆಲ್‌ನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ

Bengaluru Student Death: ಚಿಕ್ಕಬಳ್ಳಾಪುರ ಮೂಲದ ವಿದ್ಯಾರ್ಥಿಯೊಬ್ಬ ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಐಐಎಸ್‌ಸಿಯಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ. ಪೊಲೀಸರು ಸ್ಥಳಕ್ಕೆ ತೆರಳಿ ಕೇಸ್‌ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಐಐಎಸ್‌ಸಿ ವಿದ್ಯಾರ್ಥಿ ಆತ್ಮಹತ್ಯೆ

-

Prabhakara R
Prabhakara R Aug 7, 2026 10:29 PM

ಬೆಂಗಳೂರು: ನಗರದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ (IISC student) ಹಾಸ್ಟೆಲ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. 20 ವರ್ಷದ ರಕ್ಷಣ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಚಿಕ್ಕಬಳ್ಳಾಪುರ ಮೂಲದ ವಿದ್ಯಾರ್ಥಿ, ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ. ಇಂದು ಬೆಳಗ್ಗೆ ಹಾಸ್ಟೆಲ್‌ನ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸದಾಶಿವನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಳಗ್ಗೆ ಎಂದಿನಂತೆ ಸ್ನೇಹಿತರು ವಾಕಿಂಗ್ ಮುಗಿಸಿಕೊಂಡು ಬಂದಾಗ ರಕ್ಷಕ್ ಇದ್ದ ಕೊಠಡಿ ಒಳಗಿನಿಂದ ಲಾಕ್ ಆಗಿರುವುದು ಗೊತ್ತಾಗಿದೆ. ಬಾಗಿಲು ತಟ್ಟಿದರೂ ತೆಗೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕೊಠಡಿಯ ಕಿಟಕಿ ತೆಗೆದು ನೋಡಿದ್ದಾರೆ. ಆಗ ರಕ್ಷಣ್ ಅವರ ಶವ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲಿಸಿದಾಗ ಕೊಠಡಿಯ ಟೇಬಲ್ ಮೇಲೆ ಡೆತ್ ನೋಟ್ ಸಿಕ್ಕಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೀಲ್ಸ್‌ ಗೀಳಿಗೆ ಪತ್ನಿಯನ್ನೇ ಕೊಂದ; ಬೆಂಗಳೂರಿನಿಂದ ಬಿಹಾರಕ್ಕೆ ಓಡಿ ಹೋಗಿದ್ದ ಪತಿ ಬಂಧನ

ಡೆತ್​ನೋಟ್‌ನಲ್ಲಿ "ನಾನು ಮಾಡುತ್ತಿರುವುದು ಸರಿಯಲ್ಲ ಎಂದು ನನಗೆ ಗೊತ್ತು. ಆದರೆ ನನ್ನನ್ನು ನಾನು ನಿಯಂತ್ರಿಸಿಕೊಳ್ಳಲಾಗುತ್ತಿಲ್ಲ. ನಿಜ ಹೇಳಬೇಕೆಂದರೆ, ನಾನೊಬ್ಬ ಸೋತವನು. ಅಪ್ಪ, ಅಮ್ಮ, ದಯವಿಟ್ಟು ನನ್ನನ್ನು ಕ್ಷಮಿಸಿ" ಎಂದು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿದೆ.

ಆಟವಾಡುವ ವೇಳೆ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ (Kushalnagar) ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4 ವರ್ಷದ ಮಗು ಮೃತಪಟ್ಟಿದೆ (Child Death). ಮೃತ ಮಗುವನ್ನು ಅಪೂರ್ವ ಎಂದು ಗುರುತಿಸಲಾಗಿದೆ.

ಈಕೆ ಸತೀಶ್ ಮತ್ತು ಪವಿತ್ರ ದಂಪತಿಯ ಪುತ್ರಿಯಾಗಿದ್ದು, ಈ ದುರ್ಘಟನೆ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಈ ದುರ್ಘಟನೆಯಿಂದ ಬಸವನಹಳ್ಳಿ ಹಾಡಿಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.