ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪರೀಕ್ಷೆಯಲ್ಲಿ ಚಾಟ್ ಜಿಪಿಟಿ ಬಳಸಿ ಸಿಕ್ಕಿಬಿದ್ದ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ವೇಳೆ ಚಾಟ್ ಜಿಪಿಟಿ ಬಳಸಿ ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈಯಲ್ಲಿ ನಡೆದಿದೆ. ಇದರ ಬಳಿಕ ವಿದ್ಯಾರ್ಥಿಗಳ ಪ್ರತಿಭಟನೆ ಭುಗಿಲೆದ್ದಿದೆ. ಐಐಟಿ ಪವಾಯಿ ಕ್ಯಾಂಪಸ್‌ನಲ್ಲಿ ಕಳೆದ ಆರು ತಿಂಗಳಲ್ಲಿ ನಡೆದಿರುವ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

ಐಐಟಿ ವಿದ್ಯಾರ್ಥಿ ಆತ್ಮಹತ್ಯೆ

ಸಂಗ್ರಹ ಚಿತ್ರ -

ಮುಂಬೈ: ಪರೀಕ್ಷೆ ವೇಳೆ ಮೊಬೈಲ್ ಬಳಸಿ ಸಿಕ್ಕಿಬಿದ್ದ ವಿದ್ಯಾರ್ಥಿ ಆತ್ಮಹತ್ಯೆ (self harming) ಮಾಡಿಕೊಂಡ ಬಳಿಕ ಬಾಂಬೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (Institute of Technology Bombay) ವಿದ್ಯಾರ್ಥಿಗಳ ಪ್ರತಿಭಟನೆ ಭುಗಿಲೆದ್ದಿದೆ. ಪರೀಕ್ಷೆಯಲ್ಲಿ ಚಾಟ್ ಜಿಪಿಟಿ ಬಳಸಿ ವಿದ್ಯಾರ್ಥಿ ಸಿಕ್ಕಿಬಿದ್ದಿದ್ದ. ಬಳಿಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಐಐಟಿ ಪವಾಯಿ ಕ್ಯಾಂಪಸ್‌ನಲ್ಲಿ (IIT Powai Campus) ಕಳೆದ ಆರು ತಿಂಗಳಲ್ಲಿ ನಡೆದಿರುವ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ಮೃತ ವಿದ್ಯಾರ್ಥಿಯನ್ನು ಎನರ್ಜಿ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಾಹಿಲ್ ವಾಕೋಡೆ ಎಂದು ಗುರುತಿಸಲಾಗಿದೆ.

ಬಾಂಬೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎನರ್ಜಿ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿರುವ ಸಾಹಿಲ್ ವಾಕೋಡೆ ಎಂಬವರು ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಪರೀಕ್ಷೆಯ ಸಮಯದಲ್ಲಿ ಉತ್ತರಗಳನ್ನು ಪಡೆಯಲು ಪ್ರಶ್ನೆ ಪತ್ರಿಕೆಯನ್ನು ಚಾಟ್ ಜಿಪಿಟಿಗೆ ಅಪ್‌ಲೋಡ್ ಮಾಡಿದ್ದರು. ಆದರೆ ವಿದ್ಯಾರ್ಥಿ ವಿರುದ್ಧ ಯಾವುದೇ ಶಿಸ್ತು ಕ್ರಮವನ್ನು ಕೈಗೊಂಡಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೋಗೇಶ್ ‌ಗೌಡ ಕೊಲೆ ಪ್ರಕರಣ; ಏಳು ಅಪರಾಧಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್

ಸಾಹಿಲ್ ಪ್ರಶ್ನೆ ಪತ್ರಿಕೆಯನ್ನು ಚಾಟ್ ಜಿಪಿಟಿಗೆ ಅಪ್‌ಲೋಡ್ ಮಾಡಿ ಸಿಕ್ಕಿ ಬಿದ್ದ ಬಳಿಕ ಬೋಧಕರು ಮತ್ತು ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿಯೊಂದಿಗೆ ಸಮಾಲೋಚನೆ ನಡೆಸಿದರು. ಆತನ ಶೈಕ್ಷಣಿಕ ಜೀವನದ ಮೇಲೆ ಯಾವುದೇ ಅಡ್ಡಿ ಮಾಡುವುದಿಲ್ಲ ಎಂದು ತಿಳಿಸಿದ್ದರು. ಇದರ ಬಳಿಕ ವಿದ್ಯಾರ್ಥಿ ತನ್ನ ಹಾಸ್ಟೆಲ್ ಕೊಠಡಿಗೆ ಮರಳಿದ್ದು, ಸಂಜೆ ತಮ್ಮ ಕೊಠಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದರು.

ಘಟನೆಯ ಬಗ್ಗೆ ಐಐಟಿ ಬಾಂಬೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಸಾವಿಗೆ ಕಾರಣವಾದ ಪ್ರಕರಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಸಾಹಿಲ್ ವಾಕೋಡೆ ಆತ್ಮಹತ್ಯೆ ಬಳಿಕ ಐಐಟಿ ಪವಾಯಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದರು. ಘಟನೆಗೆ ಸಂಬಂಧಿಸಿ ಸಂಸ್ಥೆಯು ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುತ್ತಿಲ್ಲ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದರು.

ಸಾಹಿಲ್ ನನ್ನು ಒಂದು ವರ್ಷದ ಅಮಾನತು ಮಾಡುವ ಬೆದರಿಕೆ ಹಾಕಲಾಗಿದೆ. ಒಂದು ವೇಳೆ ಆತ ಅಮಾನತುಗೊಂಡಿದ್ದರೆ ಹಾಸ್ಟೆಲ್ ಖಾಲಿ ಮಾಡಿ ಕ್ಯಾಂಪಸ್‌ನ ಹೊರಗೆ ಹೋಗಬೇಕಿತ್ತು. ಇದರಿಂದ ಎಂಜಿನಿಯರಿಂಗ್ ಕೋರ್ಸ್ ಅವಧಿ ನಾಲ್ಕು ವರ್ಷಗಳಿಂದ ಐದು ವರ್ಷಗಳಿಗೆ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ವಿಸ್ತರಿಸುವ ಸಾಧ್ಯತೆಯೂ ಇತ್ತು. ಇದರ ಭಯದಿಂದ ವಾಕೋಡೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಯೋಗೇಶ್ ‌ಗೌಡ ಕೊಲೆ ಪ್ರಕರಣ; ಏಳು ಅಪರಾಧಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್

ಇದು ಮೊದಲ ಘಟನೆಯಲ್ಲ; ಈ ವರ್ಷವೊಂದರಲ್ಲೇ ನಾಲ್ಕು ಇಂತಹ ಪ್ರಕರಣಗಳು ನಡೆದಿವೆ. ಇದರ ಹಿಂದಿನ ಕಾರಣಗಳ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಕ್ಯಾಂಪಸ್‌ನಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಿದ್ದರು. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ದತ್ತಾತ್ರೇಯ ನಲವಡೆ ತಿಳಿಸಿದ್ದಾರೆ.