ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕೆನಡಾದಲ್ಲಿ ನೆಲಮಂಗಲ ಮೂಲದ ವ್ಯಕ್ತಿಯ ಮೇಲೆ ಗುಂಡಿನ ದಾಳಿ; ಸ್ಥಳದಲ್ಲಿಯೇ ಮೃತಪಟ್ಟ ಕನ್ನಡಿಗ

ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ 37 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯನ್ನು ಚಂದನ್ ಕುಮಾರ್ ಎಂದು ಗುರುತಿಸಲಾಗಿದ್ದು, ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದವರಾಗಿದ್ದಾರೆ. ಕೆಲಸದ ನಿಮಿತ್ತ ಕೆನಡಾದಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.

ಕೆನಡಾದಲ್ಲಿ ನೆಲಮಂಗಲ ಮೂಲದ  ವ್ಯಕ್ತಿಯ ಮೇಲೆ ಗುಂಡಿನ ದಾಳಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Feb 9, 2026 4:50 PM

ಒಟ್ಟಾವಾ: ಕೆನಡಾದಲ್ಲಿ (Canada) ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ 37 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯನ್ನು (Shoot Out Case) ಚಂದನ್ ಕುಮಾರ್ ಎಂದು ಗುರುತಿಸಲಾಗಿದ್ದು, ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದವರಾಗಿದ್ದಾರೆ. ಕೆಲಸದ ನಿಮಿತ್ತ ಕೆನಡಾದಲ್ಲಿ ವಾಸವಿದ್ದರು. ಟೊರೊಂಟೊ ಪೊಲೀಸರ ಅಧಿಕೃತ ಪ್ರಕಟಣೆಯ ಪ್ರಕಾರ, ಶನಿವಾರ ಮಧ್ಯಾಹ್ನ ರೆಕ್ಸ್‌ಡೇಲ್ ಬೌಲೆವಾರ್ಡ್ ಮತ್ತು ಹೆದ್ದಾರಿ 27 ರ ಬಳಿಯ ವುಡ್‌ಬೈನ್ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಪ್ರದೇಶದಲ್ಲಿ ಈ ದಾಳಿ ನಡೆದಿದೆ.

ಎಲ್ ಅಂಡ್ ಟಿ (L&T) ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ನಿನ್ನೆ (ಫೆ.8) ಚಂದನ್ ಕೆನಡಾದ ವುಡ್‌ಬೈನ್ ಮಾಲ್ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ದುಷ್ಕರ್ಮಿಗಳು ಗುಂಡಿನ ಸುರಿಮಳೆ ಸುರಿಸಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಮಾಲ್​ ಹೊರಗೆ ತಮ್ಮ ಕಾರಿನಲ್ಲಿ ಕುಳಿತು ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ಓರ್ವ ವ್ಯಕ್ತಿಗೆ 5-6 ಬಾರಿ ಗುಂಡು ಹಾರಿಸಿದ ಶಬ್ಧ ಕೇಳಿತ್ತಂತೆ. ಈ ವೇಳೆ ಕಾರಿನ ಕನ್ನಡಿಯ ಮೂಲಕ ನೋಡಿದಾಗ ವ್ಯಕ್ತಿಯೊಬ್ಬ ಗನ್ ಹಿಡಿದು ನಿಂತಿದ್ದೂ ಕಾಣಿಸಿತೆಂದು ಕೆನಡಾದ ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ. ಘಟನೆಯ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಕೊಲೆ ತನಿಖೆ ಆರಂಭವಾಗಿದ್ದು, ಶಂಕಿತರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಚಂದನ್ ತಂದೆ ನಂದಕುಮಾರ್ ಅವರು ನಿವೃತ್ತ ಶಿಕ್ಷಕರಾಗಿದ್ದು, ತಾಯಿ ಹಾಗೂ ಕುಟುಂಬದವರು ತ್ಯಾಮಗೊಂಡ್ಲು ಗ್ರಾಮದಲ್ಲೇ ವಾಸಿಸುತ್ತಿದ್ದಾರೆ. ಕೆನಡಾದಲ್ಲಿ ಘಟನೆ ನಡೆದ ತಕ್ಷಣ ಅಲ್ಲಿನ ಪೊಲೀಸರು ಚಂದನ್ ತಂದೆಯನ್ನು ಸಂಪರ್ಕಿಸಿ ವಿಷಯವನ್ನು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೇಯ ಕೃತ್ಯ; ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅಮೆರಿಕದ ಟೆಕ್ಸಾಸ್‌ನ ಹೂಸ್ಟನ್‌ನಲ್ಲಿ ಕರ್ನಾಟಕ ಮೂಲದ 50 ವರ್ಷದ ಚಂದ್ರ ಮೌಳಿ ನಾಗಮಲ್ಲಯ್ಯ ಎಂಬ ಕನ್ನಡಿಗನನ್ನು ಕ್ಯೂಬಾದ ದಾಖಲೆರಹಿತ ವಲಸಿಗನೊಬ್ಬ ಕೊಲೆ ಮಾಡಿದ್ದ. ಸೆಪ್ಟೆಂಬರ್ 10ರಂದು ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ಈ ಕೃತ್ಯ ನಡೆದಿದ್ದು, ಆರೋಪಿಯನ್ನು 37 ವರ್ಷದ ಯೋರ್ಡಾನಿಸ್ ಕೋಬೋಸ್-ಮಾರ್ಟಿನೆಜ್ ಎಂದು ಗುರುತಿಸಲಾಗಿದೆ. 18 ವರ್ಷದ ಮಗ ಹಾಗೂ ಪತ್ನಿಯ ಎದರಲ್ಲೇ ದುರ್ಘಟನೆ ನಡೆದಿತ್ತು