ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಗರ್ಭಿಣಿ ಪತ್ನಿಯ ಕತ್ತು ಹಿಸುಕಿ ಕೊಲೆ; ಭಾರತೀಯ ಯೋಧನ ಬಂಧನ

Crime News: ಯೋಧನೊಬ್ಬ ತನ್ನ 7 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯಲ್ಲಿ ನಡೆದಿದೆ. ದಂಪತಿಗಳ ನಡುವೆ ಜಗಳ ನಡೆದಿದ್ದು, ಆ ಸಮಯದಲ್ಲಿ ಯೋಧ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಯೋಧನ ಬಂಧನ

ಮುಂಬೈ, ಆ.8: ಯೋಧನೊಬ್ಬ ತನ್ನ 7 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ವಾಶಿಮ್ ಜಿಲ್ಲೆಯಲ್ಲಿ ನಡೆದಿದೆ. ತನ್ನ ಮನೆಯಲ್ಲಿ ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 28 ವರ್ಷದ ಸೈನಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಜ್ಞಾನೇಶ್ವರ್ ಮದ್ನೆ ಎಂದು ಗುರುತಿಸಲಾಗಿದ್ದು, ಆತ ಸೇನೆಯ 6 ಮರಾಠಾ ಬೆಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ. ಮೃತ ಮಹಿಳೆಯ ಕುಟುಂಬದ ದೂರಿನ ನಂತರ, ಯೋಧ ಮತ್ತು ಅವರ ಪೋಷಕರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ (Crime News).

ಗುರುವಾರ (ಆ.6) ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಪಿಯು ಕುಟುಂಬಕ್ಕೆ ಕರೆ ಮಾಡಿ, ತನ್ನ ಪತ್ನಿ ದೀಪಾಲಿ ಮನೆಯಲ್ಲಿ ಬಿದ್ದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದ್ದಾಗಿ ಮೃತಳ ಸಹೋದರ ರಾಹುಲ್ ಮಾನೆ ಹೇಳಿದ್ದಾರೆ. ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ವಾಸಿಸುವ ದೀಪಾಲಿ ಅವರ ಕುಟುಂಬವು ವಾಶಿಮ್‌ಗೆ ಧಾವಿಸಿ ಸಂಜೆ 7 ಗಂಟೆ ಸುಮಾರಿಗೆ ತಲುಪಿತು.

ಆರೋಪಿ ಮರುದಿನ ಜಮ್ಮು-ಕಾಶ್ಮೀರಕ್ಕೆ ತೆರಳಬೇಕಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿಗಳ ನಡುವೆ ಜಗಳ ನಡೆದಿದ್ದು, ಆ ಸಮಯದಲ್ಲಿ ಯೋಧ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ರೀಲ್ಸ್‌ ಗೀಳಿಗೆ ಪತ್ನಿಯನ್ನೇ ಕೊಂದ; ಬೆಂಗಳೂರಿನಿಂದ ಬಿಹಾರಕ್ಕೆ ಓಡಿ ಹೋಗಿದ್ದ ಪತಿ ಬಂಧನ

ನಂತರ ಆತ ಮಹಿಳೆಯನ್ನು ಆಂಬ್ಯುಲೆನ್ಸ್‌ನಲ್ಲಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ ಎನ್ನಲಾಗಿದೆ. ಆದರೆ, ಅಲ್ಲಿನ ವೈದ್ಯರು ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಪ್ರಕರಣದಲ್ಲಿ ಏನೋ ಸಂಶಯಾಸ್ಪದ ಸಂಗತಿ ನಡೆದಿದೆ ಎಂದು ಶಂಕಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆರೋಪಿಯು ಬೇರೊಬ್ಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಷಯವಾಗಿ ತನ್ನ ಸಹೋದರಿಗೆ ಕೆಲವು ಸಮಯದಿಂದ ಕಿರುಕುಳ ನೀಡುತ್ತಿದ್ದ ಎಂದು ಮೃತಳ ಸಹೋದರ ಆರೋಪಿಸಿದ್ದಾರೆ. ತಿಂಗಳ ಹಿಂದೆ ವಿವಾದ ಉಲ್ಬಣಗೊಂಡಿದ್ದು, ಎರಡೂ ಕುಟುಂಬಗಳು ಈ ವಿಷಯವನ್ನು ಇತ್ಯರ್ಥ ಪಡಿಸಲು ಸೇರಿದ್ದರು. ಆ ಸಮಯದಲ್ಲಿ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗಿದ್ದರೂ, ಕಿರುಕುಳ ಮುಂದುವರೆದಿದೆ ಎಂದು ಆರೋಪಿಸಲಾಗಿದೆ.

ಆಂಬ್ಯುಲೆನ್ಸ್‌ನಲ್ಲಿ ಮಹಿಳೆಯ ಮೃತದೇಹವನ್ನು ಆಸ್ಪತ್ರೆಗೆ ತರಲಾಗಿದೆ ಎಂದು ಸರ್ಕಾರಿ ಆಸ್ಪತ್ರೆಯಿಂದ ಪೊಲೀಸರಿಗೆ ಮೆಮೊ ಬಂದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಮನೀಶ್ ಠಾಕ್ರೆ ತಿಳಿಸಿದ್ದಾರೆ. ನಮ್ಮ ತಂಡ ಆಸ್ಪತ್ರೆಗೆ ತಲುಪಿದಾಗ, ಏನೋ ತಪ್ಪಾಗಿದೆ ಎಂಬುದು ಸ್ಪಷ್ಟವಾಗಿತ್ತು. ಮಹಿಳೆಯ ಕುತ್ತಿಗೆಯ ಮೇಲೆ ಗಾಯದ ಗುರುತುಗಳು ಗೋಚರಿಸುತ್ತಿದ್ದವು ಎಂದು ಅಧಿಕಾರಿ ತಿಳಿಸಿದ್ದಾರೆ. ಮೃತ ಮಹಿಳೆಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಯೋಧ ಹಾಗೂ ಆತನ ಪೋಷಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.